Advertisement
ಹೌದು, ಕೃಷ್ಣ ಐತಿಹಾಸಿಕ ಸಿನಿಮಾವೊಂದರಲ್ಲಿ ನಟಿಸಲಿದ್ದಾರೆ. ಅವರ ಹೊಸ ಚಿತ್ರದ ಹೆಸರು “ಹಲಗಲಿ’. ಬ್ರಿಟಿಷರ ವಿರುದ್ಧ ಮೊದಲ ಗೆರಿಲ್ಲಾ ಯುದ್ಧ ಮಾಡಿದ ನಮ್ಮದೇ ರಾಜ್ಯದ ಹಲಗಲಿಯ ಊರಿನ ಬೇಡರ ಕುರಿತು ಕೇಳಿರಬಹುದು. ಈಗ ಆ ವೀರರ ಆಚಾರ- ವಿಚಾರ ಹಾಗೂ ಅವರ ಹೋರಾಟದ ಹೆಜ್ಜೆ ಗುರುತುಗಳನ್ನು ತೆರೆ ಮೇಲೆ ತರುವುದಕ್ಕೆ ಹೊರಟಿದ್ದಾರೆ ನಿರ್ದೇಶಕ ಸುಕೇಶ್ ಡಿ. ಕೆ.
Related Articles
Advertisement
ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಮೂಡಿ ಬರಲಿರುವ 80 ಕೋಟಿ ವೆಚ್ಚದಲ್ಲಿ ತಯಾರಾಗುತ್ತಿದೆ ಎನ್ನಲಾಗಿದೆ. ಚಿತ್ರಕ್ಕಾಗಿ ಬಹುದೊಡ್ಡ ತಾಂತ್ರಿಕ ತಂಡ ಕೆಲಸ ಮಾಡುತ್ತಿದ್ದು, ಇತ್ತೀಚೆಗಷ್ಟೆ ತೆರೆಕಂಡು ಸೂರ್ಪ ಹಿಟ್ ಆದ ಹನುಮಾನ್, ಕಲ್ಕಿ, ನಾ ಸಾಮಿರಂಗ, ಮಂಗಳವಾರಂ ಮುಂತಾದ ಚಿತ್ರಗಳಿಗೆ ಕ್ಯಾಮೆರಾ ಹಿಡಿದಿರುವ ದಶರಥಿ ಶಿವೇಂದ್ರ ಹಾಗೂ ಅತ್ಯುತ್ತಮ ಸಾಯಿ ಶ್ರೀರಾಮ್ ಅವರು ಹಲಗಲಿ ಚಿತ್ರದ ಮೂಲಕ ಕನ್ನಡಕ್ಕೆ ಬಂದಿದ್ದಾರೆ.
ಚಿತ್ರದಲ್ಲಿ ಹೆಸರಾಂತ ಬಹು ಭಾಷೆಯ ಕಲಾವಿದರು ಕಾಣಿಸಿ ಕೊಳ್ಳುತ್ತಿದ್ದಾರೆ. ಇನ್ನೂ ಕನ್ನಡದ ವಾಸುಕಿ ವೈಭವ್ ಸಂಗೀತ ಇದೆ. ವಿಕ್ರಮ್ ಮೋರ್ ಅವರ ಸಾಹಸ “ಹಲಗಲಿ’ ಚಿತ್ರಕ್ಕಿದೆ. ಚಿತ್ರಕ್ಕಾಗಿ ನಾಲ್ಕೈದು ಬೃಹತ್ ಹಳ್ಳಿಯ ಸೆಟ್ ಗಳನ್ನು ಹಾಕುತ್ತಿದ್ದು, ತಿಪಟೂರಿನಲ್ಲಿ ಹಲಗಲಿ ಊರಿನ ಸೆಟ್ ಅನ್ನೇ ವಿಶೇಷವಾಗಿ ನಿರ್ಮಿಸಲಾಗುತ್ತಿದೆ.