Advertisement

ನವೆಂಬರ್ 11ರಂದು ಕೃಷ್ಣ ಅಭಿನಯದ ‘ದಿಲ್ ಪಸಂದ್’ ಬಿಡುಗಡೆ

02:45 PM Sep 12, 2022 | Team Udayavani |

ಡಾರ್ಲಿಂಗ್‌ ಕೃಷ್ಣ ನಾಯಕರಾಗಿ ನಟಿಸಿರುವ “ಲಕ್ಕಿಮ್ಯಾನ್‌’ ಚಿತ್ರ ಮೊನ್ನೆಯಷ್ಟೇ ಬಿಡುಗಡೆಯಾಗಿ, ಮೆಚ್ಚುಗೆ ಪಡೆಯುತ್ತಿದೆ. ಈಗ ಅವರ ಮತ್ತೂಂದು ಚಿತ್ರ ತನ್ನ ಬಿಡುಗಡೆಯ ದಿನಾಂಕ ಘೋಷಿಸಿದೆ. ಅದು “ದಿಲ್‌ ಪಸಂದ್‌’. ಈ ಚಿತ್ರ ನ.11 ರಂದು ಬಿಡುಗಡೆಯಾಗಲಿದ್ದು, ಚಿತ್ರತಂಡ ಅಧಿಕೃತವಾಗಿ ಬಿಡುಗಡೆಯನ್ನು ಘೋಷಿಸಿದೆ.

Advertisement

ರಶ್ಮಿ ಫಿಲಂಸ್‌ ನಿರ್ಮಿಸಿರುವ ಈ ಚಿತ್ರವನ್ನು ಶಿವತೇಜಸ್‌ ನಿರ್ದೇಶಿಸಿದ್ದಾರೆ. ಪ್ರೇಮ ಕಥೆಯೊಂದಿಗೆ, ಕೌಟುಂಬಿಕ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಬೆಂಗಳೂರಿನಲ್ಲಿ ಬಹುತೇಕ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿದ್ದು, ಮಾಸಾಂತ್ಯಕ್ಕೆ ಟೀಸರ್‌ ಬಿಡುಗಡೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ:ನವರಾತ್ರಿಗೆ ʼಕುಡ್ಲದ ಪಿಲಿ ಪರ್ಬ’

ನಾಲ್ಕು ಹಾಡುಗಳಿಗೆ ಮ್ಯೂಸಿಕ್‌ ಮಾಂತ್ರಿಕ ಅರ್ಜುನ್‌ ಜನ್ಯ ಅವರ ಸಂಗೀತ ನಿರ್ದೇಶನವಿದೆ. ಶೇಖರ್‌ ಚಂದ್ರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್‌ ಸಂಕಲನ, ವಿನೋದ್‌ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಡಾರ್ಲಿಂಗ್‌ ಕೃಷ್ಣ ಅವರಿಗೆ ನಾಯಕಿಯಾಗಿ ನಿಶ್ವಿ‌ಕಾ ನಾಯ್ಡು ಅಭಿನಯಿಸಿದ್ದಾರೆ. ಮೇಘಾ ಶೆಟ್ಟಿ, ಸಾಧು ಕೋಕಿಲ, ರಂಗಾಯಣ ರಘು, ತಬಲ ನಾಣಿ, ಗಿರಿ, ಅರುಣಾ ಬಾಲರಾಜ್‌ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next