Advertisement

Darshan Case; ಒತ್ತಡಕ್ಕೆ ಒಳಗಾಗಬೇಡಿ: ಪೊಲೀಸರಿಗೆ ಸಿಎಂ, ಡಿಸಿಎಂ

12:27 AM Jun 18, 2024 | Team Udayavani |

ಬೆಂಗಳೂರು: ನಟ ದರ್ಶನ್‌ ಪ್ರಕರಣದಲ್ಲಿ ಕಾನೂನು ಪ್ರಕಾರ ಮುಂದುವರಿಯಿರಿ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪೊಲೀಸರಿಗೆ ಆದೇಶಿಸಿದ್ದಾರೆ.

Advertisement

ಈ ಪ್ರಕರಣದಲ್ಲಿ ರಾಜಕೀಯ ಒತ್ತಡವಿದೆ ಎಂಬ ವದಂತಿ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಅಂತರ ಕಾಯ್ದುಕೊಳ್ಳುವುದಕ್ಕೆ ಸಿದ್ದರಾಮಯ್ಯ ನಿರ್ಧರಿಸಿದ್ದು, ಯಾವುದೇ ಒತ್ತಡಕ್ಕೆ ಮಣಿಯದೆ ಕಾನೂನು ಪ್ರಕಾರ ನಡೆದುಕೊಳ್ಳಿ ಎಂದಿದ್ದಾರೆ.

ಈ ಪ್ರಕರಣದಲ್ಲಿ ಸಾಂದರ್ಭಿಕ ಹಾಗೂ ವೈಜ್ಞಾನಿಕ ಸಾಕ್ಷಿಗಳು ದರ್ಶನ್‌ ವಿರುದ್ಧ ಇವೆ. ಆತ ಕೃತ್ಯದಲ್ಲಿ ಭಾಗಿಯಾಗಿದ್ದಾನೆಂಬುದಕ್ಕೆ ಪೂರಕವಾದ ದಾಖಲೆಗಳು ಪೊಲೀಸರಿಗೆ ಲಭ್ಯವಾಗಿವೆ. ಇವೆಲ್ಲದರ ಮಧ್ಯೆ ಪೊಲೀಸರ ಮೇಲೆ ರಾಜಕೀಯ ಒತ್ತಡ ಇದೆ ಎಂಬ ವದಂತಿ ಹರಿದಾಡತೊಡಗಿದ್ದವು. ವಿಪಕ್ಷಗಳು ಮೇಲಿಂದ ಮೇಲೆ ಪಾರದರ್ಶಕ ತನಿಖೆಗೆ ಆಗ್ರಹಿಸಿದ್ದವು.

ದರ್ಶನ್‌ ಪ್ರಕರಣದಲ್ಲಿ ಯಾರ ರಕ್ಷಣೆಯೂ ಇಲ್ಲ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸು ವುದಾಗಲಿ ಯಾರ ಬಗ್ಗೆಯೂ ಮೃದುಧೋರಣೆ ಆಗಲಿ ಇಲ್ಲ.ಮುಲಾಜಿಲ್ಲದೆ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ತನಿಖೆ ಆಗುವವರೆಗೂ ಬಹಿರಂಗ ಹೇಳಿಕೆ ನೀಡಲಾ ಗದು. ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ನಾನು ಮತ್ತು ಮುಖ್ಯಮಂತ್ರಿ ಈಗಾಗಲೇ ಹೇಳಿದ್ದೇವೆ. ಪೊಲೀಸರು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

Advertisement

ಇನ್‌ಸ್ಪೆಕ್ಟರ್‌ ಗಿರೀಶ್‌ ನಾಯ್ಕ… ಮರುನೇಮಕ ಕುರಿತು ಮಾತನಾಡಿ, ಆಡಳಿತಾತ್ಮಕವಾಗಿ ಏನು ಅಗತ್ಯ ಇದೆಯೋ ಅದನ್ನು ಮಾಡುತ್ತೇವೆ. ಸಮರ್ಥರು ಯಾರಿದ್ದಾ ರೆ ಎಂಬುದನ್ನು ಪರಿಗಣಿಸಿ ಅಧಿಕಾರಿಗಳೇ ಮರುನೇಮಕ ಮಾಡಿಕೊಳ್ಳುತ್ತಾರೆ. ನಾವ್ಯಾರೂ ಸೂಚನೆ ಕೊಡುವುದಿಲ್ಲ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next