Advertisement
ʼಕಾಟೇರʼ ಯಶಸ್ಸಿನ ಬಳಿಕ ನಟ ದರ್ಶನ್ ಪ್ರಕಾಶ್ ವೀರ್ ಆಕ್ಷನ್ ಕಟ್ ಹೇಳುತ್ತಿರುವ ʼಡೆವಿಲ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಪ್ರಕಾಶ್ ದರ್ಶನ್ ಜೊತೆ ʼತಾರಕ್ʼ ಸಿನಿಮಾ ಮಾಡಿದ್ದರು.
Related Articles
Advertisement
ಅಂದಹಾಗೆ ಈಗಾಗಲೇ ʼಡೆವಿಲ್ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಶೀಘ್ರದಲ್ಲಿ ಎರಡನೇ ಹಂತದ ಚಿತ್ರೀಕರಣ ಆರಂಭಗೊಳ್ಳುವ ಸಾಧ್ಯತೆಯಿದೆ.
ಮಾಸ್ ಸಿನಿಮಾವೆಂದು ಹೇಳಲಾಗುತ್ತಿರುವ ಈ ಸಿನಿಮಾ ಇದೇ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ರಿಲೀಸ್ ಆಗುವ ಸಾಧ್ಯತೆಯಿದೆ.
ʼಡೆವಿಲ್ʼ ಗೆ ಸುಧಾಕರ್ ಛಾಯಾಗ್ರಹಣ ಹಾಗೂ ಅಜನೀಶ್ ಲೋಕನಾಥ್ ಸಂಗೀತ ಇರಲಿದೆ.