ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್ (Actor Darshan) ಆಸ್ಪತ್ರೆಗೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬೆನ್ನುನೋವಿನಿಂದ ಬಳಲುತ್ತಿದ್ದ ದರ್ಶನ್ ಅವರಿಗೆ ಹೈಕೋಟ್ ಮೆಡಿಕಲ್ ಗ್ರೌಂಡ್ಸ್ ಮೇಲೆ ಮಧ್ಯಂತರ ಜಾಮೀನು ನೀಡಿತ್ತು. ಇದಾದ ಬಳಿಕ ದರ್ಶನ್ ಸಲ್ಲಿಸಿದ್ದ ಪೂರ್ಣ ಪ್ರಮಾಣ ಜಾಮೀನು ಅರ್ಜಿಯ ವಿಚಾರಣೆ ನಡೆದು ಡಿ.13 ರಂದು ನಟ ದರ್ಶನ್ ಸೇರಿ ಏಳು ಆರೋಪಿಗಳಿಗೆ ಜಾಮೀನು ನೀಡಿ ಹೈಕೋರ್ಟ್ ಪೀಠ ಆದೇಶಿಸಿತು.
ಡಿ. 16 ರಂದು ವೈದ್ಯರಿಂದ ಅನುಮತಿ ಪಡೆದು ಆಸ್ಪತ್ರೆಯಿಂದ ಹೊರಬಂದು ಕೋರ್ಟ್ಗೆ ಹಾಜರಾಗಿದ್ದರು. ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಿಂದ ಸೆಷನ್ಸ್ ಕೋರ್ಟ್ಗೆ ತೆರಳಿದ್ದ ಅವರು ಶ್ಯೂರಿಟಿ ಬಾಂಡ್ಗೆ ಸಹಿ ಹಾಕಿದ್ದರು.
ಬುಧವಾರ (ಡಿ.18 ರಂದು) ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ. ಒಂದೂವರೆ ತಿಂಗಳ ಬಳಿಕ ಆಸ್ಪತ್ರೆಯಿಂದ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಗನ ಹೆಗಲ ಮೇಲೆ ಕೈಯಿಟ್ಟುಕೊಂಡು ಕಾರಿನೊಳಗೆ ಕೂತು ದರ್ಶನ್ ಆಸ್ಪತ್ರೆಯಿಂದ ತೆರಳಿದ್ದಾರೆ.
ಬೆನ್ನುನೋವಿನಿಂದ ಸರ್ಜರಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಆದರೆ ದರ್ಶನ್ ಸದ್ಯ ಸರ್ಜರಿ ಮಾಡಿಸದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮಂಗಳವಾರ(ಡಿ.17ರಂದು) ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆ ಆಗಿದ್ದರು.