Advertisement

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

12:31 PM May 16, 2024 | Team Udayavani |

ಕಾಡಾನೆ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದ ಆನೆ ಅರ್ಜುನನಿಗೆ ಸಮಾಧಿ ನಿರ್ಮಿಸಬೇಕೆಂದು ಕೆಲವು ದಿನಗಳ ಹಿಂದಷ್ಟೇ ದರ್ಶನ್‌ ಹೇಳಿದ್ದರು. ಈಗ ಅವರ ಅಭಿಮಾನಿಗಳು ತಾತ್ಕಾಲಿಕವಾಗಿ ಸಮಾಧಿ ನಿರ್ಮಿಸಲು ಮುಂದಾಗಿದ್ದಾರೆ.

Advertisement

ಮಳೆಗೆ ಮಣ್ಣು ಕೊಚ್ಚಿ ಹೋಗುವುದರಿಂದ ಅದನ್ನು ತಡೆಯಲು ಶೆಡ್‌ ನಿರ್ಮಿಸಲು ಮುಂದಾಗಿದ್ದು, ಅಭಿಮಾನಿಗಳ ಈ ಕಾರ್ಯಕ್ಕೆ ದರ್ಶನ್‌ ಕೂಡಾ ಜೈ ಜೋಡಿಸಿದ್ದಾರೆನ್ನಲಾಗಿದೆ.  ಶೆಡ್‌ ನಿರ್ಮಿಸಲು ನಟ ದರ್ಶನ್‌ ಕಲ್ಲುಗಳನ್ನು ವ್ಯವಸ್ಥೆ ಮಾಡುತ್ತಿದ್ದಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ದರ್ಶನ್‌, “ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾ ಚರಣೆಯಲ್ಲಿ ಸಾವನ್ನಪ್ಪಿ ರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ.ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು’ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next