Advertisement

ಮೈಸೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ ; ತಡವಾಗಿ ಬೆಳಕಿಗೆ ಬಂದ ಘಟನೆ

11:25 AM Sep 18, 2021 | Team Udayavani |

ಮೈಸೂರು: ಜಿಲ್ಲೆಯ ಫಾರ್ಮ್ ಹೌಸ್ ಒಂದರಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Advertisement

ಫಾರ್ಮ್ ಹೌಸ್‌ನಲ್ಲಿ ಕೆಲಸ‌ ಮಾಡಿಕೊಂಡಿದ್ದ  ಕುಟುಂಬವೊಂದರ ಅಪ್ರಾಪ್ತೆ ಮೇಲೆ ಸೋಮವಾರ ರಾತ್ರಿ ಅದೇ ತೋಟದಲ್ಲಿ ಕುದುರೆಗೆ ಲಾಳ ಹೊಡೆಯುವ ಕೆಲಸ ಮಾಡಿಕೊಂಡಿದ್ದ ಕಾರ್ಮಿಕ ಅತ್ಯಾಚಾರ ಎಸಗಿದ್ದಾನೆ.

ಘಟನೆ ಬಗ್ಗೆ ಬಾಲಕಿ ಪೋಷಕರಿಗೆ ಮೂರು ದಿನಗಳ ಬಳಿಕ ತಿಳಿಸಿದ್ದು, ಪೋಷಕರಿಗೆ ವಿಷಯ ತಿಳಿದ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಹಿಳಾ ಪೊಲೀಸ್ ಠಾಣೆ ಪೊಲೀಸರು ತಕ್ಷಣವೇ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ :ಆತಂಕಕಾರಿ ಆಫ್ಘಾನ್ : ಶಾಂಘೈ ಸಹಕಾರ ಒಕ್ಕೂಟ ಸಭೆಯಲ್ಲಿ ಪ್ರಧಾನಿ ಆತಂಕ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next