Advertisement

Renukaswamy Case: ಸೆ.12ರವರೆಗೆ ದರ್ಶನ್‌ & ಗ್ಯಾಂಗ್‌ಗೆ ಜೈಲೇ ಗತಿ

02:21 PM Sep 09, 2024 | Team Udayavani |

ಬೆಂಗಳೂರು:  ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ(Renukaswamy Case) ಜೈಲಿನಲ್ಲಿರುವ ನಟ ದರ್ಶನ್‌(Darshan) ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೋಮವಾರ(ಸೆ.9ರಂದು) ವಿಸ್ತರಣೆ ಮಾಡಲಾಗಿದೆ.

Advertisement

ವಿಡಿಯೋ ಕಾನ್ಫರೆನ್ಸ್‌ ವಿಚಾರಣೆಗೆ ಹಾಜರಾದ ಆರೋಪಿಗಳನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟಿನಲ್ಲಿ ವಿಚಾರಣೆ ನಡೆಸಿತು.

ಸೆಪ್ಟೆಂಬರ್ 12 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ. ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ 24ನೇ ಎಸಿಎಂಎಂ ಕೋರ್ಟ್‌ ಆದೇಶ ನೀಡಿದೆ.

ಇನ್ನೊಂದೆಡೆ ದರ್ಶನ್‌ ಅವರು ಚಾರ್ಜ್‌ಶೀಟ್‌ನಲ್ಲಿನ ಗೌಪ್ಯ ಮಾಹಿತಿಯನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ನಿರ್ಬಂಧವನ್ನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Advertisement

ಪ್ರಕರಣ ಸಂಬಂಧ ತನಿಖಾಧಿಕಾರಿ ಎಸಿಪಿ‌ ಚಂದನ್ ಡಿಜಿಟಲ್ ಎವಿಡೆನ್ಸ್ ಗಳಾದ ಪೆನ್ ಡ್ರೈವ್, ಸಿಡಿ, ಡಿವಿಡಿ, ಹಾರ್ಡ್ ಡಿಸ್ಕ್ ಕಂ ಪೆನ್ ಡ್ರೈವ್ ಸೇರಿ ಒಟ್ಟು 60 ಡಿಜಿಟಲ್ ಎವಿಡೆನ್ಸ್‌ಗಳನ್ನು ಕೋರ್ಟ್‌ಗೆ ಸಲ್ಲಿಸಿದ್ದಾರೆ.

ಇತ್ತೀಚೆಗೆ ಪೊಲೀಸರು ಪ್ರಕರಣ ಸಂಬಂಧ 3991 ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಸಿತ್ತು. ಕೋರ್ಟ್‌ಗೆ ಸಲ್ಲಿಕೆ ಮಾಡಿರುವ ದೋಷಾರೋಪಪಟ್ಟಿಯಲ್ಲಿ ಆರೋಪಿಗಳ ವಿರುದ್ಧ ಹಲವು ಸಾಕ್ಷ್ಯಗಳನ್ನು ಉಲ್ಲೇಖ ಮಾಡಲಾಗಿದೆ. 3 ಪ್ರತ್ಯಕ್ಷ ಸಾಕ್ಷಿಗಳಿದ್ದು, ಎಫ್​ಎಸ್​ಎಲ್​ ಮತ್ತು ಸಿಎಫ್​ಎಸ್​ಎಲ್​ನಿಂದ 8 ವರದಿಗಳಿವೆ. 27 ಜನರ 164ರ ಅಡಿಯಲ್ಲಿ ಹೇಳಿಕೆ, 161 ಅಡಿಯಲ್ಲಿ 70 ಜನರ ಹೇಳಿಕೆಯನ್ನು ಪೊಲೀಸರು  ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಜೊತೆಗೆ 59 ಜನ ಸಮಕ್ಷಮದಲ್ಲಿ ಮಹಜರು ಮಾಡಲಾಗಿದೆ. 8 ವೈದ್ಯರು, ತಹಶೀಲ್ದಾರ್‌ ಸೇರಿದಂತೆ ಸರ್ಕಾರಿ ಅಧಿಕಾರಿಗಳ ಸಾಕ್ಷಿ ಕೂಡ ಉಲ್ಲೇಖ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next