Advertisement

Actor Darshan: ಸದ್ಯಕ್ಕಿಲ್ಲ ದರ್ಶನ್‌ಗೆ ಮನೆಯೂಟದ ಭಾಗ್ಯ; ಸೆ.5ಕ್ಕೆ ವಿಚಾರಣೆ ಮುಂದೂಡಿಕೆ

01:38 PM Aug 20, 2024 | Team Udayavani |

ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌(Darshan) ಮನೆಯೂಟಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ(ಆ.20ರಂದು) ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಲಾಗಿದೆ.

Advertisement

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ತಮಗೆ ಮನೆಯೂಟ, ಹಾಸಿಗೆ, ಚಮಚ, ತಟ್ಟೆ ಸೇರಿದಂತೆ ಮನೆಯ ವಸ್ತುಗಳನ್ನು ಜೈಲಿನಲ್ಲಿ ಬಳಸಲು ಅವಕಾಶ ಕೋರಿ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ಸಂಬಂಧ ಹೈಕೋರ್ಟ್‌ನ(High Court) ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ. ಏನು ಆದೇಶ ನೀಡಿದ್ದೀರಿ ಎಂದು ನ್ಯಾಯಮೂರ್ತಿಗಳು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಜೈಲು ಅಧಿಕಾರಿಗಳು ಮೆನಯೂಟ ನಿರಾಕರಿಸಿದ್ದಾರೆ ಎಂದು ರಾಜ್ಯ ಅಭಿಯೋಜಕ ಬೆಳ್ಳಿಯಪ್ಪ ನ್ಯಾಯಮೂರ್ತಿಗಳ ಮುಂದೆ ಹೇಳಿದ್ದಾರೆ.

content-img

ವೈದ್ಯಾಧಿಕಾರಿಗಳ ವರದಿ ನೋಡಿ ವಾದಮಂಡನೆಗೆ ಸಮಯ ನೀಡುವಂತೆ ದರ್ಶನ್‌ ಪರ ವಕೀಲರು ಮನವಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸೆ.5ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ. ಅಲ್ಲಿಯವರೆಗೆ ದರ್ಶನ್ ಗೆ  ಜೈಲೂಟವೇ ಗತಿಯಾಗಿದೆ.

Advertisement

ಈ ಪ್ರಕರಣದಲ್ಲಿ ಬಂಧನವಾಗಿರುವ 17ಮಂದಿಯ ನ್ಯಾಯಾಂಗ ಬಂಧನದ ಅವಧಿಯನ್ನು ಆ.28ರವರೆಗೆ ವಿಸ್ತರಣೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.