Advertisement

ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ನಾಳೆ ಅಧಿಕಾರ ಸ್ವೀಕಾರ

09:28 PM Mar 04, 2021 | Team Udayavani |

ಬೆಂಗಳೂರು : ನಾಳೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಕೃಷಿ ಇಲಾಖೆಯ ರಾಯಭಾರಿಯಾಗಲಿದ್ದಾರೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ರಾಜ್ಯ ಕೃಷಿ ಇಲಾಖೆಯ ನೂತನ ರಾಯಭಾರಿಯಾಗಿ ಕನ್ನಡದ ಜನಪ್ರಿಯ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಧಿಕಾರ ಸ್ವೀಕಾರ ಸಮಾರಂಭ ದಿನಾಂಕ: 05-03-2021 ರಂದು ವಿಕಾಸಸೌಧ, ಬೆಂಗಳೂರಿನಲ್ಲಿ ನಡೆಯಲಿದೆ ಎಂದಿದ್ದಾರೆ.

ಕೃಷಿ ಮತ್ತು ಪ್ರಾಣಿಗಳ ಬಗ್ಗೆ ಹೆಚ್ಚು ಒಲವವನ್ನು ಹೊಂದಿರು ದರ್ಶನ್ ರಾಯಭಾರಿಯಾಗಲು ಸಂಭಾವನೆಯನ್ನು ಪಡೆದಿಲ್ಲ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next