Advertisement

ಭಕ್ತರ ಗಮನಕ್ಕೆ: ಗ್ರಹಣ ಹಿನ್ನೆಲೆ ಅ.25 ರಂದು ಧರ್ಮಸ್ಥಳದಲ್ಲಿ ದೇವರ ದರ್ಶನದ ಸಮಯ ಬದಲಾವಣೆ

02:19 PM Oct 19, 2022 | Team Udayavani |

ಧರ್ಮಸ್ಥಳ: ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಅ.25 ರಂದು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲವೆಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

Advertisement

ಸೂರ್ಯಗ್ರಹಣದ ಪ್ರಯುಕ್ತ ಮಧ್ಯಾಹ್ನ 2.30 ರಿಂದ ರಾತ್ರಿ 7.30 ರ ವರೆಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಅನ್ನಪ್ರಸಾದವು ಮಧ್ಯಾಹ್ನ 2.30 ಕ್ಕೆ ಕೊನೆಗೊಂಡು ರಾತ್ರಿ 7.30 ರ ಬಳಿಕವೆ ನಡೆಯಲಿದೆ.

ಅ.25 ರಂದು ಸಂಜೆ 5.11ಕ್ಕೆ ಗ್ರಹಣ ಸ್ವರ್ಶವಾಗಲಿದ್ದು, ಸಂಜೆ 6.28ಕ್ಕೆ ಗ್ರಹಣ ಮೋಕ್ಷವಾಗಲಿದೆ. ಅ. 26 ರಿಂದ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಇರಲಿದೆ.

Advertisement

Udayavani is now on Telegram. Click here to join our channel and stay updated with the latest news.

Next