Advertisement

Actor Darshan: ಅ.22ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ

10:09 AM Oct 17, 2024 | Team Udayavani |

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಜಾಮೀನು ಕೋರಿ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ಅ.22ರಂದು ವಿಚಾರಣೆಗೆ ಬರುವ ಸಾಧ್ಯತೆ ಯಿದೆ. ನಗರದ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಜಾಮೀನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಹೈಕೋರ್ಟ್‌ಗೆ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದಾರೆ.

Advertisement

ಬುಧ ವಾರ ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಅವರ ಏಕ ಸದಸ್ಯ ನ್ಯಾಯಪೀಠದ ಮುಂದೆ ಹಾಜರಾದ ದರ್ಶನ್‌ ಪರ ವಕೀಲ ಎಸ್‌.ಸುನಿಲ್‌ ಕುಮಾರ್‌, ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಕೋರಿ ಮೆಮೋ ಸಲ್ಲಿಸಿದರು. ಆ ಮೆಮೋ ಆಧರಿಸಿ ಅ.22ಕ್ಕೆ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲಾಗಿದೆ. 57ನೇ ಸಿಸಿಎಚ್‌ ನ್ಯಾಯಾಲವು ಸೋಮವಾರವಷ್ಟೇ ದರ್ಶನ್‌ ಮತ್ತು ಸಂಗಡಿಗರ ಜಾಮೀನು ಅರ್ಜಿ ವಜಾಗೊಳಿಸಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next