Advertisement

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

10:13 AM Nov 17, 2024 | Team Udayavani |

ಹದಿನೆಂಟನೇ ಶತಮಾನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟನಾಗಿದ್ದ ವೀರಸೇನಾನಿ ಸಂಗೊಳ್ಳಿ ರಾಯಣ್ಣನ ಸಾಹಸ ಗಾಥೆಯನ್ನು ಬೆಳ್ಳಿತೆರೆಯ ಮೇಲೆ ಅನಾವರಣಗೊಳಿಸಲಾದ ಚಿತ್ರ “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ (Krantiveera Sangolli Rayanna) 2012ರಲ್ಲಿ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಂಡಿತ್ತು.

Advertisement

ಕಿಚ್ಚ ಸುದೀಪ್‌ ಅವರು ನಿರೂಪಣೆ ಮಾಡಿದ್ದ ಈ ಚಿತ್ರದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಬ್ರಿಟಿಷರ ವಿರುದ್ದ ತೊಡೆತಟ್ಟಿ ನಿಂತ ಕೆಚ್ಚೆದೆಯ ವೀರ ಯೋಧ ಸಂಗೊಳ್ಳಿ ರಾಯಣ್ಣನಾಗಿ ಅಬ್ಬರಿಸಿದ್ದರು. ಹಿರಿಯನಟಿ ಜಯಪ್ರದ ಅವರು ಕಿತ್ತೂರು ರಾಣಿ ಚನ್ನಮ್ಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಉತ್ತರ ಕರ್ನಾಟಕದ ಆನಂದ್‌ ಬಿ.ಅಪ್ಪುಗೋಳ್‌ ಅವರು ಈ ಚಿತ್ರವನ್ನು ಬಿಗ್‌ ಬಜೆಟ್‌ ನಲ್ಲಿ ಅದ್ದೂರಿಯಾಗಿ ನಿರ್ಮಿಸಿದ್ದ ಈ ಚಿತ್ರಕ್ಕೆ ನಿರ್ದೇಶಕ ನಾಗಣ್ಣ ಅವರು ಆ್ಯಕ್ಷನ್‌ ಕಟ್‌ ಹೇಳಿದ್ದರು. ಫಿಲಂ ಫೇರ್‌ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ಸಹ ಈ ಚಿತ್ರ ತನ್ನದಾಗಿಸಿಕೊಂಡಿತ್ತು.

ಇದೀಗ ಅದೇ ಚಿತ್ರ ಆಧುನಿಕ ತಂತ್ರಜ್ಞಾನ ಸ್ಪರ್ಶದೊಂದಿಗೆ ನವೆಂಬರ್‌ 22 ರಂದು ಮರುಬಿಡುಗಡೆಯಾಗುತ್ತಿದೆ. ಇತಿಹಾಸ ನಿರ್ಮಿಸಿದ ಈ ಸ್ಟೋರಿಯನ್ನು ಎಸ್‌.ಜಿ.ಕೆ. ಫಿಲಂಸ್‌ ಮೂಲಕ ಕೆ.ಬಸವರಾಜ್‌ ಅವರು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಸ್ವಾಭಿಮಾನದ ಕಿಚ್ಚು ಹೆಚ್ಚಿಸುವ ಈ ವೀರಸೇನಾನಿಯ ಕಥೆಯನ್ನು ಆಧುನಿಕ ಟೆಕ್ನಾಲಜಿಯ ಸ್ಪರ್ಶದೊಂದಿಗೆ ದರ್ಶನ್‌ ಅಭಿಮಾನಿಗಳು ಕಣ್ತುಂಬಿಕೊಳ್ಳುವ ಅವಕಾಶ ಮತ್ತೂಮ್ಮೆ ಲಭಿಸಿದೆ. ವಿಶೇಷವಾಗಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಮಂದಿರದ ಪ್ರವೇಶ ದರದಲ್ಲಿ ಶೇ 50 ರಿಯಾಯಿತಿ ಇರುತ್ತದೆ.

ನಿಖೀತಾ ತುಕ್ರಾಲ್‌ ಈ ಚಿತ್ರದ ನಾಯಕಿಯಾಗಿ ನಟಿಸಿದ್ದು, ಶಶಿಕುಮಾರ್‌, ಮಾಳವಿಕ ಅವಿನಾಶ್‌, ರಮೇಶ್‌ ಭಟ್, ದೊಡ್ಡಣ್ಣ, ಶ್ರೀನಿವಾಸ ಮೂರ್ತಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೇಶವಾದಿತ್ಯ ಅವರ ಚಿತ್ರಕಥೆ ಹಾಗೂ ಸಂಭಾಷಣೆ, ರಮೇಶ್‌ ಬಾಬು ಅವರ ಛಾಯಾಗ್ರಹಣ, ಯಶೋವರ್ಧನ್‌, ಹರಿಕೃಷ್ಣ ಅವರ ಸಂಗೀತ ಸಂಯೋಜನೆ, ದೀಪು ಅವರ ಸಂಕಲನ, ರವಿವರ್ಮ, ಪಳನಿರಾಜ್‌ ಅವರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next