Advertisement

ಜಿಲ್ಲೆಯಾದ್ಯಂತ ಸರಳ ದಸರಾ: ಜಿಲ್ಲಾಧಿಕಾರಿ ಆದೇಶ

02:15 AM Oct 18, 2020 | sudhir |

ಮಂಗಳೂರು: ಕೋವಿಡ್‌-19 ವೈರಾಣು ಸೋಂಕು ವ್ಯಾಪಕವಾಗುತ್ತಿರುವುದರಿಂದ ಅ. 17ರಿಂದ 26ರ ವರೆಗೆ ಜಿಲ್ಲೆಯಾದ್ಯಂತ ದಸರಾವನ್ನು ಸಾರ್ವಜನಿಕರು ಅತ್ಯಂತ ಸರಳವಾಗಿ, 100ಕ್ಕಿಂತ ಹೆಚ್ಚು ಜನರು ಒಂದೆಡೆ ಸೇರದಂತೆ ಆಚರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.

Advertisement

ಸಾಮಾಜಿಕ ಅಂತರವಿಲ್ಲದೆ ನಡೆಸಲಾಗುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಕಾರ್ಯಕ್ರಮದ ಆಯೋಜಕರು, ದೇವಸ್ಥಾನದ ಆಡಳಿತಾಧಿಕಾರಿಗಳು ಮುಂಚಿತವಾಗಿ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಅನುಮತಿ ಪಡೆಯಬೇಕು. ಕೋವಿಡ್‌-19 ಮಾರ್ಗಸೂಚಿಗಳು ಉಲ್ಲಂಘನೆ ಯಾದಲ್ಲಿ ಕಾರ್ಯಕ್ರಮದ ಆಯೋಜಕರು, ದೇವಸ್ಥಾನದ ಆಡಳಿತಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದಿದ್ದಾರೆ ಈ ಮಾರ್ಗಸೂಚಿಗಳು ನವರಾತ್ರಿ ಹಾಗೂ ದುರ್ಗಾ ಪೂಜೆಯ ಆಚರಣೆಗೂ ಅನ್ವಯವಾಗುತ್ತದೆ.

ಹುಲಿ ವೇಷಗಳಿಗೆ ಸೀಮಿತ ಅನುಮತಿ
ದಸರಾ ಸಂದರ್ಭ ದೇವಸ್ಥಾನದ ಆವರಣದೊಳಗೆ ಮಾತ್ರ ಗರಿಷ್ಠ 10 ಹುಲಿ ವೇಷಧಾರಿಗಳಿಗೆ ನಿಗದಿತ ಕಾಲಮಿತಿಯೊಳಗೆ ಹರಕೆ ಅರ್ಪಿಸಲು ಅನುಮತಿ ನೀಡ ಲಾಗಿದೆ; ಹೊರಗಡೆ ಎಲ್ಲೂ ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next