ಪುಣೆ: ಪುಣೆ ತುಳುಕೂಟದ ವತಿಯಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಹಾಗೂ ದಾಂಡಿಯಾ ಕಾರ್ಯಕ್ರಮವು ಅ. 13ರಂದು ಕರ್ವೆ ನಗರದ ಹೊಟೇಲ್ ರತ್ನಾ ವೆಜ್ ಸಭಾಂಗಣದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಸಂಘದ ಅಧ್ಯಕ್ಷ ಮೋಹನ್ ಶೆಟ್ಟಿ ಎಣ್ಣೆಹೊಳೆ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುಣೆ ಇವರಿಂದ ಭಜನ ಕಾರ್ಯಕ್ರಮ ನೆರವೇರಿತು. ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗದ ಸದಸ್ಯೆಯರು ಹಾಗೂ ಯುವ ವಿಭಾಗದ ಸದಸ್ಯರು ದೇವರಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಬಳಿಕ ನಡೆದ ದಾಂಡಿಯಾ ನೃತ್ಯ ಕಾರ್ಯಕ್ರಮದಲ್ಲಿ ಮಹಿಳೆಯರು, ಪುರುಷರು ಹಾಗೂ ಮಕ್ಕಳೆಲ್ಲರೂ ಸೇರಿ ಹೆಜ್ಜೆ ಹಾಕಿದರು. ಭತ್ತದ ತೆನೆಗಳಿಗೆ ಪೂಜೆ ಸಲ್ಲಿಸಿ ಸೇರಿದ್ದ ಭಕ್ತಾದಿಗಳಿಗೆ ವಿತರಿಸಲಾಯಿತು. ಈ ಸಂದರ್ಭ ನೀಟ್ ಪಿಜಿ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ದೇಶದಲ್ಲೇ 4ನೇ ಸ್ಥಾನ ಗಳಿಸಿದ ಡಾ|ಹರ್ಷಿತಾ ಹರೀಶ್ ಶೆಟ್ಟಿ ಅವರನ್ನು ಸಂಘದ ವತಿಯಿಂದ ಸಮ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಗರ ಸೇವಕರಾದ ಸಚಿನ್ ದೊಡ್ಕೆ, ಸುಜಾತಾ ಸದಾನಂದ ಶೆಟ್ಟಿ, ಸುಶೀಲ್ ಮೆಂಗ್ಡೆ, ಸಾಹಿಲಿ ತಾಯಿ ವಾಂಝಲೆ, ಸಮಾಜ ಸೇವಕ ಮಾಣಿಕ್ ರಾವ್ ದುಧಾನೆ, ಪುಣೆ ತುಳುಕೂಟದ ಸ್ಥಾಪಕಾಧ್ಯಕ್ಷ ಜಯ ಕೆ. ಶೆಟ್ಟಿ, ಶ್ರೀ ಗುರುದೇವಾ ಸೇವಾ ಬಳಗ ಪುಣೆ ಅಧ್ಯಕ್ಷ ಪ್ರಭಾಕರ ಶೆಟ್ಟಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪುಣೆ ಬಂಟರ ಸಂಘದ ಗೌರವ ಕೋಶಾಧಿಕಾರಿ ಎರ್ಮಾಳ್ ಚಂದ್ರಹಾಸ್ ಶೆಟ್ಟಿ, ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ತೂರು, ಯಕ್ಷಗಾನ ನಾಟ್ಯಗುರು ಮದಂಗಲ್ಲು ಆನಂದ ಭಟ್, ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್. ಶೆಟ್ಟಿ ಮತ್ತು ಸದಸ್ಯರು, ಪುಣೆ ಬಂಟರ ಸಂಘದ ಯುವ ವಿಭಾಗದ ಕಾರ್ಯಾಧ್ಯಕ್ಷ ಯಶ್‌ರಾಜ್ ಶೆಟ್ಟಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ತುಳು-ಕನ್ನಡಿಗರು ಪಾಲ್ಗೊಂಡಿದ್ದರು.
ಕಾರ್ಯಕ್ರಮದ ಸಭಾಂಗಣ ಹಾಗೂ ಭೋಜನ ವ್ಯವಸ್ಥೆಯನ್ನು ಹೊಟೇಲ್ ರತ್ನಾ ವೆಜ್‌ನ ಮಾಲಕರಾದ ಪುಣೆ ಬಂಟರ ಸಂಘದ ಗೌರವ ಕೋಶಾಧಿಕಾರಿ ಎರ್ಮಾಳ್ ಚಂದ್ರಹಾಸ ಶೆಟ್ಟಿ ಪ್ರಾಯೋಜಿಸಿದರು. ಶ್ರೀದೇವಿಯ ಅಲಂಕೃತ ಮಂಟಪವನ್ನು ಮಹಾಗಣಪತಿ ಯಕ್ಷಗಾನ ಮಂಡಳಿಯ ಅಧ್ಯಕ್ಷ ಪ್ರವೀಣ್ ಶೆಟ್ಟಿ ಪ್ರಾಯೋಜಿಸಿದರು. ಅತಿಥಿಗಳನ್ನು ಹಾಗೂ ಪ್ರಯೋಜಕರನ್ನು ಸಂಘದ ವತಿಯಿಂದ ಗೌರವಿಸಲಾಯಿತು.
ಸಂಘದ ಗೌರವಾಧ್ಯಕ್ಷ ತಾರಾನಾಥ ರೈ ಮೇಗಿನಗುತ್ತು, ಅಧ್ಯಕ್ಷರಾದ ಮೋಹನ್ ಶೆಟ್ಟಿ ಎಣ್ಣೆಹೊಳೆ, ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಎಣ್ಣೆಹೊಳೆ, ಕೋಶಾಧಿಕಾರಿ ದಿವಾಕರ ಶೆಟ್ಟಿ ಮಾಣಿಬೆಟ್ಟು ಮತ್ತು ಪದಾಧಿಕಾರಿಗಳು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಜಾತಾ ಡಿ. ಶೆಟ್ಟಿ ಮತ್ತು ಸದಸ್ಯರು, ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾಯವಾದಿ ರೋಹನ್ ಪಿ. ಶೆಟ್ಟಿ ಮತ್ತು ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
–ಚಿತ್ರ-ವರದಿ: ಕಿರಣ್ ಬಿ. ರೈ ಕರ್ನೂರು