Advertisement

ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಗಜಪಯಣಕ್ಕೆ ಚಾಲನೆ

07:25 AM Aug 13, 2017 | Team Udayavani |

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಥಮ ಹೆಜ್ಜೆ, ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಗಜಪಯಣಕ್ಕೆ ಶನಿವಾರ ಚಾಲನೆ ನೀಡಲಾಯಿತು. ಆದರೆ, ಚಾಲನೆ ನೀಡುವ ವೇಳೆ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಶೂ ಧರಿಸಿದ್ದುದು ವಿವಾದಕ್ಕೆ ಕಾರಣವಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಟಾಗಿಲು ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ಶನಿವಾರ ಗಜಪಯಣ ಕಾರ್ಯಕ್ರಮ ನೆರವೇರಿತು.

Advertisement

ಶಾಸೊOಉàಕ್ತವಾಗಿ ನಡೆದ ಪೂಜಾ ಕಾರ್ಯದಲ್ಲಿ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಬರಿಗಾಲಲ್ಲಿ ನಿಂತು ಪೂಜೆ ಸಲ್ಲಿಸಿದರು. ಬೆಳಗ್ಗೆ 11ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ 20 ನಿಮಿಷತಡವಾಗಿ ಬಂದ ಸಚಿವರು, ನೇರವಾಗಿ ಅರ್ಜುನ ನೇತೃತ್ವದ ಗಜಪಡೆಗೆ ಪುಷ್ಪಾರ್ಚನೆ ಮಾಡಿ, ಜ್ಯೋತಿ ಬೆಳಗಿಸಿ ಗಜಪಯಣಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ಆದರೆ, ಈ ವೇಳೆ ಸಚಿವರು ತಮ್ಮ ಶೂ ಬಿಚ್ಚದೆ ಪೂಜಾ ಕಾರ್ಯದಲ್ಲಿ ತೊಡಗಿದ್ದು, ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಯಿತು.

Advertisement

Udayavani is now on Telegram. Click here to join our channel and stay updated with the latest news.

Next