Advertisement
ಆ.12ರಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಟಾಗಿಲು ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಬಳಿ ನಡೆದ ಗಜಪಯಣ ಕಾರ್ಯಕ್ರಮದ ಮೂಲಕ ಕರೆತರಲಾದ ಮೊದಲ ತಂಡದ ಎಂಟು ಆನೆಗಳು ಇಲವಾಲದ ಅಲೋಕದಲ್ಲಿ ಬೀಡುಬಿಟ್ಟಿದ್ದವು. ಗುರುವಾರ ಬೆಳಗ್ಗೆ ಆನೆಗಳ ಮೈತೊಳೆದ ನಂತರ ಲಾರಿಗಳಲ್ಲಿ ಅಶೋಕಪುರಂನ ಅರಣ್ಯಭವನಕ್ಕೆ ಕರೆತಂದು ಅರಣ್ಯಾಧಿಕಾರಿಗಳು ಪೂಜೆ ಸಲ್ಲಿಸಿದ ನಂತರ ಕಾಲ್ನಡಿಗೆಯಲ್ಲಿ ಅರಮನೆಗೆ ಕರೆತರಲಾಯಿತು.
Related Articles
Advertisement
ತಾಂಬೂಲ ನೀಡಿಕೆ: ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಿಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ, ಜಿಲ್ಲಾಡಳಿತ ಅಧಿಕಾರಿಗಳು ಹಾಗೂ ಗಣ್ಯರಿಗೆ ಎಲೆ-ಅಡಿಕೆ-ತಾಂಬೂಲ-ಅಕ್ಷತೆ ನೀಡಿ ನಾಡಹಬ್ಬಕ್ಕೆ ಸಹಕಾರ ಕೋರಿದರು. ನಂತರ ದಸರಾ ಆನೆಗಳ ಮಾವುತರು-ಕಾವಾಡಿಗಳ ಕುಟುಂಬದವರಿಗೆ ಅಗತ್ಯ ಪರಿಕರಗಳನ್ನು ವಿತರಿಸಿದ ನಂತರ ಚಾಮುಂಡೇಶ್ವರಿಗೆ ಆರತಿ ಬೆಳಗಲಾಯಿತು.
ಶಾಸಕ ಎಂ.ಕೆ.ಸೋಮಶೇಖರ್, ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್, ಮೇಯರ್ ಎಂ.ಜೆ.ರವಿಕುಮಾರ್, ಮುಡಾ ಅಧ್ಯಕ್ಷ ಡಿ.ಧ್ರುವಕುಮಾರ್, ದಸರಾ ವಿಶೇಷಾಧಿಕಾರಿಗಳಾದ ಜಿಲ್ಲಾಧಿಕಾರಿ ರಂದೀಪ್ ಡಿ., ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ, ಮೈಸೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಪಿ.ಬಿ.ಕರುಣಾಕರ್, ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಇತರರು ಇದ್ದರು.
ಸಾರ್ವಜನಿಕರು, ಕಾರ್ಯಕರ್ತರು, ಸಮಾಜಸೇವಕರು, ಅಧಿಕಾರಿಗಳು ಎಲ್ಲರೂ ಸೇರಿ ಮೈಸೂರು ದಸರಾವನ್ನು ಜನರ ದಸರಾವನ್ನಾಗಿ ಆಚರಣೆ ಮಾಡೋಣ. ಈ ಬಾರಿಯ ದಸರಾ ಉದ್ಘಾಟಕರನ್ನಾಗಿ ಕವಿ ಡಾ.ಕೆ.ಎಸ್.ನಿಸಾರ್ ಅಹಮದ್‌ರನ್ನು ಆಯ್ಕೆ ಮಾಡಲಾಗಿದ್ದು, ಸೆಪ್ಟೆಂಬರ್ 2ನೇ ವಾರದಲ್ಲಿ ದಸರಾ ಮಹೋತ್ಸವ ಆಚರಣಾ ಸಮಿತಿ ಅವರಿಗೆ ಆಹ್ವಾನ ನೀಡಲಿದೆ.-ಡಾ.ಎಚ್.ಸಿ.ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವರು