Advertisement

ದಸರಾ ಗಜಪಯಣಕ್ಕೆ ಚಾಲನೆ: ಮೈಸೂರಿನತ್ತ ತೆರಳಿದ ಅಭಿಮನ್ಯು ನೇತೃತ್ವದ ಗಜಪಡೆ

04:12 PM Oct 01, 2020 | keerthan |

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಗಜಪಯಣ ಆರಂಭಕ್ಕೆ ಗುರುವಾರ ಹುಣಸೂರಿನ ವೀರನಹೊಸಹಳ್ಳಿಯಲ್ಲಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಗೇಟ್‌ನಿಂದ ಗುರುವಾರ ಬೆಳಿಗ್ಗೆ ಚಾಲನೆ ನೀಡಲಾಯಿತು.

Advertisement

ಸಂಪ್ರದಾಯದಂತೆ ತುಲಾ ಲಗ್ನದಲ್ಲಿ ಬೆಳಗ್ಗೆ 10.10 ರಿಂದ 11 ಗಂಟೆಯ ಸಮಯದಲ್ಲಿ ವೀರನಹೊಸಹಳ್ಳಿಯ ಆಂಜನೇಯ ದೇವಸ್ಥಾನದಲ್ಲಿ ಅಭಿಮನ್ಯು ನೇತೃತ್ವದ ಗಜಪಡೆಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪುಷ್ಪಾರ್ಚನೆ ಸಲ್ಲಿಸಿದರು.

ಕೋವಿಡ್ ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರಾದಲ್ಲಿ ಅಂಬಾರಿ ಸಾರಥಿ ಅಭಿಮನ್ಯು (54), ವಿಜಯ (61), ಕಾವೇರಿ (42), ಗೋಪಿ (38) ಹಾಗೂ ವಿಕ್ರಮ (47) ಸೇರಿದಂತೆ ಐದು ಆನೆಗಳು ಮಾತ್ರ ಭಾಗವಹಿಸಲಿವೆ.

ಇದನ್ನೂ ಓದಿ:ಮೈಸೂರು ಡಿಸಿಯಾಗಿ ವರ್ಗಾವಣೆ ರೋಹಿಣಿ ಸಿಂಧೂರಿಗೆ ನೀಡಿದ ಗಿಫ್ಟ್: ಸಾ.ರಾ.ಮಹೇಶ್ ಆರೋಪ

ಈ ವೇಳೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾತನಾಡಿ, ಕೋವಿಡ್ ಹಿನ್ನೆಲೆ ಈ ಬಾರಿ ದಸರೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಪ್ರತಿ ಬಾರಿ ಸಂಪ್ರದಾಯದಂತೆ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಯಣಕ್ಕೆ ಚಾಲನೆ ನೀಡಲಾಗಿದೆ ಎಂದರು.

Advertisement

ದಸರಾ ಆಚರಣೆಯನ್ನು ಬಹಳ ಎಚ್ಚರಿಕೆಯಿಂದ ಸುರಕ್ಷಿತವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಯಂತೆ ಹೆಚ್ಚು ಜನಸಂದಣಿ ಉಂಟಾಗದಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜಗತ್ ರಾಮ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಸಿ.ಅಲೆಗ್ಸಾಂಡರ್, ಮಹೇಶ್‌ಕುಮಾರ್, ಡಾ.ಕೆ.ಸಿ.ಪ್ರಶಾಂತ್ ಕುಮಾರ್, ಅರಣ್ಯ ಸಂರಕ್ಷಣಾಧಿಕಾರಿ ನಟೇಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪಿ.ಮಹದೇವ್, ಅಂಟೋನಿ ಪೌಲ್ ಇನ್ನಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next