Advertisement
ಸಚಿವರೊಂದಿಗೆ ಚರ್ಚಿಸಿರುವ ಶಾಸಕ ವೇದವ್ಯಾಸ್ ಕಾಮತ್ ಅವರು ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ಮನವಿ ಮಾಡಿಕೊಂಡಿದ್ದರು.ಅದಕ್ಕೆ ಸ್ಪಂದಿಸಿರುವ ಸಚಿವರು ಅಕ್ಟೋಬರ್ 2ರ ಗಾಂಧಿ ಜಯಂತಿಯ ದಿನವನ್ನು ಹೊರತುಪಡಿಸಿ ದಸರಾ ರಜೆ ನೀಡುವಂತೆ ಸೂಚಿಸಿದ್ದಾರೆ.
ಹಬ್ಬವನ್ನು ಆಚರಿಸಲಾಗುತ್ತದೆ. ಆದ್ದರಿಂದ ರಜೆಯನ್ನು ಹಬ್ಬದ ಸಂದರ್ಭದಲ್ಲಿಯೇ ನೀಡುವಂತೆ ಮನವಿ ಮಾಡಿದ್ದೆವು ಎಂದರು. ಉಡುಪಿಯಲ್ಲಿ ಅ. 3ರಿಂದ 16ರ ವರೆಗೆ ರಜೆ
ಉಡುಪಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ 2022-23ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಅಕ್ಟೋಬರ್3ರಿಂದ 16ರ ವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗುತ್ತದೆ. ಮಂಗಳೂರಿನಲ್ಲಿ ಸ್ಥಳೀಯ ಶಾಸಕರ ಮನವಿಯಂತೆ ರಜೆ ದಿನಾಂಕ ಬದಲಾವಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಿಂದ ಆ ರೀತಿಯ ಯಾವುದೇ ಪ್ರಸ್ತಾವನೆ ಹೋಗದೇ ಇರುವುದರಿಂದ ಇಲಾಖೆಯ ಪೂರ್ವ ನಿಗದಿತ ದಿನಾಂಕದಿಂದಲೇ ದಸರಾ ರಜೆ ಆರಭವಾಗಲಿದೆ. ಹಾಗೆಯೇ ನವರಾತ್ರಿ ಉತ್ಸವಕ್ಕೆ ಸರಿ ಹೊಂದುವ ರೀತಿಯಲ್ಲಿ ರಜೆ ಹೊಂದಾಣಿಕೆ ಮಾಡಲು ಜಿಲ್ಲಾಧಿಕಾರಿಯವರಿಗೆ ಅವಕಾಶ ನೀಡಲಾಗಿದೆ. ಆದರೆ ಇದರಿಂದ ಶೈಕ್ಷಣಿಕ ತರಗತಿಗಳಿಗೆ ಸಮಸ್ಯೆ ಆಗದಂತೆ ಎಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ.
Related Articles
Advertisement