Advertisement

ಉಚ್ಚಿಲ ದಸರೆಗೆ ಜನ ಸಾಗರ; ಕೇಂದ್ರ, ರಾಜ್ಯ ಸಚಿವರ ಭೇಟಿ

12:29 AM Oct 02, 2022 | Team Udayavani |

ಉಚ್ಚಿಲ: ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಚ್ಚಿಲ ದಸರಾದ ಸಂಭ್ರಮವನ್ನು ಕಣ್ತುಂಬಿಸಿಕೊಳ್ಳಲು ಜನಸಾಗರವೇ ಹರಿದು ಬರುತ್ತಿದೆ.

Advertisement

ಕಳೆದ ಆರು ದಿನಗಳಲ್ಲಿ ಮೂರೂವರೆ ಲಕ್ಷಕ್ಕೂ ಅಧಿಕ ಮಂದಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಲಕ್ಷಕ್ಕೂ ಅಧಿಕ ಮಂದಿ ಅನ್ನ ಪ್ರಸಾದ ಸ್ವೀಕರಿಸಿದ್ದು ಶನಿವಾರ ಒಂದೇ ದಿನ 20 ಸಾವಿರಕ್ಕೂ ಅಧಿಕ ಮಂದಿ ಅನ್ನ ಪ್ರಸಾದ ಸ್ವೀಕರಿಸಿದ್ದಾರೆ.

ಪ್ರತೀ ನಿತ್ಯ ಸಾವಿರಾರು ಸುಮಂಗಲೆ ಯರಿಂದ ಸಾಮೂಹಿಕ ಕುಂಕುಮಾರ್ಚನೆ ಸೇವೆ ನಡೆಯು ತ್ತಿದ್ದು ಶುಕ್ರವಾರ ಒಂದೇ ದಿನ ಐದು ಸಾವಿರಕ್ಕೂ ಅಧಿಕ ಮಂದಿ ಸೇವೆಯಲ್ಲಿ ಪಾಲ್ಗೊಂಡಿದ್ದರು. ನವರಾತ್ರಿಯ ಆರನೇ ದಿನ ವಾದ ಶನಿವಾರವೂ ವಿವಿಧ ಕಾರ್ಯಕ್ರಮಗಳು ನಡೆದವು.

ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಅರ್ಚಕ ವೇ| ಮೂ| ರಾಘವೇಂದ್ರ ಉಪಾಧ್ಯಾಯ ಉಪಸ್ಥಿತರಿದ್ದರು.

ಅಪಾರ ಭಕ್ತರ ನಿರೀಕ್ಷೆ
ರವಿವಾರ ಬೆಳಗ್ಗೆ ಚಂಡಿಕಾ ಹೋಮ, ನವದುರ್ಗೆಯರಿಗೆ ಮಹಾ ಮಂಗಳಾರತಿ, ಮಧ್ಯಾಹ್ನ ಮಹಾ ಪೂಜೆ, ಅನ್ನಸಂತರ್ಪಣೆ, ನಿರಂತರ ಭಜನೆ, ಸಂಜೆ 5ಕ್ಕೆ ಸಾವಿರ ಸುಮಂಗಲೆ ಯರಿಂದ ಕುಂಕುಮಾರ್ಚನೆ, ರಾತ್ರಿ 7.30ಕ್ಕೆ ಮಹಾಪೂಜೆ, ಶ್ರೀ ಚಂಡಿಕಾ ಕಲೊ³àಕ್ತ ಪೂಜೆ ಮತ್ತು ಪ್ರಸಾದ ವಿತರಣೆ ಹಾಗೂ 6ರಿಂದ 8ರ ವರೆಗೆ ನೃತ್ಯ ವೈವಿಧ್ಯ ನಡೆಯಲಿದ್ದು, ಅಪಾರ ಭಕ್ತರ ನಿರೀಕ್ಷೆಯಲ್ಲಿದ್ದೇವೆ ಎಂದು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ| ಜಿ. ಶಂಕರ್‌, ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್‌ ತಿಳಿಸಿದ್ದಾರೆ.

Advertisement

ಕೇಂದ್ರ, ರಾಜ್ಯ
ಸಚಿವರ ಭೇಟಿ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ರಾಜ್ಯದ ಸಚಿವ ಸುನಿಲ್‌ ಕುಮಾರ್‌ ಅವರು ಶನಿವಾರ ಭೇಟಿ ನೀಡಿದರು. ಪ್ರಥಮ ಪ್ರಯತ್ನದಲ್ಲೇ ಎಲ್ಲೆಡೆಗೆ ಮಾದರಿಯಾಗುವಂತಹ ದಸರಾವನ್ನು ಆಯೋಜಿಸಿರುವ ಡಾ| ಜಿ. ಶಂಕರ್‌ ಮತ್ತು ಬಳಗವನ್ನು ಸುನಿಲ್‌ ಅಭಿನಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next