Advertisement

ಸಚಿವರಿಂದ ದಸರಾ ಸಿದ್ಧತೆ ಪರಿಶೀಲನೆ

09:47 PM Sep 21, 2019 | Lakshmi GovindaRaju |

ಮೈಸೂರು: ದಸರಾ ಸಿದ್ಧತೆಯ ಕುರಿತು ಚಾಮುಂಡಿಬೆಟ್ಟದ ನಂದಿ ಬಳಿಯಿಂದ ಬೆಳಗ್ಗೆಯೇ ಪರಿಶೀಲನೆ ಆರಂಭಿಸಿದ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಮೈದಾನದಲ್ಲಿ ಆಯೋಜಿಸಿರುವ ಆಹಾರ ಮೇಳದ ಮಳಿಗೆ ಹಾಗೂ ಕಾರ್ಯಕ್ರಮದ ವೇದಿಕೆ ಸೇರಿದಂತೆ ಹಲವು ಸ್ಥಳಗಳನ್ನು ಪರಿಶೀಲನೆ ನಡೆಸಿದರು.

Advertisement

ಯುವ ದಸರಾ ನಡೆಯುವ ಮಹಾರಾಜ ಮೈದಾನವನ್ನು ಪರಿಶೀಲಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕೋrಬರ್‌ 1 ರಂದು ಬ್ಯಾಡ್ಮಿಂಟನ್‌ ಚಾಂಪಿಯನ್‌ ಪಿ.ವಿ.ಸಿಂಧು ಯುವ ದಸರಾ ಉದ್ಘಾಟಿಸುವರು. ಯುವ ದಸರಾ ವೀಕ್ಷಿಸಲು ಸುಮಾರು 15 ಸಾವಿರ ಆಸನ ವ್ಯವಸ್ಥೆ ಮಾಡಲಾಗುವುದು. ಪ್ರತಿಭಾವಂತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿ ಬರಲಿವೆ. ಅದಕ್ಕೆ ಪ್ರಾಯೋಗಿಕವಾಗಿ ಸ್ಥಳ ಪರಿಶೀಲನೆ ಮಾಡಲಾಗುತ್ತಿದೆ ಎಂದರು.

ನಂತರ ಜೆ.ಕೆ.ಮೈದಾನಕ್ಕೆ ಭೇಟಿ ನೀಡಿದ ಸಚಿವರು, ಮಹಿಳಾ ದಸರಾ, ರೈತ ದಸರಾ ವೇದಿಕೆ ಮತ್ತು ಮಳಿಗೆಗಳನ್ನು ಸಿದ್ಧತೆ ಮಾಡಲು ತಿಳಿಸಿದರು. ಅಲ್ಲಿರುವ ಶತಮಾನೋತ್ಸವ ಭವನಕ್ಕೆ ಸುಣ್ಣ ಬಣ್ಣ ಬಳಿಯುವಂತೆ ತಿಳಿಸಿದರು. ದಸರಾ ಫ‌ಲಪುಷ್ಪ ಪ್ರದರ್ಶನ ನಡೆಯುವ ಕುಪ್ಪಣ್ಣ ಪಾರ್ಕ್‌ ಮತ್ತು ಗಾಜಿನ ಮನೆಯನ್ನು ವೀಕ್ಷಿಸಿದರು. ಪಾರ್ಕ್‌ನ ಗಾಜಿನ ಮನೆಯಲ್ಲಿ ಹೂವುಗಳಿಂದ ಚಾಮರಾಜ ಒಡೆಯರ್‌ ಅವರ ಪ್ರತಿಕೃತಿಯನ್ನು ನಿರ್ಮಾಣ ಮಾಡಲಾಗುವುದು ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಸರ್ಕಾರಿ ಶಾಲೆಯ ಮಕ್ಕಳಿಗೆ ಫ‌ಲಪುಷ್ಪ ಪ್ರದರ್ಶನ ವೀಕ್ಷಣೆಗೆ ಉಚಿತವಾಗಿ ಅನುಕೂಲ ಮಾಡಿಕೊಡುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಸಂಸದ ಪ್ರತಾಪ್‌ಸಿಂಹ, ಶಾಸಕ ಎಲ್‌.ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌, ಜಿಪಂ ಸಿಇಒ ಕೆ.ಜ್ಯೋತಿ, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್‌ ಹೆಗ್ಡೆ, ಮುಡಾ ಆಯುಕ್ತ ಪಿ.ಎಸ್‌.ಕಾಂತರಾಜು, ಹೆಚ್ಚುವರಿ ಪೋಲಿಸ್‌ ವರಿಷ್ಠಾಧಿಕಾರಿ ಮುತ್ತುರಾಜ್‌ ಮತ್ತಿತರರು ಉಪಸ್ಥಿತರಿದ್ದರು.

ನಂದಿ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ನೀಡಿ
ಮೈಸೂರು: ಚಾಮುಂಡಿ ಬೆಟ್ಟಕ್ಕೆ ಬರುವ ಹೆಚ್ಚಿನ ಪ್ರವಾಸಿಗರು ನಂದಿ ವೀಕ್ಷಣೆಗೆ ಬರುತ್ತಾರೆ. ಆದ್ದರಿಂದ ನಂದಿಯ ಸುತ್ತ ಮುತ್ತ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು. ನಂದಿ ಮತ್ತು ಬೆಟ್ಟದ ಪಾದ ಬಳಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ದಸರಾ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ಸ್ವಚ್ಛತೆಗೆ ಮಹತ್ವ ನೀಡುವುದು.

Advertisement

ಪಾದದ ಮೆಟ್ಟಿಲು ಹತ್ತುವ ಪ್ರವಾಸಿಗರಿಗೆ ಅನುಕೂಲವಾಗುವಂತೆ ತಾತ್ಕಾಲಿಕ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಶೌಚಾಲಯ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಿದರು. ಚಾಮುಂಡಿ ಬೆಟ್ಟದ ನಿಧಿಯಿಂದ ಸುಮಾರು 7.50ಲಕ್ಷ ರೂ. ವೆಚ್ಚದಲ್ಲಿ ನಂದಿ ಮತ್ತು ವ್ಯೂವ್‌ ಪಾಯಿಂಟ್‌ ಬಳಿ ನಿರ್ಮಿಸಿರುವ ಐಮಾಸ್ಟ್‌ ದೀಪಕ್ಕೆ ಚಾಲನೆ ನೀಡಿದರು.

ಬೆಟ್ಟದ ಪಾದದ ತಪ್ಪಲಿನಲ್ಲಿ ನೂತನವಾಗಿ ಸುಮಾರು 6.58 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೀರಿನ ಕೇಂದ್ರವನ್ನು ವೀಕ್ಷಣೆ ಮಾಡಿ ತುರ್ತಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ನಗರದ ಹೊರ ವರ್ತುಲ ರಸ್ತೆಯ ಸುತ್ತ ದಿನ 4 ಬಸ್‌ಗಳನ್ನು ನಿಯೋಜಿಸಿದರೆ ದಸರಾ ಸಂದರ್ಭದಲ್ಲಿ ಪ್ರವಾಸಿಗರು ಓಡಾಡಲು ಅನುಕೂಲವಾಗುತ್ತದೆ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next