Advertisement

ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ: ಅ.28 ರಿಂದ ನ. 7ವರಗೆ 3 ಹಂತದಲ್ಲಿ ಮತದಾನ

04:01 PM Sep 25, 2020 | keerthan |

ಹೊಸದಿಲ್ಲಿ: ಕೋವಿಡೋತ್ತರ ಕಾಲದಲ್ಲಿ ಭಾರತ ಮೊದಲ ವಿಧಾನಸಭೆ ಚುನಾವಣೆಗೆ ಸಜ್ಜಾಗಿದೆ. ಬಿಹಾರ ರಾಜ್ಯದ ವಿಧಾನಸಭೆ ಚುನಾವಣೆಗೆ ಇಂದು ರಾಷ್ಟ್ರೀಯ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ.

Advertisement

ಸುದ್ದಿಗೋಷ್ಠಿ ನಡೆಸಿದ ಚುನಾವಣಾ ಆಯೋಗ ಮುಖ್ಯಸ್ಥ ಸುನೀಲ್ ಅರೋರಾ ಬಿಹಾರ ಚುನಾವಣಾ ದಿನಾಂಕವನ್ನು ಪ್ರಕಟಪಡಿಸಿದರು.

ಅಕ್ಟೋಬರ್ 28ರಿಂದ ನವೆಂಬರ್ 7ರವರೆಗೆ ಮೂರು ಹಂತಗಳಲ್ಲಿ ಬಿಹಾರ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಮೊದಲ ಹಂತದ ಚುನಾವಣೆ ಅಕ್ಟೋಬರ್ 28ರಂದು ನಡೆದರೆ, ಎರಡನೇ ಹಂತದ ಚುನಾವಣೆ ನವೆಂಬರ್ 3ರಂದು, ಮೂರನೇ ಹಂತದ ಚುನಾವನೆ ನವೆಂಬರ್ 7ರಂದು ನಡೆಯಲಿದೆ. ನವೆಂಬರ್ 10ರಂದು ಮತಎಣಿಕೆ ಕಾರ್ಯ ನಡೆಯಲಿದೆ.

ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ, ಎರಡನೇ ಹಂತದಲ್ಲಿ 94 ಕ್ಷೇತ್ರಗಳಿಗೆ ಮತ್ತು ಅಂತಿಮ ಹಂತದಲ್ಲಿ 78 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಮತದಾನಕ್ಕೆ ಒಂದು ಗಂಟೆ ಹೆಚ್ಚು ಅವಕಾಶ ನೀಡಲಾಗಿದ್ದು, ಬೆಳಿಗ್ಗೆ ಏಳು ಗಂಟೆಯಿಂದ ಸಂಜೆ ಅರು ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

Advertisement

ಕೋವಿಡ್ ಕಾಲದಲ್ಲಿ ಚುನಾವಣೆ ನಡೆಯುತ್ತಿರುವ ಕಾರಣ ಸುರಕ್ಷಿತ ಮಾರ್ಗಸೂಚಿಗಳ ಪ್ರಕಾರ ಚುನಾವಣೆ ನಡೆಸಲು ಆಯೋಗ ಸಿದ್ದತೆ ನಡೆಸುತ್ತಿದೆ. 7 ಲಕ್ಷ ಯುನಿಟ್ಸ್ ಗಳಿಗೂ ಹೆಚ್ಚು ಸ್ಯಾನಿಟೈಸರ್ ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಬೂತ್ ಗಳಲ್ಲಿ ಥರ್ಮಲ್ ಟೆಸ್ಟ್ ಮುಂತಾದ ಸುರಕ್ಷಿತ ಕ್ರಮಗಳಿರುತ್ತದೆ ಎಂದು ಸುನೀಲ್ ಅರೋರಾ ಹೇಳಿದರು.

ಕೋವಿಡ್ ಸೋಂಕಿತರಿಗೂ ಅವಕಾಶ: ಕೋವಿಡ್ 19 ಸೋಂಕು ಪಾಸಿಟಿವ್ ಆದವರಿಗೂ ಮತದಾನ ಮಾಡುವ ಅವಕಾಶ ನೀಡಲಾಗುವುದು. ಆದರೆ ಅವರು ದಿನದ ಅಂತಿಮ ಒಂದು ಗಂಟೆಯಲ್ಲಿ ಮತದಾನ ಮಾಡಬಹುದು ಎಂದು ಅರೋರಾ ಹೇಳಿದರು.

ಬಿಹಾರದಲ್ಲಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಿದ್ದು, ಈ ಚುನಾವಣೆಯಲ್ಲಿ ಬಿಜೆಪಿಯು ನಿತೀಶ್ ಜೊತೆ ಕೈಜೋಡಿಸುವುದು ಬಹುತೇಕ ಖಚಿತವಾಗಿದೆ.

ಜಾತಿಲೆಕ್ಕಾಚಾರದಲ್ಲಿ ನೋಡುವುದಾದರೆ ಬಿಹಾರದಲ್ಲಿ ಬ್ರಾಹ್ಮಣ, ಮುಸ್ಲಿಂ ಮತ್ತು ಕುಶವಾ ಸಮುದಾಯಗಳ ಮತಗಳು ಪ್ರಮುಖ ಪಾತ್ರವಹಿಸುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next