ಬೆಂಗಳೂರು: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ನಿಗದಿ ಮಾಡಿ ರಾಷ್ಟ್ರೀಯ ಚುನಾವಣಾ ಆಯೋಗ ಆದೇಶಿಸಿದೆ.
ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳಿಗೆ ಅಕ್ಟೋಬರ್ 30 ಚುನಾವಣೆ ನಡೆಯಲಿದ್ದು, ನೆವಂಬರ್ 2ರಂದು ಮತ ಎಣಿಕೆ ನಡೆಯಲಿದೆ.
ನಾಮಪತ್ರ ಸಲ್ಲಿಸಲು ಅ.8 ಕೊನೆಯ ದಿನಾಂಕವಾಗಿದ್ದು, ಅ.11ರಂದು ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂಪಡೆಯಲು ಅ.13ರಂದು ಕೊನೆಯ ದಿನಾಂಕವಾಗಿದೆ.
ಹಾನಗಲ್ ಕ್ಷೇತ್ರದ ಶಾಸಕರಾಗಿದ್ದ ಸಿಎಂ ಉದಾಸಿ ಅವರು ಇತ್ತೀಚೆಗೆ ನಿಧನರಾಗಿದ್ದರು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ತವರು ಜಿಲ್ಲೆಯ ಉಪಚುನಾವಣೆಯಾದ ಕಾರಣ ಬಿಜೆಪಿಗೆ ಪ್ರತಿಷ್ಠೆಯ ವಿಚಾರವಾಗಿರಲಿದೆ.
ಜೆಡಿಎಸ್ ಶಾಸಕ ಎಂ.ಸಿ.ಮನಗುಳಿ ನಿಧನದಿಂದ ತೆರವಾಗಿದ್ದ ಸಿಂದಗಿ ಕ್ಷೇತ್ರದಲ್ಲೂ ಉಪ ಚುನಾವಣೆ ಘೋಷಣೆಯಾಗಿದೆ.