Advertisement

ಬೆಂಗಳೂರು: ಎಲ್ಲ  ಶಾಲಾ ತರಗತಿ ಗಳನ್ನು ಶೀಘ್ರವೇ ಆರಂಭಿಸಬೇಕು ಎಂಬ ಬೇಡಿಕೆ ಮತ್ತು ಒತ್ತಾಯ ಬಲವಾಗಿರುವ ಹಿನ್ನೆಲೆಯಲ್ಲಿ ಫೆ. 18 ಅಥವಾ ಫೆ. 19ರಿಂದ 6, 7 ಮತ್ತು 8ನೇ ತರಗತಿಗಳನ್ನು ಆರಂಭಿಸಿ, ಮಾರ್ಚ್‌ ಮೊದಲ ವಾರ 1ರಿಂದ 5ನೇ ತರಗತಿಯ ಮಕ್ಕಳಿಗೆ ವಿದ್ಯಾಗಮ ಆರಂಭಿಸಲು ಶಿಕ್ಷಣ ಇಲಾಖೆ ತಯಾರಿ ಮಾಡಿಕೊಂಡಿದೆ.

Advertisement

ಜ. 1ರಿಂದ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲಾಗಿತ್ತು. ಫೆ. 1ರಿಂದ 9ನೇ ಮತ್ತು ಪ್ರಥಮ ಪಿಯುಸಿ ತರಗತಿಗಳು ಪುನರಾರಂಭವಾಗಿವೆ. ಜ. 1ರಿಂದ 6ರಿಂದ 9ನೇ ತರಗತಿಗಳಿಗೆ ವಿದ್ಯಾಗಮ ನಡೆಸಲಾಗುತ್ತಿದೆ. ಈಗ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯ ಅನುಮತಿ ಪಡೆದು ಫೆ. 18 ಅಥವಾ ಫೆ. 19ರಂದು 6ರಿಂದ 8ನೇ ತರಗತಿ ಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲಾಗುತ್ತದೆ. 1ರಿಂದ 5ನೇ ತರಗತಿಗೆ ವಿದ್ಯಾ ಗಮವನ್ನು ಮಾರ್ಚ್‌ ಮೊದಲ ವಾರ ಆರಂಭಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಇಲಾಖೆಯ ಉನ್ನತ ಮೂಲಗಳು “ಉದಯವಾಣಿ’ಗೆ ಖಚಿತಪಡಿಸಿವೆ.

ಜ. 28ರಂದು ಕೋವಿಡ್‌ ಸಲಹಾ ಸಮಿತಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ರೊಂದಿಗೆ ಚರ್ಚಿಸಿ 9ರಿಂದ 12ನೇ ತರಗತಿಗಳಿಗೆ ಶಾಲಾರಂಭದ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಈಗ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ತೀರಾ ಕಡಿಮೆಯಾಗುತ್ತಿರುವುದರಿಂದ 6ರಿಂದ 8ನೇ ತರ ಗತಿಗಳಿಗೂ ಶಾಲೆ ಆರಂಭಿಸಿ, ಸಿಗಬಹು ದಾದ ಕಡಿಮೆ ಅವಧಿಯಲ್ಲಿ ಪರಿಣಾಮಕಾರಿ ಬೋಧನೆಗೆ ಇಲಾಖೆ ತಯಾರಿ ಮಾಡಿ ಕೊಂಡಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್‌ ಈಗಾಗಲೇ ಎಲ್ಲ ಜಿಲ್ಲೆಗಳ ಡಿಡಿಪಿಐಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಸೂಚನೆ ನೀಡಿದ್ದಾರೆ.

ಫೆ. 16ರಂದು ಸಭೆ :

ಎಲ್ಲ ತರಗತಿಗಳನ್ನು ಆರಂಭಿಸಬೇಕು ಎಂದು ಹೆತ್ತವರು, ವಿದ್ಯಾರ್ಥಿಗಳು ಒತ್ತಾ ಯಿಸು ತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಫೆ. 16ರಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ರಾಜ್ಯ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ.

Advertisement

ಇತ್ತೀಚೆಗೆ ಭೇಟಿ ನೀಡಿದ 15ಕ್ಕೂ ಹೆಚ್ಚು ಜಿಲ್ಲೆಗಳ ಹಲವಾರು ಶಾಲೆಗಳಲ್ಲಿ ಕೋವಿಡ್‌ ನಿಯಮಗಳ ಪಾಲನೆಯನ್ನು ಪರಿಶೀಲಿಸಿ ದ್ದೇನೆ. ವಿದ್ಯಾರ್ಥಿಗಳು, ಹೆತ್ತವರು, ಶಿಕ್ಷಕರು, ಶಾಲಾಡಳಿತ ಮಂಡಳಿ ಎಲ್ಲ ರೀತಿಯ ಸುರಕ್ಷೆ ವಹಿಸುತ್ತಿದ್ದಾರೆ. ಮಕ್ಕಳು ಕಲಿಕೆಯಲ್ಲಿ ಆಸಕ್ತಿ ವಹಿಸಿದ್ದಾರೆ. ಉಳಿದ ತರಗತಿ ಆರಂಭಿಸಲು ವ್ಯಾಪಕ ಒತ್ತಾಯ, ಬೇಡಿಕೆ ಇದ್ದು, ಫೆ.16ರ ಸಭೆಯಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಶುಕ್ರವಾರ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯ ಬಳಿಕ ತಿಳಿಸಿದ್ದಾರೆ.

ಏಕಕಾಲಕ್ಕೆ ಎಲ್ಲ ತರಗತಿ ಆರಂಭ :

ನೇರ ಮತ್ತು ವಿದ್ಯಾಗಮ ತರಗತಿಗಳಿಗೆ ಬರುತ್ತಿರುವ ವಿದ್ಯಾರ್ಥಿಗಳ ಹಾಜರಾತಿ ಮಾಹಿತಿಯನ್ನು ಪಡೆಯಲಾಗಿದೆ. 10 ಮತ್ತು 12ನೇ ತರಗತಿಗಳ ಪರೀಕ್ಷೆ ಮತ್ತು ಫಲಿತಾಂಶಗಳನ್ನು ಜೂನ್‌ ಅಂತ್ಯದೊಳಗೆ ಮತ್ತು ಉಳಿದ ತರಗತಿಗಳ ಪರೀಕ್ಷೆ ಮತ್ತು ಫಲಿತಾಂಶ ಘೊಷಣೆಯ ಜೂ. 10ರೊಳಗೆ ಪೂರ್ಣಗೊಳಿಸಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮುಗಿದ ತತ್‌ಕ್ಷಣವೇ ಮುಂದಿನ ಶೈಕ್ಷಣಿಕ ವರ್ಷದ ತರಗತಿಗಳನ್ನು ಏಕ ಕಾಲಕ್ಕೆ ಆರಂಭಿಸ ಲಾಗುತ್ತದೆ ಎಂದು ಸುರೇಶ್‌ ಕುಮಾರ್‌ ಮಾಹಿತಿ ನೀಡಿದರು. ಇದೇವೇಳೆ ದ್ವಿತೀಯ ಪಿಯುಸಿ ವಾರ್ಷಿಕ ಪರೀ ಕ್ಷೆಯ ವೇಳಾ ಪ ಟ್ಟಿ ಯನ್ನೂ ಸರಕಾರ ಬಿಡು ಗಡೆ ಮಾಡಿ ದ್ದು, ಮೇ 24ರಿಂದ ಜೂ. 16ರ ವರೆಗೆ ನಡೆ ಯ ಲಿದೆ.

Advertisement

Udayavani is now on Telegram. Click here to join our channel and stay updated with the latest news.

Next