Advertisement

ಬಹುನಿರೀಕ್ಷಿತ ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ

06:44 PM Oct 12, 2022 | Team Udayavani |

ಬೆಂಗಳೂರು : ಬಹುನಿರೀಕ್ಷಿತ ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿದೆ. ಜನವರಿ 6,7,8 ರಂದು ಮೂರು ದಿನಗಳ ಕಾಲ ಸಮ್ಮೇಳನ ನಡೆಸುವುದಕ್ಕೆ‌ ರಾಜ್ಯ ಸರಕಾರ ಬುಧವಾರ ನಿರ್ಧರಿಸಿದೆ.

Advertisement

ಕನ್ನಡ ಮತ್ತು ಸಂಸ್ಕ್ರತಿ, ಇಂಧನ ಸಚಿವ ವಿ ಸುನಿಲ್ ಕುಮಾರ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ , ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಷಿ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆ ಬಳಿಕ ದಿನಾಂಕ ನಿಗದಿ ಮಾಡಿದ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಅನುಮೋದನೆ ಪಡೆದು  ಸಚಿವ ಸುನೀಲ್ ಕುಮಾರ್ ದಿನಾಂಕ ಘೋಷಣೆ ಮಾಡಿದ್ದಾರೆ.

ಈ ಸಮ್ಮೇಳನದಲ್ಲಿ 8 ರಿಂದ 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಬಹಳ ಅದ್ದೂರಿಯಾಗಿ 86 ನೇ ಸಾಹಿತ್ಯ ಸಮ್ಮೇಳನವನ್ನು ನಡೆಸುವುದಕ್ಕೆ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಈ ಸಂಬಂಧ ಜಿಲ್ಲಾಡಳಿತ ಹಾಗೂ ಸ್ವಯಂ ಸೇವಕರ ಜತೆಗೆ ಚರ್ಚೆ ನಡೆಸುವುದಕ್ಕಾಗಿ ಅಕ್ಟೋಬರ್ 20 ರಂದು ಹಾವೇರಿಗೆ ತೆರಳಿ ಸ್ಥಳ‌ ಪರಿಶೀಲನೆ ನಡೆಸಲಾಗುವುದು. ಯಾವುದೇ ನ್ಯೂನ್ಯತೆ ಇಲ್ಲದಂತೆ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು ಎಂದು ಸುನಿಲ್ ಕುಮಾರ್ ತಿಳಿಸಿದರು.

ಸಮ್ಮೇಳನ ಹಿನ್ನೆಲೆಯಲ್ಲಿ 45 ದಿನಗಳ ಕಾಲ ಕನ್ನಡ ರಥ ಇಡಿ ರಾಜ್ಯಾದ್ಯಂತ ಮೆರವಣಿಗೆ ನಡೆಸುತ್ತದೆ. 30 ರಿಂದ 40 ಸಾವಿರ ಜನರಿಗೆ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಪ್ರತಿ ದಿನ 2.50 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತದೆ. 86 ನೇ ಕನ್ನಡ ಸಾಹಿತ್ಯ ಸಮ್ಮೇಳನವಾಗಿರುವುದರಿಂದ 86 ಸಾಧಕರಿಗೆ ಈ ಬಾರಿ ಸನ್ಮಾನಿಸಲಾಗುತ್ತದೆ ಎಂದು ಹೇಳಿದರು.

Advertisement

ಸಮ್ಮೇಳನದ ಭಾಗವಾಗಿ 20 ಕ್ಕೂ ಹೆಚ್ಚು ಉಪಸಮಿತಿಗಳನ್ನು ರಚನೆ ಮಾಡಲಾಗುತ್ತದೆ. ನಾನಾ ಗೋಷ್ಠಿಗಳು, ಪುಸ್ತಕ ಪ್ರದರ್ಶನದ ಜತೆಗೆ ಸಾಹಿತ್ಯಕ್ಕೆ ಸಂಬಂಧಪಟ್ಟ ಅನೇಕ ಚಟುವಟಿಕೆಗಳು ನಡೆಯುತ್ತವೆ ಎಂದು ಹೇಳಿದರು.

ಉದ್ಘಾಟನೆಗೆ 50 ಸಾವಿರ ಜನ
ಉದ್ಘಾಟನಾ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲಾಗುವುದು. ಸುಮಾರು 50 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯ ಇರುವ ಬೃಹತ್ ಸಭಾಂಗಣ ನಿರ್ಮಿಸಲಾಗಿವುದು. ಹಿಂದೆಂದೂ ಕಾಣದಷ್ಟು ಅಚ್ಚುಕಟ್ಟಾಗಿ ಸಮ್ಮೇಳನ ಯಶಸ್ವಿಗೊಳಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next