Advertisement

ದತ್ತಾಗೆ ಜೆಡಿಎಸ್‌ ಉಪಾಧ್ಯಕ್ಷ ಸ್ಥಾನ

07:50 AM Aug 19, 2017 | |

ಬೆಂಗಳೂರು: ಜೆಡಿಎಸ್‌ ರಾಜ್ಯ ಘಟಕದ ಪದಾಧಿಕಾರಿಗಳ ಪಟ್ಟಿ ಸಿದಟಛಿಪಡಿಸಲಾಗಿದ್ದು, ಎಚ್‌.ಡಿ.ದೇವೇಗೌಡರ ಮಾನಸ ಪುತ್ರ ಎಂದೇ ಬಿಂಬಿತವಾಗಿರುವ ವೈ.ಎಸ್‌.ವಿ.ದತ್ತಾ ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ದತ್ತಾ ಸೇರಿ ಐವರನ್ನು
ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

Advertisement

ವಿಧಾನ ಪರಿಷತ್‌ ಸದಸ್ಯರಾದ ಟಿ.ಎ.ಶರವಣ, ಸಿ.ಆರ್‌.ಮನೋಹರ್‌, ಸೈಯದ್‌ ಸೈಫ‌ುಲ್ಲಾ, ರುತ್‌ ಮನೋರಮಾ ಅವರನ್ನು
ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸದ್ಯದಲ್ಲೇ ಅಧಿಕೃತ ಆದೇಶ ಹೊರಬೀಳಲಿದೆ. ಪಕ್ಷ ಸಂಘಟನೆಯಲ್ಲಿ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರಿಗೆ ಹೊಣೆಗಾರಿಕೆ ನೀಡುವ ನಿಟ್ಟಿನಲ್ಲಿ ರಾಜ್ಯ ಘಟಕದಲ್ಲಿ ಸ್ಥಾನಮಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next