ಚಿಕ್ಕಮಗಳೂರು: ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ನಡೆಯುತ್ತಿರುವ ದತ್ತಜಯಂತಿಗೆ ಇಂದು ಚಾಲನೆ ನೀಡಲಾಗಿದ್ದು, ಶಾಸಕ ಸಿ.ಟಿ.ರವಿ ಸೇರಿದಂತೆ ಹಲವರು ಮಾಲಾಧಾರಣೆ ಮಾಡಿದ್ದಾರೆ.
Advertisement
ನಗರದ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ಮಾಲಾಧಾರಣೆ ಮಾಡುವ ಮೂಲಕ ದತ್ತಜಯಂತಿಗೆ ಚಾಲನೆ ನೀಡಲಾಗಿದೆ. ಇಂದಿನಿಂದ ಡಿಸೆಂಬರ್ 8 ರವರೆಗೆ ದತ್ತ ಜಯಂತಿ ಕಾರ್ಯಕ್ರಮ ನಡೆಯಲಿದೆ.
ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಜಯಂತಿ ನಡೆಯಲಿದ್ದು, ನಗರದಲ್ಲಿ 100 ಕ್ಕೂ ಹೆಚ್ಚು ಭಕ್ತರು ಮಾಲಾಧಾರಣೆ ಮಾಡಿದ್ದಾರೆ.