Advertisement

ಬೆಳ್ಳಿಹೆಜ್ಜೆ ಕಾರ್ಯಕ್ರಮದಲ್ಲಿ ದತ್ತಣ್ಣ ಅತಿಥಿ

12:16 PM Jul 27, 2018 | |

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ಶುಕ್ರವಾರ (ಜುಲೈ 27)ಹಮ್ಮಿಕೊಳ್ಳಲಾಗಿರುವ “ಬೆಳ್ಳಿ ಹೆಜ್ಜೆ’ ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದ ದತ್ತಣ್ಣ ಅವರು ಅತಿಥಿಯಾಗಿ ಭಾಗವಹಿಸಲಿದ್ದಾರೆ.

Advertisement

ಸಂಜೆ 5 ಗಂಟೆಗೆ ಗಾಂಧಿ ಭವನದ ಮಹದೇವ ದೇಸಾಯಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಡಾ.ನಾಗತ್ತಿಹಳ್ಳಿ ಚಂದ್ರಶೇಖರ್‌ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಹಿರಿಯ ಚಿತ್ರ ನಿರ್ದೇಶಕ ಟಿ.ಎಸ್‌.ನಾಗಾಭರಣ, ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎಸ್‌.ಎ.ಚಿನ್ನೇಗೌಡ, ಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next