ಚಿಕ್ಕಮಗಳೂರು: ದಿನದಿಂದ ದಿನಕ್ಕೆ ಹುಲಿ ಉಗುರು, ಚರ್ಮ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಇಲ್ಲಿನ ದತ್ತಪೀಠದ ಶಾಖಾದ್ರಿಯೂ ಹುಲಿ ಚರ್ಮದ ಮೇಲೆ ಕುಳಿತಿರುವ ಫೋಟೊ ವೈರಲ್ ಆಗಿತ್ತು.
ಈ ಹಿನ್ನೆಲೆ ಶಾಖಾದ್ರಿ ಅವರ ಮನೆಗೆ ಇಂದು ಆರ್.ಎಫ್. ಓ. ಮೋಹನ್ ನೇತೃತ್ವದ ಅರಣ್ಯಾಧಿಕಾರಿಗಳ ತಂಡ ಭೇಟಿ ನೀಡಿದೆ.
ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ಸ್ವಾಮಿ ದರ್ಗಾ ದೇವಸ್ಥಾನದ ಅರ್ಚಕರ ಶಾಖಾದ್ರಿ ನಿವಾಸಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಮನೆಗೆ ಬೀಗ ಹಾಕಿದ್ದ ಹಿನ್ನೆಲೆ ಅರಣ್ಯ ಸಿಬ್ಬಂದಿ ಮನೆಯ ಹೊರ ಭಾಗದಲ್ಲಿ ಕಾದು ಕುಳಿತಿದ್ದಾರೆ ಎನ್ನಲಾಗಿದೆ.
ಹುಲಿ ಚರ್ಮದ ಬಗೆಗಿನ ಮಾಹಿತಿ ಕಲೆ ಹಾಕಲು ಅರಣ್ಯ ಸಿಬ್ಬಂದಿಗಳು ಮಾರ್ಕೆಟ್ ರಸ್ತೆಯಲ್ಲಿರುವ ಶಾಖಾದ್ರಿ ಸೈಯದ್ ಗೌಸ್ ಮೋಯಿದ್ದೀನ್ ನಿವಾಸಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಶಾಖಾದ್ರಿ ಮನೆಯ ಮುಂಭಾಗದಲ್ಲಿ ಅರಣ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.