ಬೆಂಗಳೂರು: ಅಪ್ರಾಪ್ತ ವಯಸ್ಕ 14 ವರ್ಷ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ತಂದೆಗೆ ಹೈಕೋರ್ಟ್ 10 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿದೆ.
ಅತ್ಯಾಚಾರ ಪ್ರಕರಣದಿಂದ ಖುಲಾಸೆ ಗೊಳಿಸಿ ವಿಚಾರಣ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದುಪಡಿಸಿರುವ ಹೈಕೋರ್ಟ್, ಸಂತ್ರಸ್ತೆಯ ತಂದೆಯೇ ಅಪರಾಧಿ ಎಂದು ತೀರ್ಮಾನಿಸಿದೆ.
ಇದನ್ನೂ ಓದಿ:ವಿಧಾನ ಮಂಡಲ ಅಧಿವೇಶನ ಅನಿರ್ಧಿಷ್ಠಾವಧಿಗೆ ಮುಂದೂಡಿಕೆ
ಆರೋಪಿತ ಆಟೋ ರಿಕ್ಷಾ ಚಾಲಕ ತಂದೆಯನ್ನು ಖುಲಾಸೆಗೊಳಿಸಿದ್ದ ಬೆಳ ಗಾವಿಯ ಪೋಕ್ಸೊ ವಿಶೇಷ ನ್ಯಾಯಾ ಲಯದ ಆದೇಶ ಪ್ರಶ್ನಿಸಿ ಸರಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ| ಎಚ್.ಟಿ. ನರೇಂದ್ರಪ್ರಸಾದ್ ಹಾಗೂ ನ್ಯಾ| ರಾಜೇಂದ್ರ ಬದಾಮಿಕರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ತೀರ್ಪು ನೀಡಿದ್ದು, ಆರೋಪಿಯನ್ನು ಖುಲಾಸೆಗೊಳಿಸಿದ್ದ ವಿಶೇಷ ನ್ಯಾಯಾ ಲಯದ ಆದೇಶ ರದ್ದುಪಡಿಸಿದೆ.