Advertisement

ಮಗಳ ಪ್ರೇಮ ವಿವಾಹ: ಮನನೊಂದು ತಂದೆ ಆತ್ಮಹತ್ಯೆ

08:13 PM Sep 21, 2022 | Team Udayavani |

ಮಂಡ್ಯ: ಮಗಳು ಪ್ರೇಮ ವಿವಾಹವಾದ ಮಾಡಿಕೊಂಡ ಹಿನ್ನೆಲೆಯಲ್ಲಿ ಮನನೊಂದ ಯುವತಿಯ ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಿ.ಬಾಚಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.

Advertisement

ಇದನ್ನೂ ಓದಿ:”ಸತ್ಯ” ಶೀಘ್ರದಲ್ಲೇ ಹೊರ ಬರಲಿದೆ… ಜೈಲಿನಿಂದ ಹೊರ ಬಂದ ವರ್ಷದ ಬಳಿಕ ರಾಜ್‌ ಕುಂದ್ರಾ

ಗ್ರಾಮದ ಪ್ರಗತಿಪರ ರೈತ ರವಿ(47) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಮುಂದೆ ಮೃತ ರವಿ ಶವವಿಟ್ಟುಕೊಂಡು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಲೇಜು ವ್ಯಾಸಂಗ ಮಾಡುತ್ತಿದ್ದ ಪುತ್ರಿ ಕಳೆದ ಐದು ದಿನಗಳ ಹಿಂದೆಯೇ ಅದೇ ಗ್ರಾಮದ ಯುವಕನೊಂದಿಗೆ ವಿವಾಹವಾಗಿದ್ದಾಳೆ. ಇದರಿಂದ ಬೇಸತ್ತ ತಂದೆ ರವಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮನೆಯ ಗೌರವ ಕಳೆದು ನಮಗೆ ಮೋಸ ಮಾಡಿ ಹೋಗಿರುವ ಮಗಳನ್ನು ಬಂಧಿಸಿ ತರುವಂತೆ ಒತ್ತಾಯಿಸಿ ಬಿ.ಬಾಚಹಳ್ಳಿ ಗ್ರಾಮಸ್ಥರಿಂದ ಮೃತ ರವಿ ಅವರ ಶವವಿಟ್ಟುಕೊಂಡು ಗ್ರಾಮಾಂತರ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು. ಕಳೆದ ಐದು ದಿನಗಳ ಹಿಂದೆಯೇ ನಾಪತ್ತೆಯಾಗಿರುವ ಮಗಳನ್ನು ಹುಡುಕಿಕೊಡುವಂತೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ಬೇಜವಾಬ್ದಾರಿತನ ತೋರಿದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

Advertisement

ಇದರಿಂದ ಗ್ರಾಮಾಂತರ ಪೋಲಿಸ್ ಠಾಣೆಯ ಮುಂದೆ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ. ಶೀಘ್ರವೇ ಮನೆ ಬಿಟ್ಟು ಓಡಿ ಹೋಗಿರುವ ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ ಪೋಲಿಸ್ ಇನ್ಸ್‌ಪೆಕ್ಟರ್ ಕೆ.ಎಸ್.ನಿರಂಜನ ಅವರ ಭರವಸೆ ಮೇರೆಗೆ ಪ್ರತಿಭಟನೆ ಹಿಂಪಡೆದು ಶವವನ್ನು ಗ್ರಾಮಕ್ಕೆ ಕೊಂಡೊಯ್ದದರು. ಸ್ಥಳಕ್ಕೆ ಎಸ್ಪಿ ಎನ್.ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next