ಚಳ್ಳಕೆರೆ: ಆಯುಷ್ಮಾನ್ ಭಾರತ ಯೋಜನೆ ಅನುಷ್ಠಾನದ ಯಶಸ್ಸಿನ ಹಿನ್ನೆಲೆಯಲ್ಲಿ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ರಾಜ್ಯ ಮಟ್ಟದ ಪ್ರಶಸ್ತಿ ದೊರೆತಿದೆ ಎಂದು ಆಸ್ಪತ್ರೆ ಆಡಳಿತಾಧಿಕಾರಿ ಡಾ| ವೆಂಕಟೇಶ್ ತಿಳಿಸಿದ್ದಾರೆ.
ಆರೋಗ್ಯ ಇಲಾಖೆ ನಿರ್ದೇಶಕರು ದೂರವಾಣಿ ಮೂಲಕ ಈ ಕುರಿತು ಮಾಹಿತಿ ನೀಡಿದ್ದು, ಗಣರಾಜ್ಯೋತ್ಸವ ದಿನದಂದು ಚಿತ್ರದುರ್ಗದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯ ಮಟ್ಟದ ಆಯುಷ್ಮಾನ್ ಭಾರತ ಯೋಜನೆ ಪ್ರಶಸ್ತಿ ಲಭ್ಯವಾಗಲು ನಾನೊಬ್ಬನೇ ಕಾರಣಕರ್ತನಲ್ಲ. ನಮಗೆ ಮಾರ್ಗದರ್ಶನ ಮಾಡುತ್ತಿರುವ ಶಾಸಕ ಟಿ. ರಘುಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ| ಸಿ.ಎಲ್. ಪಾಲಾಕ್ಷ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ತುಳಸಿರಂಗನಾಥ್ ಸೇರಿದಂತೆ ಆರೋಗ್ಯ ಇಲಾಖೆಯ ಹಲವಾರು ಅ ಧಿಕಾರಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿಗೆ ಈ ಶ್ರೇಯಸ್ಸು ಸಲ್ಲುತ್ತದೆ. ಪ್ರಶಸ್ತಿಯ ಅಂತಿಮ ಸುತ್ತಿನಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ, ರಾಯಚೂರು ಜಿಲ್ಲೆಯ ಗಂಗಾವತಿ ಆಸ್ಪತ್ರೆಗಳು ಸ್ಪರ್ಧೆಯಲ್ಲಿದ್ದವು. ಅಂತಿಮವಾಗಿ ಚಳ್ಳಕೆರೆ ಸರ್ಕಾರಿ ಆಸ್ಪತ್ರೆ ಈ ಪ್ರಶಸ್ತಿ ಪಡೆಯುವಲ್ಲಿ ಸಫಲವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.–
ರಾಜ್ಯ ಮಟ್ಟದ ಆಯುಷ್ಮಾನ್ ಭಾರತ ಯೋಜನೆ ಪ್ರಶಸ್ತಿ ಪಡೆದ ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು, ಸಂಸದ ಎ. ನಾರಾಯಣಸ್ವಾಮಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು, ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ್, ತಾಲೂಕು ಆರೋಗ್ಯಾಧಿ ಕಾರಿ ಡಾ| ಎನ್. ಪ್ರೇಮಸುಧಾ, ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮೀ ಕೃಷ್ಣಮೂರ್ತಿ, ಪೌರಾಯುಕ್ತ ಪಿ. ಪಾಲಯ್ಯ ಮೊದಲಾದವರು ಅಭಿನಂದಿಸಿದ್ದಾರೆ.
ಓದಿ: ಸಮ ಸಮಾಜಕ್ಕೆ ಶಿಕ್ಷಣ ಅಗತ್ಯ