Advertisement

ಕೋವಿಡ್‌ ಲಸಿಕೆ ಹಾಕಿಸಿಕೊಳ್ಳದಿದ್ರೆ ಸೌಲಭ್ಯ ಕಟ್

03:31 PM Feb 18, 2021 | Team Udayavani |

ದಾವಣಗೆರೆ: ಕೋವಿಡ್‌ ಲಸಿಕೆ ಹಾಕಿಸಿಕೊಳ್ಳದ ಆರೋಗ್ಯ ಹಾಗೂ ಮುಂಚೂಣಿ ಕ್ಷೇತ್ರದ ಫಲಾನುಭವಿಗಳು ಕೂಡಲೇ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಬೇಕು. ತಪ್ಪಿದಲ್ಲಿ ಸರ್ಕಾರದಿಂದ ಯಾವುದೇ ಸೌಲಭ್ಯ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ
ನೀಡಿದ್ದಾರೆ.

Advertisement

ಕೋವಿಡ್‌ ಲಸಿಕೆ ಕಾರ್ಯಕ್ರಮದ ಪ್ರಗತಿ ಕುರಿತಂತೆ ಬುಧವಾರ ಆರೋಗ್ಯ ಇಲಾಖೆಯ ಆಯುಕ್ತರು ನಡೆಸಿದ ವಿಡಿಯೋ ಕಾನ್‌# ರೆನ್ಸ್‌ ನಂತರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಅವರು ಮಾತನಾಡಿದರು. ಕೋವಿಡ್‌ ಲಸಿಕಾ ಕಾರ್ಯಕ್ರಮದ ಪ್ರಗತಿ ಪರಿಶೀಲಿಸಿದ ಆರೋಗ್ಯ
ಇಲಾಖೆ ಆಯುಕ್ತರು ಜಿಲ್ಲೆಯ ಪ್ರಗತಿ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದವರಿಗೆ ನೀಡಲಾದ ಕೋವಿಡ್‌ ಲಸಿಕೆ ಕಾರ್ಯಕ್ರಮದಲ್ಲಿ 18,920 ಫಲಾನುಭವಿಗಳಲ್ಲಿ ಈವರೆಗೆ 9,979 ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ. ಶೇ. 52.7 ಸಾಧನೆಯಾಗಿದೆ ಎಂದರು. ಎರಡನೆ ಹಂತದಲ್ಲಿ ಪೊಲೀಸ್‌, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌,ನಗರಾಭಿವೃದ್ಧಿ ಇಲಾಖೆ ಅ ಧಿಕಾರಿ, ಸಿಬ್ಬಂದಿಗಳಿಗೆ ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿ ಕೋವಿಡ್‌
ಲಸಿಕೆ ನೀಡಲು ಸರ್ಕಾರ ನಿರ್ಧರಿಸಿತ್ತು. ಪೊಲೀಸ್‌ ಇಲಾಖೆಯ 2,076 ಜನ ಫಲಾನುಭವಿಗಳಲ್ಲಿ ಕೇವಲ 629 ಜನ ಮಾತ್ರ ಪಡೆದಿದ್ದಾರೆ.

ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ 3,413 ಜನರಲ್ಲಿ 408, ನಗರಾಭಿವೃದ್ಧಿ ಇಲಾಖೆಯ 1,644
ಜನರಲ್ಲಿ 350 ಜನ ಮಾತ್ರ ಪಡೆದಿದ್ದಾರೆ. ಕೋವಿಡ್‌ ಲಸಿಕೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಧನೆ ತೃಪ್ತಿಕರವಾಗಿಲ್ಲ. ಕಳಪೆ ಸಾಧನೆಯನ್ನು ರಾಜ್ಯ ಆರೋಗ್ಯ ಇಲಾಖೆ ಆಯುಕ್ತರು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕೋವಿಡ್‌ ಲಸಿಕೆಗಾಗಿ ಗುರುತಿಸಲಾಗಿರುವ ಮೊದಲ ಹಾಗೂ ಎರಡನೆ ಹಂತದ ಫಲಾನುಭವಿಗಳು ಇದುವರೆಗೂ ಲಸಿಕೆ ಪಡೆಯದೇ ಇದ್ದಲ್ಲಿ
ಕೂಡಲೆ ಸಂಬಂಧಪಟ್ಟ ಲಸಿಕಾ ಕೇಂದ್ರದಲ್ಲಿ ಲಸಿಕೆ ಪಡೆದುಕೊಳ್ಳಬೇಕು. ಕೋವಿಡ್‌ ಲಸಿಕೆ ಪಡೆಯದೇ ಇರುವ ಫಲಾನುಭವಿಗಳು ಒಂದು ವೇಳೆ ಕೋವಿಡ್‌ ಸೋಂಕಿಗೆ ಒಳಗಾದಲ್ಲಿ ಅಂತಹವರು ಸ್ವಂತಕ್ಕೆ ಚಿಕಿತ್ಸಾ ವೆಚ್ಚ ಭರಿಸಬೇಕಾಗುತ್ತದೆ. ಸರ್ಕಾರದಿಂದ ಯಾವುದೇ ಸೌಲಭ್ಯ ನೀಡಲಾಗುವುದಿಲ್ಲ ಎಂಬುದಾಗಿ ಈಗಾಗಲೇ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಹಾಗಾಗ ಇದುವರೆಗೂ ಕೋವಿಡ್‌ ಲಸಿಕೆ ಪಡೆಯದೇ
ಇರುವವರು ಕೂಡಲೇ ತಂಡೋಪತಂಡವಾಗಿ ಆಯಾ ಲಸಿಕಾ ಕೇಂದ್ರಕ್ಕೆ ತೆರಳಿ, ಲಸಿಕೆ ಪಡೆಯಬೇಕು ಎಂದು ಸೂಚಿಸಿದರು.

Advertisement

ಜಿಲ್ಲಾ ಆರ್‌ಸಿಎಚ್‌ ಅಧಿ ಕಾರಿ ಡಾ| ಮೀನಾಕ್ಷಿ ಮಾತನಾಡಿ, ಆರೋಗ್ಯ ಕ್ಷೇತ್ರದ ಕಾರ್ಯಕರ್ತರಾದ ಖಾಸಗಿ ಮತ್ತು ನೋಂದಾಯಿತ ಆರೋಗ್ಯ
ಸಿಬ್ಬಂದಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ, ಮುಂಚೂಣಿ ಕಾರ್ಯಕರ್ತರಾದ ಪೊಲೀಸ್‌, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಹಾಗೂ ನಗರಾಭಿವೃದ್ಧಿ ಇಲಾಖೆ ಅ ಧಿಕಾರಿ, ಸಿಬ್ಬಂದಿಗಳು ಯಾವುದೇ ಎಸ್‌ಎಂಎಸ್‌ಗೆ
ಕಾಯದೆ, ಯಾವುದಾದರೂ ಒಂದು ಗುರುತಿನ ಚೀಟಿ ತೆಗೆದುಕೊಂಡು ಹೋಗಿ ಲಸಿಕೆ ಪಡೆಯಬಹುದು. ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ದಾವಣಗೆರೆ ಹಾಗೂ ಹರಿಹರ, ಜಗಳೂರು, ಹೊನ್ನಾಳಿ, ಚನ್ನಗಿರಿ ತಾಲ್ಲೂಕು ಆಸ್ಪತ್ರೆಗಳನ್ನು
ಕೋವಿಡ್‌-19 ಲಸಿಕಾಕರಣಕ್ಕಾಗಿ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

ಅಪರ ಜಿಲಾಧಿಕಾರಿ ಪೂಜಾರ್‌ ವೀರಮಲ್ಲಪ್ಪ ಆರೋಗ್ಯ ಇಲಾಖೆಯ ವಿವಿಧ ಅ ಧಿಕಾರಿಗಳು ಇದ್ದರು.

ಓದಿ : ದುಬೈ ಯುವರಾಣಿ ಗೋವಾದಲ್ಲಿ ಸೆರೆ ಸಿಕ್ಕಿದ್ದು ಹೇಗೆ, ಅಪ್ಪನೇ ಮಗಳನ್ನು ಜೈಲಿಗೆ ಹಾಕಿದ್ದೇಕೆ ?

Advertisement

Udayavani is now on Telegram. Click here to join our channel and stay updated with the latest news.

Next