Advertisement

ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಕಲ್ಪಿಸಿ

05:18 PM Feb 18, 2021 | |

ದಾವಣಗೆರೆ : ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಸ್ಥರ ಆತ್ಮನಿರ್ಭರ್‌ ಯೋಜನೆಯಡಿ (ಪಿಎಂ ಸ್ವನಿಧಿ  ಯೋಜನೆ) ನಗರ, ಪಟ್ಟಣ ಪ್ರದೇಶದ ಬೀದಿಬದಿ ವ್ಯಾಪಾರಸ್ಥರಿಗೆ ವಿಳಂಬ ಮಾಡದೆ ಕೂಡಲೇ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಬ್ಯಾಂಕ್‌ ಅಧಿ ಕಾರಿಗಳಿಗೆ ಸೂಚನೆ ನೀಡಿದರು.

Advertisement

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪಿಎಂ ಸ್ವನಿ ಧಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಿಎಂ ಸ್ವನಿಧಿ  ಯೋಜನೆಯಲ್ಲಿ ಜಿಲ್ಲೆಯಲ್ಲಿ 7,985 ಬೀದಿಬದಿ ವ್ಯಾಪಾರಸ್ಥರಿಗೆ ಒಂದು ಬಾರಿ ತಲಾ 10 ಸಾವಿರ ರೂ. ಸಾಲ ನೀಡುವ ಯೋಜನೆ ಇದೆ. ಸಾಲವನ್ನು ನಿಗದಿತ ಅವ ಧಿಯೊಳಗೆ ಮರು ಪಾವತಿಸುವವರಿಗೆ 1 ಸಾವಿರ ರೂ. ಪ್ರೋತ್ಸಾಹಧನ ನೀಡಲು ಅವಕಾಶವಿದೆ ಎಂದು ತಿಳಿಸಿದರು.

ಬೀದಿಬದಿ ವ್ಯಾಪಾರಿಗಳು ಅಂದೇ ದುಡಿದು, ಜೀವನ ಸಾಗಿಸುವ ಶ್ರಮ ಜೀವಿಗಳು. ಅಂತಹವರಿಗಾಗಿಯೇ ಯೋಜನೆ ರೂಪಿಸಲಾಗಿದೆ. ಹತ್ತು ಸಾವಿರ ರೂಪಾಯಿ ಬದುಕು ಸಾಗಿಸಲು ಉತ್ತೇಜನ ನೀಡುವಂತಹದ್ದು. ಜಿಲ್ಲೆಯಲ್ಲಿ ಈವರೆಗೆ 7,643 ಜನ ಯೋಜನೆಗಾಗಿ ಅರ್ಜಿ ಸಲ್ಲಿಸಿದ್ದು, 4,419 ಜನರಿಗೆ ಸಾಲ ಮಂಜೂರಾಗಿದ್ದರೆ, 2362 ಜನರಿಗೆ ಸಾಲದ ಮೊತ್ತ ವಿತರಣೆಯಾಗಿದೆ. ಹೀಗಾಗಿ ಮಂಜೂರಾತಿ ಬಾಕಿ ಉಳಿದಿದ್ದಲ್ಲಿ
ಅರ್ಹ ಫಲಾನುಭವಿಗಳಿಗೆ ಕೂಡಲೆ ಸಾಲ ಮಂಜೂರಾಗಬೇಕು.ಈವರೆಗೆ ಮಂಜೂರಾಗದ ಅಥವಾ ಸಾಲ ಸೌಲಭ್ಯ ವಿತರಣೆಯಾಗದ
ಫಲಾನುಭವಿಗಳ ಬಗ್ಗೆ ಯಾವುದೇ ತೊಂದರೆಗಳಿದ್ದಲ್ಲಿ, ನಗರ, ಸ್ಥಳೀಯ ಸಂಸ್ಥೆ ಅಧಿ ಕಾರಿಗಳು, ಅರ್ಹರಿಗೆ ಸೌಲಭ್ಯ ವಿತರಣೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಆಕ್ಸಿಸ್‌ ಬ್ಯಾಂಕ್‌ 15 ಜನರಿಗೆ ಸಾಲ ಸೌಲಭ್ಯ ಮಂಜೂರು ಮಾಡಬೇಕಾದ ಗುರಿಗೆ ಇದುವರೆಗೂ ಒಂದು ಫಲಾನುಭವಿಗೂ ಸಾಲ ವಿತರಿಸದ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿ ಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಒಂದು ವಾರದ ಒಳಗಾಗಿ ಎಲ್ಲ ಫಲಾನುಭವಿಗಳಿಗೂ ಸಾಲ ಸೌಲಭ್ಯ ಮಂಜೂರು ಮಾಡದಿದ್ದಲ್ಲಿ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಜಿ. ನಜ್ಮಾ, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಸುಶ್ರುತ್‌ ಶಾಸ್ತ್ರಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಅಭಿಯಾನ ವ್ಯವಸ್ಥಾಪಕ ಬಸವರಾಜ್‌, ವಿವಿಧ ಬ್ಯಾಂಕ್‌ಗಳ ಅಧಿ ಕಾರಿಗಳು ಇದ್ದರು.

Advertisement

ಓದಿ : ದುಬೈ ಯುವರಾಣಿ ಗೋವಾದಲ್ಲಿ ಸೆರೆ ಸಿಕ್ಕಿದ್ದು ಹೇಗೆ, ಅಪ್ಪನೇ ಮಗಳನ್ನು ಜೈಲಿಗೆ ಹಾಕಿದ್ದೇಕೆ ?

Advertisement

Udayavani is now on Telegram. Click here to join our channel and stay updated with the latest news.

Next