Advertisement

ದೇಶದಲ್ಲಿ ಸಾಮಾಜಿಕ ಭದ್ರತೆ ಮರೀಚಿಕೆ

04:07 PM Feb 21, 2021 | Team Udayavani |

ದಾವಣಗೆರೆ: ದೇಶದಲ್ಲಿ ರೈತರು ಆರ್ಥಿಕವಾಗಿ, ನೈತಿಕವಾಗಿ ಮತ್ತು ಸಾಂಸ್ಕೃತಿಕವಾಗಿ ದಿವಾಳಿಯಾಗಿದ್ದಾರೆ. ಕಳೆದ 20 ವರ್ಷದಲ್ಲಿ ಮೂರು ಲಕ್ಷಕ್ಕಿಂತ ಹೆಚ್ಚು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಮಾಜಿಕ ನ್ಯಾಯದಡಿ ಅವರಿಗೆ ಅವ ಹಕ್ಕು ಒದಗಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಮನಹರಿಸಬೇಕು ಎಂದು ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ನಾಗಮೋಹನ ದಾಸ್‌ ಹೇಳಿದರು.
ನಗರದ ಆರ್‌.ಎಲ್‌. ಕಾನೂನು ಕಾಲೇಜಿನಲ್ಲಿ ಸಾಮಾಜಿಕ ನ್ಯಾಯ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಉಪನ್ಯಾಸ
ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Advertisement

ದೇಶದಲ್ಲಿ ದಿನೇ ದಿನೇ ಜಾತಿ ಪ್ರಭಾವ, ಹಣದ ಪ್ರಭಾವ ಹೆಚ್ಚಾಗಿ ದಲಿತರ ಮೇಲೆ ದೌರ್ಜನ್ಯ, ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿವೆ. ತೈಲ ಬೆಲೆ ಏರಿಕೆಯಿಂದ ಜನ ಜೀವನ ದುಬಾರಿಯಾಗಿದೆ. ಇಂತಹ ವ್ಯವಸ್ಥೆ ವಿರುದ್ಧ ಜನ ಧ್ವನಿ ಎತ್ತದೆ ಇರುವುದು ವಿಷಾದನೀಯ ಎಂದರು. ದೇಶದಲ್ಲಿ ಒಂದಿಷ್ಟು ಅಭಿವೃದ್ಧಿ ಸಾಧಿಸಲಾಗಿದೆಯಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಭಿನ್ನ ನೀತಿಗಳಿಂದ ಜನ ಸೌಲಭ್ಯಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಎಂದು ಆತಂಕ ವ್ಯಕ್ತಪಡಿಸಿದರು. ಕಾನೂನು ಕಾಲೇಜು ಪ್ರಾಂಶುಪಾಲ ಡಾ| ಎಂ. ಸೋಮಶೇಖರಪ್ಪ ಅಧ್ಯಕ್ಷತೆ
ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಡಿ.ಪಿ. ಬಸವರಾಜ, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್‌.ಎಚ್‌. ಅರುಣ್‌ಕುಮಾರ್‌, ಜಿ.ಎಸ್‌.ಯತೀಶ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಓದಿ : ಗ್ರಾಮ ವಾಸ್ತವ್ಯ: ಅರ್ಜಿಗಳ ಸುರಿಮಳೆ

 

Advertisement

Udayavani is now on Telegram. Click here to join our channel and stay updated with the latest news.

Next