Advertisement
ತಾಲೂಕಿನ ಮಾದಪುರ ಗ್ರಾಮದಲ್ಲಿ ಕೆಎಸ್ ಡಿಎಲ್‌ದಿಂದ ಮಂಜೂರಾದ 11 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶಾಲಾ ಕೊಠಡಿ ಹಾಗೂ 15 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಈಗಾಗಲೇ ಚನ್ನಗಿರಿ ಕ್ಷೇತ್ರದ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಗಳಾದ ಕುಡಿಯುವ ನೀರು, ರಸ್ತೆ, ಚರಂಡಿ, ಸೇರಿದಂತೆ ಯಾವುದೇ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿಯೇ ಚನ್ನಗಿರಿ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಪಣ ತೊಟ್ಟಿದ್ದು, ಇದಕ್ಕೆ ಕ್ಷೇತ್ರದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.
ಸಿಗುವಂತಹ ಸೌಲಭ್ಯಗಳನ್ನು ಯಾರೊಬ್ಬರು ಯೋಜನೆಗಳಿಗೆ ಸಹಕಾರ ನೀಡಬೇಕು. ಸರ್ಕಾರದಿಂದ ಮಾತ್ರ ಅಭಿವೃದ್ಧಿ ಅಸಾಧ್ಯ. ಅದಕ್ಕೆ ಜನತೆ ಕೂಡ ಕೈಜೋಡಿಸಿದರೆ ಬದಲಾವಣೆ ಕಾಣಬಹುದು. ಒಂದೊಮ್ಮೆ ಅ ಧಿಕಾರಿಗಳು ಮಾತು ಕೇಳದಿದ್ದರೆ ನೇರವಾಗಿ ನನ್ನ ಗಮನಕ್ಕೆ ತರಬಹುದು. ಯಾವುದೇ ಕಾರಣಕ್ಕೂ ಹಿಂಜರಿಕೆ ಮನೋಭಾವ ಇಟ್ಟುಕೊಳ್ಳಬಾರದು ಎಂದು ತಿಳಿಸಿದರು. ಗ್ರಾಪಂ ಅಧ್ಯಕ್ಷೆ ಅನ್ನಪೂರ್ಣಮ್ಮ, ಕೆಂಚಪ್ಪ, ದೇವೇಂದ್ರಪ್ಪ, ಬಿಇಒ ಮಂಜುನಾಥ್ ಮತ್ತಿತರರು ಇದ್ದರು.
Related Articles
Advertisement