Advertisement

ರಾಯಣ್ಣ ಕಂಚಿನ ಪುತ‍್ಥಳಿ ನಾಳೆ ಅನಾವರಣ

06:30 PM Apr 01, 2021 | Team Udayavani |

ಹೊನ್ನಾಳಿ: ತಾಲೂಕಿನ ಯಕ್ಕನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಅನಾವರಣ ಸಮಾರಂಭವನ್ನು ಏ. 2 ರಂದು ಬೆಳಿಗ್ಗೆ 11:45ಕ್ಕೆ ಯಕ್ಕನಹಳ್ಳಿ ಗ್ರಾಮದ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಬಿ. ಮಂಜಪ್ಪ ತಿಳಿಸಿದರು.

Advertisement

ಪಟ್ಟಣದ ಪ್ರವಾಸಿಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣನ ಕಂಚಿನ ಪುತ್ಥಳಿಯನ್ನು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅನಾವರಣಗೊಳಿಸಲಿದ್ದಾರೆ. ಕೆ.ಆರ್‌. ನಗರದ ಕಾಗಿನೆಲೆ ಕನಕ ಗುರುಪೀಠದ ಶ್ರೀ ಶಿವಾನಂದಪುರಿ ಸ್ವಾಮೀಜಿ, ಚಂದ್ರಗಿರಿ ಮಠದ ಸದ್ಗುರು ಮುರುಳೀಧರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಅಧ್ಯಕ್ಷತೆಯನ್ನು ಬೀರಲಿಂಗೇಶ್ವರ ಟ್ರಸ್ಟ್‌ ಸಮಿತಿ ಅಧ್ಯಕ್ಷ ಬಿ. ಕರಿಬಸಪ್ಪ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಚಿವರಾದ ಬೈರತಿ ಬಸವರಾಜ್‌, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಶಾಸಕರಾದ ಶಾಮನೂರು ಶಿವಶಂಕರಪ್ಪ, ಬೈರತಿ ಸುರೇಶ್‌, ಎಸ್‌. ರಾಮಪ್ಪ, ಪ್ರಸನ್ನಕುಮಾರ್‌, ಮಾಜಿ ಸಚಿವರಾದ ಎಚ್‌.ಎಂ. ರೇವಣ್ಣ, ಎಚ್‌. ಆಂಜನೇಯ, ಮಾಜಿ ಮಾಜಿ ಶಾಸಕರಾದ ಡಿ.ಜಿ. ಶಾಂತನಗೌಡ, ಬಿ.ಜಿ. ಗೋವಿಂದಪ್ಪ, ಯಕ್ಕನಹಳ್ಳಿ ಗ್ರಾಮದ ಸಿದ್ಧಾರೂಢ ಮಠದ ಅಧ್ಯಕ್ಷ ಬಿ. ಬಸವರಾಜಪ್ಪ ಇತರ ಜನಪ್ರತಿನಿ ಗಳು ಭಾಗಹಿಸುವರು ಎಂದು ಹೇಳಿದರು. ಬೀರಲಿಂಗೇಶ್ವರ ಟ್ರಸ್ಟ್‌ ಸಮಿತಿ ಅಧ್ಯಕ್ಷ ಬಿ. ಕರಿಬಸಪ್ಪ ಮಾತನಾಡಿ, ಸಂಗೊಳ್ಳಿ ರಾಯಣ್ಣನ ಕಂಚಿನ ಪ್ರತಿಮೆ ನಿರ್ಮಾಣ ಮಾಡಲು ಎಲ್ಲಾ ಸಮಾಜಗಳ ದಾನಿಗಳು ಧನಸಹಾಯ ಮಾಡಿದ್ದಾರೆ ಎಂದರು.

ಮುಖಂಡರಾದ ಎಚ್‌.ಎ. ಉಮಾಪತಿ, ಬಿ. ಸಿದ್ದಪ್ಪ, ಎಂ.ಬಿ. ದ್ಯಾಮಪ್ಪ, ಮರುಳಸಿದ್ದಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next