Advertisement

ನಿಯಮ ಉಲ್ಲಂಘನೆಗೆ ದಂಡದ ಬಿಸಿ

03:09 PM Apr 20, 2021 | Team Udayavani |

ದಾವಣಗೆರೆ: ಕೋವಿಡ್‌ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಸೋಮವಾರ ಸಂಜೆ ಜಿಲ್ಲಾಧಿ ಕಾರಿ ಮಹಾಂತೇಶ ಬೀಳಗಿ ನೇತೃತ್ವದ ಅಧಿಕಾರಿಗಳ ತಂಡ ನಗರದ ಗಡಿಯಾರಕಂಬ, ಕಾಳಿಕಾದೇವಿ ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಸಂಚರಿಸಿತು. ಮಾಸ್ಕ್ ಧರಿಸದವರಿಗೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಅಂಗಡಿಗಳ ಮೇಲೆ ದಂಡ ಹಾಕುವ ಮೂಲಕ ಚುರುಕು ಮುಟ್ಟಿಸುವುದರ ಜೊತೆಗೆ ಕೊರೊನಾ ಸೋಂಕಿನ ಕುರಿತು ಜಾಗೃತಿ ಮೂಡಿಸಲಾಯಿತು. ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಿ ವ್ಯಾಪಾರ ಪರವಾನಗಿಯನ್ನು ರದ್ದು ಮಾಡುವ ಎಚ್ಚರಿಕೆ ನೀಡಲಾಯಿತು. ಗಡಿಯಾರದ ಕಂಬ ಬಳಿ ಹಾಗೂ ಕಾಳಿಕಾದೇವಿ ರಸ್ತೆ, ವಿಜಯಲಕ್ಷ್ಮೀ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಜನ ಸಂದಣಿ ಕಂಡುಬಂದಿತು.

Advertisement

ಬಟ್ಟೆ ಅಂಗಡಿಗಳು, ಚಿನ್ನಾಭರಣ, ಫ್ಯಾನ್ಸಿ ಅಂಗಡಿಗಳು ಸೇರಿದಂತೆ ವಿವಿಧ ಅಂಗಡಿಗಳು ಗ್ರಾಹಕರಿಂದ ತುಂಬಿ ತುಳುಕುತ್ತಿದ್ದವು. ಯಾವುದೇ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಹಾಗೂ ಕೋವಿಡ್‌ ತಡೆಗಟ್ಟುವ ನಿಟ್ಟಿನಲ್ಲಿ ಅಂಗಡಿಕಾರರು ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವುದು ಕಂಡು ಬಂದಿತು. ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ವಹಿವಾಟ ನಡೆಸುವುದನ್ನು ಕಂಡು ಅಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಂಗಡಿಯವರು ಹಾಗೂ ಸಾರ್ವಜನಿಕರ ವರ್ತನೆಗಳಿಂದಲೇ ಕೊರೊನಾ ವ್ಯಾಪಕವಾಗಿ ಹಬ್ಬುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಳಿಕಾದೇವಿ ರಸ್ತೆಯಲ್ಲಿನ ಜವಳಿ ಅಂಗಡಿಗೆ ತೆರಳಿ ಪರಿಶೀಲನೆ ನಡೆಸಿದ ಜಿಲ್ಲಾಧಿ ಕಾರಿಗಳು ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದನ್ನು ಕಂಡು ಬೇಸರ ವ್ಯಕ್ತಪಡಿಸಿದರು.

ಎರಡೂ ಅಂಗಡಿಗಳಿಗೆ ತಲಾ 50 ಸಾವಿರ ರೂಪಾಯಿ ದಂಡ ವಿಧಿ ಸಿದರು. ಪರಿಸ್ಥಿತಿಯನ್ನು ನಿಭಾಯಿಸದಿದ್ದರೆ ಅಂಗಡಿಗಳ ಪರವಾನಗಿ ರದ್ದುಪಡಿಸಿ ಮುಚ್ಚಿಸುವುದಾಗಿ ಎಚ್ಚರಿಕೆ ನೀಡಿದರು. ಇನ್ನೊಂದು ಜವಳಿ ಅಂಗಡಿಯಲ್ಲಿಯೂ ಇದೇ ಸ್ಥಿತಿ ಇರುವುದನ್ನು ಕಂಡು, 10 ಸಾವಿರ ರೂಪಾಯಿ ದಂಡ ವಿಧಿ ಸಿದರು. ದಂಡ ಪಾವತಿಸಲು ನಿರಾಕರಿಸಿದ್ದಕ್ಕಾಗಿ ಕರ್ನಾಟಕ ವಿಪತ್ತು ನಿರ್ವಹಣೆ ಕಾಯ್ದೆಯನ್ವಯ ಎಫ್‌ ಐಆರ್‌ ದಾಖಲಿಸುವಂತೆ ಅ ಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿ  ಕಾರಿ ಮಹಾಂತೇಶ ಬೀಳಗಿ, ಭಾನುವಾರ ತರಕಾರಿ ಮಾರುಕಟ್ಟೆಗೆ ತೆರಳಿ ಮಾಸ್ಕ್ ಕುರಿತು ಜಾಗೃತಿ ಮೂಡಿಸಲಾಯಿತು. ಗಡಿಯಾರಕಂಬ, ಕಾಳಿಕಾದೇವಿ ರಸ್ತೆ ಮುಂತಾದ ಜನನಿಬಿಡ ಸ್ಥಳಗಳಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುತ್ತಿಲ್ಲ, ಸಾಮಾಜಿಕ ಅಂತರ ಪಾಲಿಸುತ್ತಿಲ್ಲ ಎಂಬ ದೂರುಗಳು ಕೇಳಿಬಂದ ಕಾರಣ, ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಸರ್ಕಾರ ಹಾಗೂ ಜಿಲ್ಲಾಡಳಿತ ಕೋವಿಡ್‌ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಅಣಕಿಸುವ ರೀತಿಯಲ್ಲಿ ಅಂಗಡಿಯವರು ಹಾಗೂ ಸಾರ್ವಜನಿಕರು ವರ್ತಿಸುತ್ತಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ. ಈಗಾಗಲೆ ಯಾವುದೇ ಸಭೆ, ಸಮಾರಂಭ, ಧಾರ್ಮಿಕ ಸಮಾರಂಭಗಳ ಆಯೋಜನೆಯನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದರು.

ಜನರು ಮತ್ತು ವ್ಯಾಪಾರಸ್ಥರು ಕಡ್ಡಾಯವಾಗಿ ನಿಯಮ ಪಾಲನೆ ಮಾಡಬೇಕು. ಉಲ್ಲಂಘಿಸಿದವರಿಗೆ ಪ್ರಥಮ ಹಂತವಾಗಿ ದಂಡ ವಿ ಧಿಸಲಾಗಿದೆ ಹಾಗೂ ದಂಡ ಕಟ್ಟದವರ ಅಂಗಡಿಯನ್ನು ಮುಚ್ಚಿಸಿ ಮಾಲೀಕರ ವಿರುದ್ಧ ದೂರು ದಾಖಲು ಮಾಡಲಾಗುವುದು ಎಂದರು. ಸಾಮಾಜಿಕ ಅಂತರ ಕಾಪಾಡದ ಹಾಗೂ ನಿಗ  ಪಡಿಸಿದ ಜನಕ್ಕಿಂತ ಹೆಚ್ಚು ಜನ ಭಾಗವಹಿದ್ದ ಕಾರಣ 2 ಕಲ್ಯಾಣ ಮಂಟಪಗಳಿಗೆ ತಲಾ 10 ಸಾವಿರ ರೂಪಾಯಿ ದಂಡ ವಿಧಿಸಿ ಎಚ್ಚರಿಕೆ ನಿಡಲಾಗಿದೆ. ಮುಂದಿನ ದಿನಗಳಲ್ಲಿ ಮುಂದುವರೆದರೆ ಪರವಾನಗಿಯನ್ನು ರದ್ದು ಪಡಿಸಿ, ಕೇಸ್‌ ದಾಖಲು ಮಾಡಲಾಗುತ್ತದೆ ಎಂದರು.

Advertisement

ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಮಾತನಾಡಿ, ಕೋವಿಡ್‌ ತಡೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಮತ್ತು ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಸಾರ್ವನಿಕರು ಮತ್ತು ವ್ಯಾಪಾರಿಗಳು ನಿಯಮಾವಳಿಗಳನ್ನು ಪಾಲನೆ ಮಾಡಬೇಕು. ಉಲ್ಲಂಘಿಸಿದಲ್ಲಿ ದಂಡ ವಿಧಿಸಲಾಗುವುದು. ಮುಂದಿನ ದಿನಗಳಲ್ಲಿ ಇನ್ನು ಕಠಿಣ ನಿಯಮಗಳನ್ನು ಜಾರಿಗೆ ತರಲಾಗುವುದು ಎಂದರು. ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್‌ ಮುದಜ್ಜಿ, ತಹಶೀಲ್ದಾರ್‌ ಬಿ.ಎನ್‌. ಗಿರೀಶ್‌ ಇತರೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next