ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿದಂತ ಐಟಿ ಲೆವೆಲ್ ಅಡ್ವೈಸರಿ ಸಭೆಯಲ್ಲಿ
ಮಾತನಾಡಿದ ಅವರು, ವಾಸ್ತವ ಸಂಗತಿಗಳ ಮಾಹಿತಿ ಇಲ್ಲದೆ ತಿಳಿಯದೆ, ಕುಂದವಾಡ ಕೆರೆ ಅಭಿವೃದ್ಧಿ ಯೋಜನೆಯು ಪರಿಸರ ವಿರೋ ಧಿ ಎಂದು ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
Advertisement
ಕುಂದವಾಡ ಕೆರೆ ಪ್ರಸ್ತುತ ಕೇವಲ ಕೆರೆ ಮಾತ್ರವಲ್ಲದೆ ನಗರಕ್ಕೆ ಕುಡಿಯುವ ನೀರಿಗೆ ಆಧಾರವಾಗಿರುವ ಪ್ರಮುಖ ನೀರು ಸಂಗ್ರಹಗಾರವಾಗಿದೆ. ಕುಂದವಾಡ ಕೆರೆ ಅಭಿವೃದ್ಧಿಯ ಉದ್ದೇಶ ಕುರಿತ ವಾಸ್ತವ ಅಂಶಗಳನ್ನು ಸರಿಯಾದ ರೀತಿಯಲ್ಲಿ ಪ್ರಚುರಪಡಿಸಿದಲ್ಲಿ, ಯೋಜನೆ ಕುರಿತಂತೆ ಇರುವ ತಪ್ಪು ಅಭಿಪ್ರಾಯಗಳು ದೂರವಾಗಲು ಸಾಧ್ಯ. ಆ ನಿಟ್ಟಿನಲ್ಲಿ ಸ್ಮಾರ್ಟ್‌ಸಿಟಿ ಅಧಿಕಾರಿಗಳು ಜನಜಾಗೃತಿ ಮೂಡಿಸಿ ಎಂದುಸೂಚನೆ ನೀಡಿದರು.
ಸ್ಮಾರ್ಟ್‌ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಮಾತನಾಡಿ, ಕುಂದುವಾಡ ಕೆರೆಯ ಕುಡಿಯುವ ನೀರಿನ
ಪ್ರಮುಖ ಸಂಗ್ರಹಗಾರವಾಗಿದ್ದು, ಬೇಸಿಗೆಯಲ್ಲಿ ಕೆರೆ ಏರಿ ಮೇಲಿನ ಕಳೆ, ಗಿಡಗಂಟೆ ಇತ್ಯಾದಿಗಳ ಕೊಳೆಯುವಿಕೆಯಿಂದ ನೀರು ಹಸಿರುಗಟ್ಟಿ ಕುಡಿಯಲು ಯೋಗ್ಯವಾಗದ ರೀತಿ ಪರಿವರ್ತನೆ ಆಗುತ್ತದೆ, ನೀರು ಕಲುಷಿತಗೊಳ್ಳುವುದರಿಂದ ಕೆರೆಯಲ್ಲಿನ ಮೀನುಗಳು, ಜೀವವೈವಿಧ್ಯಗಳು ಸಾಯುತ್ತವೆ. ಕೆರೆಯ ಏರಿಯಲ್ಲಿನ ನೀರು ಬಸಿಯುವಿಕೆ, ಹಾಳಾಗಿರುವ ಏರಿ ಮೇಲಿನ ಕಲ್ಲುಹೊದಿಕೆ ಮುಂತಾದ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಲು ಕೆರೆ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಒಂದೂವರೆ ವರ್ಷದ ಹಿಂದೆಯೇ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದೆ ಎಂದು ತಿಳಿಸಿದರು.
ಸಾರ್ವಜನಿಕರ ಅನುಕೂಲಕ್ಕೆ ಏರಿಯ ಮೇಲೆ ವಿದ್ಯುತ್ ದೀಪ ಅಳವಡಿಕೆ, ಹೂವಿನ ಗಿಡ ಬೆಳೆಸುವುದು, ಕಲ್ಲು ಬೆಂಚು ಅಳವಡಿಕೆ, ವಾಕಿಂಗ್ ಪಾತ್, ಸೈಕಲ್ ಟ್ರಾಕ್ ನಿರ್ಮಾಣ ಮಾಡಲಾಗುತ್ತಿದೆ. ಕೆರೆಯ ಒಳಗೆ ಸಾರ್ವಜನಿಕರು ಹಾಗೂ ಪ್ರಾಣಿಗಳು ಹೋಗದಂತೆ ಚೈನ್‌ಲಿಂಕ್ ತಂತಿ ಬೇಲಿ ಅಳವಡಿಸಲು ಉದ್ದೇಶಿಸಲಾಗಿದೆ.
ಈ ಕೆರೆಗೆ ಯಾವುದೇ ಮಳೆ ನೀರಿನ ಒಳಹರಿವು ಇಲ್ಲದಿರುವುದರಿಂದ, ತುಂಗಭದ್ರಾ ನದಿ ಮತ್ತು ಭದ್ರಾ ಕಾಲುವೆ ಮೂಲಕ ಹರಿಸಿ ತುಂಬಿಸಲಾಗುತ್ತಿದೆ. ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯ ವಿಷಯ ಆಗಿರುವುದರಿಂದ ಕೆರೆಯಲ್ಲಿ ಸ್ವತ್ಛ ಪರಿಸರ ಹಾಗೂ ನೈರ್ಮಲ್ಯ ಕಾಪಾಡಿಕೊಳ್ಳುವುದರ ಜತೆಗೆ ಜನರಿಗೆ ಸತ್ಯಾಂಶಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.
ಜಿಲ್ಲಾಧಿ ಕಾರಿ ಮಹಾಂತೇಶ್ ಬೀಳಗಿ, ನಗರ ಪಾಲಿಕೆ ಆಯುಕ್ತರು ಕೂಡಲೇ ಅಂತಹ ಒತ್ತುವರಿಯನ್ನು ತೆರವುಗೊಳಿಸಿ, ಚರಂಡಿ ನಿರ್ಮಾಣ ಕಾರ್ಯಕ್ಕೆ ಅನುವು ಮಾಡಿಕೊಡಬೇಕು. ಯಾವುದೇ ಪ್ರಭಾವಗಳಿಗೆ ಮಣಿಯದೆ, ತುರ್ತಾಗಿ ತೆರವುಗೊಳಿಸುವಂತೆ ನಿರ್ದೇಶನ ನೀಡಿದರು. ಈಗಾಗಲೇ 1 ಮತ್ತು 2 ನೇ ಹಂತದಲ್ಲಿ ಒಟ್ಟು 29 ಇ-ಟಾಯ್ಲೆಟ್ ನಿರ್ಮಾಣವಾಗಿದ್ದು, ಇನ್ನೂ 17 ನಿರ್ಮಾಣವಾಗಬೇಕಿದೆ. ಆದರೆ, ಹಲವೆಡೆ
ಇ-ಟಾಯ್ಲೆಟ್‌ಗಳ ಅಸಮರ್ಪಕ ನಿರ್ವಹಣೆಯಿಂದ ಹಾಳಾಗಿದ್ದು, ದೂರುಗಳು ಕೇಳಿಬರುತ್ತಿವೆ ಎಂದು ಸಂಸದರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಇ-ಟಾಯ್ಲೆಟ್‌ಗಳನ್ನು ಸಾರ್ವಜನಿಕರನುಕೂಲಕ್ಕಾಗಿ ಸದುದ್ದೇಶದಿಂದ ನಿರ್ಮಿಸಿದ್ದು, ಕೆಲವು ಕಿಡಿಗೇಡಿಗಳು ಕಾಯಿನ್ ಬಾಕ್ಸ್‌ನಲ್ಲಿ ಕಬ್ಬಿಣದ
ತುಂಡು, ಕಟ್ಟಿಗೆ ತುಂಡುಗಳನ್ನು ಹಾಕಿ ಹಾಳು ಮಾಡುತ್ತಿದ್ದಾರೆ. ನಗರದಲ್ಲಿ ಎಲ್ಲ 46 ಇ-ಟಾಯ್ಲೆಟ್ ಗಳನ್ನು ನಿರ್ಮಾಣ ಮಾಡಿ, ನಿರ್ವಹಣೆಗಾಗಿ
ಮಹಾನಗರಪಾಲಿಕೆಗೆ ಹಸ್ತಾಂತರ ಮಾಡಲಾಗುವುದು ಎಂದು ರವೀಂದ್ರ ಮಲ್ಲಾಪುರ ತಿಳಿಸಿದರು.
ರಸ್ತೆ ಸುರಕ್ಷತೆಗಾಗಿ ಫ್ಲೆಕ್ಸಿಬಲ್ ಮೀಡಿಯನ್, ಮಾರ್ಕರ್, ಸೋಲಾರ್ ಬ್ಲಿಂಕರ್ಗಳನ್ನು ಕಳವು ಮಾಡಿಕೊಂಡು, ತಮ್ಮ ವಾಹನಗಳಿಗೆ ಅಳವಡಿಸಿರುವುದು ಕಂಡುಬಂದಿದ್ದು, ಅಂತಹ ವಾಹನಗಳ ಫೋಟೋ ಸಹಿತ ನಗರದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಇನ್ನೂ ಕ್ರಮ ಕೈಗೊಂಡಿಲ್ಲ ಎಂದರು.
ಶಾಸಕ ಎಸ್.ಎ. ರವೀಂದ್ರನಾಥ್, ಮಹಾಪೌರ ಅಜಯ್‌ಕುಮಾರ್, ಆಯುಕ್ತ ವಿಶ್ವನಾಥ ಮುದಜ್ಜಿ ಇತರರು ಇದ್ದರು.
Related Articles
Advertisement