ದಾವಣಗೆರೆ: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಎಸ್‌ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆಯ ಕೋವಿಡ್ ಆಸ್ಪತ್ರೆ ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಬುಧವಾರ ಪರಿಶೀಲನೆ ನಡೆಸಿದರು.
ಇಎಸ್‌ಐ ಆಸ್ಪತ್ರೆಯಲ್ಲಿ 40 ಆಕ್ಸಿಜನ್ ಮತ್ತು 40 ಐಸೊಲೇಶನ್ ಬೆಡ್‌ಗಳು ಸೇರಿದಂತೆ ಒಟ್ಟು 80 ಬೆಡ್‌ಗಳ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲು ಬೇಕಾದ ಅಗತ್ಯತೆಗಳ ಬಗ್ಗೆ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದರು. ಆಸ್ಪತ್ರೆ ಅಧೀಕ್ಷಕ ಡಾ| ಬಸವನಗೌಡ ಮಾತನಾಡಿ, ಆಕ್ಸಿಜನ್ ಮತ್ತು ವೆಂಟಿಲೇಟರ್ ವ್ಯವಸ್ಥೆಗೆ 19 ಪಾಯಿಂಟ್ ಇವೆ. 2 ಕಡೆ ಲೀಕೇಜ್ ಆಗುತ್ತಿದ್ದು, ಇನ್ನೊಬ್ಬ ಟೆಕ್ನಿಷಿಯನ್ ಅಗತ್ಯವಿದೆ. ಬೆಡ್, ಸಿಲಿಂಡರ್, ಫ್ಯಾನ್ ಸೇರಿದಂತೆ ಮೂಲ ಸೌಕರ್ಯ, ಮಾನವ ಸಂಪನ್ಮೂಲ ಕೊರತೆ ಇದ್ದು ಸಾಧ್ಯವಾದಷ್ಟು ಜಿಲ್ಲಾಡಳಿತಕ್ಕೆ ಸಹಾ ಯ ಮಾಡಲು ಬದ್ಧರಿದ್ದೇವೆ ಎಂದರು.
ಅರಿವಳಿಕೆ ತಜ್ಞೆ ಡಾ| ನಂದಿನಿ ಮಾತನಾಡಿ, ಆಸ್ಪತ್ರೆಯಲ್ಲಿ ಐಸಿಯು ಇಲ್ಲವಾದ್ದರಿಂದ ಸಿಬ್ಬಂದಿಗಳಿಗೆ ಐಸಿಯು ನಿರ್ವಹಣೆ ಅನುಭವ ಇಲ್ಲ. ಒಂದು ವಾರದ ತರಬೇತಿ ಕೊಟ್ಟಲ್ಲಿ ಅನುಕೂಲವಾಗುತ್ತದೆ. ಆಸ್ಪತ್ರೆಯಲ್ಲಿ 19 ಬೆಡ್‌ಗಳಿಗೆ ಆಕ್ಸಿಜನ್ ವ್ಯವಸ್ಥೆ ಇದೆ. 11 ಜಂಬೋ, 26 ಸಣ್ಣ ಸಿಲಿಂಡರ್ ಹಾಗೂ 15 ಔಟ್‌ಲೆಟ್ ಬೇಕಾಗುತ್ತದೆ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಬೀಳಗಿ ಮಾತನಾಡಿ, ಆಸ್ಪತ್ರೆಗೆ 100 ಜಂಬೋ ಸಿಲಿಂಡರ್ ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ಜಿಲ್ಲಾ ರಕ್ಷಣಾಧಿಕಾರಿಗೆ ವಹಿಸಲಾಗುವುದು. 70 ಮಂಚಗಳನ್ನು ಹೊರಗಡೆಯಿಂದ ತರಿಸಲಾಗುವುದು. ಕಾಟನ್ ಬೆಡ್, ಫ್ಯಾನ್, ಐವಿ ಡ್ರಿಪ್, ಆಕ್ಸಿಜನ್ ಸಿಲಿಂಡರ್, ಬಿಪಿ ಆಪರೇಟರ್ ಗಳನ್ನು ದಾನಿಗಳಿಂದ ಪೂರೈಸುತ್ತೇವೆ. ಟ್ರಾಲಿ, ವ್ಹೀಲ್‌ಚೇರ್ ಇತರೆ ಸವಲತ್ತುಗಳ ಕುರಿತು ಮಾಹಿತಿ ನೀಡಿದರೆ ಪೂರೈಸಲಾಗುವುದು ಎಂದು ಹೇಳಿದರು.
ಆಸ್ಪತ್ರೆಯಲ್ಲಿ ಹೊರರೋಗಿಗಳ ಚಿಕಿತ್ಸೆಗೆ ಧಕ್ಕೆ ಆಗದಂತೆ ಕೋವಿಡ್ ಚಿಕಿತ್ಸೆ ಪ್ರಾರಂಭಿಸಬೇಕು. ಸಾಮಾನ್ಯ ಹಾಗೂ ಕೋವಿಡ್ ಸೋಂಕಿತ ರೋಗಿಗಳಿಗೆ ಪ್ರತ್ಯೇಕ ದ್ವಾರ ಮಾಡಬೇಕು ಹಾಗೂ ಸಂಬಂಧಪಟ್ಟ ವೈದ್ಯರು, ಸಿಬ್ಬಂದಿಗಳು ಸಹ ಆಯಾ ದ್ವಾರಗಳ ಮೂಲಕವೇ ಹೋಗಿ ಬರಬೇಕು. ಸೋಂಕಿತರಿಗೆ ಬಿಸಿನೀರು ವ್ಯವಸ್ಥೆ ಮಾಡಲು ಮತ್ತು ಆಸ್ಪತ್ರೆಗೆ ಬಂದ ರೋಗಿಗಳು ಬಿಸಿ ನೀರು ಕುಡಿಯಲು 2 ಯೂನಿಟ್‌ಗೆ ಒಂದರಂತೆ ಸ್ಟೌವ್ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಡಾ| ಸಂಜಯ್ ಮಾತನಾಡಿ, ಆಸ್ಪತ್ರೆಯಲ್ಲಿ ಸಿಟಿ ಸ್ಕಾನ್ ವ್ಯವಸ್ಥೆ ಇಲ್ಲ. ಎಕ್ಸ್‌ರೇ ಇದ್ದರೂ ಆದರೆ ಲ್ಮ್ಗಳು ಇಲ್ಲ. ಜಿಲ್ಲಾಸ್ಪತ್ರೆಯಲ್ಲಿ ಮೊದಲ ಹಂತದ ಚಿಕಿತ್ಸೆ ಬಳಿಕ ಚೇತರಿಸಿಕೊಂಡ ಕೋವಿಡ್ ಸೋಂಕಿತರನ್ನು ಈ ಆಸ್ಪತ್ರೆಗೆ ವರ್ಗಾವಣೆ ಮಾಡಬಹುದು ಎಂದು ಸಲಹೆ ನೀಡಿದರು. ಜಿಲ್ಲಾಧಿಕಾರಿ ಮಾತನಾಡಿ, ಕೋವಿಡ್ ವೈದ್ಯಾಧಿ ಕಾರಿಗಳು, ಸಿಬ್ಬಂದಿ, ಡಿ ಗ್ರೂಪ್ ನೌಕರ ವರ್ಗದವರು ಸೇರಿ ಒಟ್ಟು 3 ತಂಡ ರಚಿಸಿಕೊಳ್ಳಬೇಕು. ಪ್ರತಿ ತಂಡಕ್ಕೂ 3 ವೈದ್ಯರು, 3 ಸ್ಟಾಫ್ ನರ್ಸ್, 3 ಡಿ-ಗ್ರೂಪ್ ಸೇರಿದಂತೆ 9 ಜನರ ತಂಡ ರಚಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್, ವೆಂಟಿಲೇಟರ್ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು ಎಂದು ಈಗಾಗಲೇ ಮನವಿ ಮಾಡಲಾಗಿದೆ. ಪ್ರತಿ ಆಸ್ಪತ್ರೆಗೂ ಒಬ್ಬ ನೋಡಲ್ ಅ ಧಿಕಾರಿ ನೇಮಿಸಲಾಗಿದೆ. ಆಸ್ಪತ್ರೆಯ ಪ್ರತಿ ವಿಭಾಗದ ವರದಿ ನೋಡಿಕೊಳ್ಳುವ ಮೂಲಕ ಪ್ರತಿನಿತ್ಯ ವರದಿ ನೀಡುತ್ತಿದ್ದಾರೆ.
ಅನಗತ್ಯವಾಗಿ ಆಕ್ಸಿಜನ್ ಬಳಕೆ ಮಾಡಬಾರದು. ಅದನ್ನು ಔಷ ಧಿಯಂತೆ ಸಮರ್ಪಕವಾಗಿ ಬಳಸಬೇಕು ಎಂದರು. ಜಿಪಂ ಸಿಇಒ ಡಾ| ವಿಜಯ ಮಹಾಂತೇಶ ದಾನಮ್ಮನವರ್, ಕೋವಿಡ್ ನೋಡಲ್ ಅ ಧಿಕಾರಿ ಪ್ರಮೋದ್ ನಾಯಕ್, ಡಾ| ಸಂಧ್ಯಾರಾಣಿ, ಡಾ| ಅಣ್ಣಪ್ಪಸ್ವಾಮಿ, ಡಾ| ಚಿದಾನಂದ, ಡಾ| ನಂದಿನಿ, ಡಾ| ಚಂದನ, ಡಾ| ಪ್ರಸನ್ನ, ಡಾ| ಅನಿತಾರಾಣಿ ಇತರರು ಇದ್ದರು.