Advertisement

ಸರ್ಕಾರದ ನಿರ್ಲಕ್ಷ್ಯವೇ ಕೋವಿಡ್ ಹೆಚ್ಚಳಕ್ಕೆ ಕಾರಣ

09:48 PM May 17, 2021 | Team Udayavani |

ದಾವಣಗೆರೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷéದಿಂದಾಗಿ ಸಮರ್ಪಕವಾಗಿ ಆಕ್ಸಿಜನ್‌, ಲಸಿಕೆ ಮತ್ತು ರೆಮ್‌ಡಿಸಿವೆರ್‌ ಚುಚ್ಚುಮದ್ದು ಸಿಗದೇ ಇರುವುದರಿಂದ ಕೊರೊನಾ ರೋಗಿಗಳು ಹೆಚ್ಚಾಗುವುದರ ಜೊತೆಗೆ ಸಾವಿನ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ದೂರಿದ್ದಾರೆ.

Advertisement

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುಜೇìವಾಲ ಶಾಸಕರು, ಮಾಜಿ ಸಚಿವರೊಂದಿಗೆ ಆನ್‌ಲೈನ್‌ ಜೂಮ್‌ ಆ್ಯಪ್‌ ಮೂಲಕ ಸಂವಾದ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷé ಧೋರಣೆಯನ್ನು ಸವಿವರವಾಗಿ ವಿವರಿಸಿದರು.

ಕೊರೊನಾ ಎರಡನೇ ಅಲೆ ಆರಂಭದಲ್ಲಿ ಸಂಪೂರ್ಣ ನಿರ್ಲಕ್ಷವಹಿಸಿದ್ದರಿಂದ ಸಮಸ್ಯೆ ಉಂಟಾಗಿದೆ. ಈಗಾಲಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಲಸಿಕೆ, ಆಕ್ಸಿಜನ್‌ ಮತ್ತು ರೆಮ್‌ಡಿಸಿವೆರ್‌ ಚುಚ್ಚುಮದ್ದು ನೀಡಬೇಕು ಎಂದು ಕೇಂದ್ರ ಮಟ್ಟದಲ್ಲಿ ಒತ್ತಡ ಹಾಕಬೇಕೆಂದು ಮನವಿ ಮಾಡಿದರು.

ದಾವಣಗೆರೆ ಜಿಲ್ಲೆಯ ಕೇಂದ್ರ ಸ್ಥಾನದಲ್ಲಿ ಸರ್ಕಾರದಿಂದ ಜಿಲ್ಲಾಸ್ಪತ್ರೆ ಮತ್ತು ಬಾಪೂಜಿ ವಿದ್ಯಾಸಂಸ್ಥೆಯಡಿ ಎರಡು ಆಸ್ಪತ್ರೆಗಳಿದ್ದು, ಸುಮಾರು 3 ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಪೂರಕವಾಗಿ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಕೊರೊನಾ ವಾರಿಯರ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ಕೊರೊನಾ ರೋಗಿಗಳಾಗಿ ಹೋಂ ಐಸೋಲೇಷನ್‌ನಲ್ಲಿ ಇರುವವರಿಗೆ ಕಿಟ್‌, ಲಸಿಕೆ ಹಾಕಿಸಿಕೊಳ್ಳುವವರಿಗೆ ನೆರವು ಹಾಗೂ ಅವಶ್ಯಇರುವ ಕಡೆಗಳಲ್ಲಿ ಆಹಾರದ ಪೊಟ್ಟಣ ಗಳನ್ನು ವಿತರಿಸುತ್ತಿದ್ದಾರೆ ಎಂದು ತಿಳಿಸಿದರು.

Advertisement

ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿ, ದಾವಣಗೆರೆ ಜಿಲ್ಲಾಡಳಿತ ಸಮರ್ಪ ಕವಾಗಿ ಆಕ್ಸಿಜನ್‌, ಲಸಿಕೆ ಮತ್ತು ರೆಮ್‌ ಡಿಸಿವರ್‌ ಸಮರ್ಪಕವಾಗಿ ಒದಗಿಸಿದರೆ ರೋಗವನ್ನು ಕಡಿಮೆಗೊಳಿಸಬಹುದು. ಲಸಿಕೆ ಮತ್ತು ರೆಮಿಡಿಸಿವೆರ್‌ ಉತ್ಪಾದನೆ ಮತ್ತು ಮಾರಾಟವನ್ನು ಮುಕ್ತಗೊಳಸಿದರೆ ಅವಶ್ಯವಿರುವವರಿಗೆ ಅನುಕೂಲವಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಒತ್ತಡ ತರುವಂತೆ ಆಗ್ರಹಿಸಿದರು.

ಕೆಪಿಸಿಸಿ ವಕ್ತಾರ ಡಿ. ಬಸವರಾಜ್‌, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ. ಶೆಟ್ಟಿ, ಮಹಾನಗರ ವಿಪಕ್ಷ ನಾಯಕ ಎ. ನಾಗರಾಜ್‌, ಸದಸ್ಯರಾದ ಕೆ. ಚಮನ್‌ಸಾಬ್‌, ಜಿ.ಎಸ್‌. ಮಂಜುನಾಥ್‌ ಗಡಿಗುಡಾಳ್‌ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next