Advertisement
ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಡೆಸಿದ ವಿಡಿಯೋ ಕಾನ್ಫರೆನ್ಸ್ ಲ್ಲಿ ಅವರು ಜಿಲ್ಲೆಯ ಕೊರೊನಾ ಸ್ಥಿತಿಗತಿ ಕುರಿತು ಮಾಹಿತಿ ನೀಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, ರಾಜ್ಯದಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಸದ್ಯ ಅನೇಕ ಸವಾಲು ಎದುರಿಸುತ್ತಿದ್ದೇವೆ.
Related Articles
Advertisement
ಜಿಲ್ಲಾಧಿ ಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರ ಮಾರ್ಗದರ್ಶನ ಹಾಗೂ ಸಹಕಾರದೊಂದಿಗೆ ಅಲ್ಲದೆ ಅಧಿ ಕಾರಿಗಳು, ವೈದ್ಯರ ಪರಿಶ್ರಮದಿಂದ ಜಿಲ್ಲೆಯಲ್ಲಿ ಕೋವಿಡ್ ಅನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿದೆ. ರೆಮ್‌ಡಿಸಿವರ್ ಚುಚ್ಚುಮದ್ದು ಸರ್ಕಾರಿ ಆಸ್ಪತ್ರೆಗಳಿಗೆ ಸಮರ್ಪಕವಾಗಿ ಪೂರೈಕೆಯಾಗುತ್ತಿದೆ. ಖಾಸಗಿ ಆಸ್ಪತ್ರೆಗಳಿಂದ ಬೇಡಿಕೆ ಇದೆ ಎಂದು ಮಾಹಿತಿ ನೀಡಿದರು.
ಪಾಸಿಟಿವಿಟಿ ಪ್ರಮಾಣ ಕಡಿಮೆ: ಜಿಲ್ಲೆಯಲ್ಲಿ ಈವರೆಗೆ ಒಟ್ಟು 5.32 ಲಕ್ಷ ಕೋವಿಡ್ ಟೆಸ್ಟ್ ಮಾಡಲಾಗಿದೆ. ನಿತ್ಯ ಸರಾಸರಿ 2 ಸಾವಿರ ಟೆಸ್ಟ್ ಮಾಡಲಾಗುತ್ತಿದೆ. ರಾಜ್ಯದ ಸರಾಸರಿಗೆ ಹೋಲಿಸಿದಾಗ ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಕಡಿಮೆ ಇದೆ. ಆದರೂ ಜಿಲ್ಲೆಯಲ್ಲಿ ಇನ್ನಷ್ಟು ಎಚ್ಚರಿಕೆ ವಹಿಸಲಾಗುತ್ತಿದೆ. 2ನೇ ಅಲೆ ಪ್ರಾರಂಭವಾದಾಗಿನಿಂದ ಈವರೆಗೆ ಒಟ್ಟು 48 ಜನರು ಮೃತಪಟ್ಟಿದ್ದಾರೆ.
ಐಎಲ್‌ಐ ಪ್ರಕರಣಗಳ ಒಟ್ಟು 78 ಸಾವು ಸಂಭವಿಸಿವೆ. ಜಿಲ್ಲೆಯಲ್ಲಿ ಸದ್ಯ 3656 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಕೈಗೊಳ್ಳಲಾಗುತ್ತಿರುವ ಕೋವಿಡ್ ಕೇರ್ ಸೆಂಟರ್ ಗಳಿಗೆ ವಿವಿಧ ಸ್ವಾಮೀಜಿಗಳು ಕೂಡ ಸಹಕಾರ ನೀಡುತ್ತಿದ್ದಾರೆ. ತರಳಬಾಳು ಜಗದ್ಗುರುಗಳು ನಗರದ ಹಾಸ್ಟೆಲ್‌ನಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಹಳೆ ದಾವಣಗೆರೆ ಭಾಗದಲ್ಲಿಯೂ ಕೂಡ ತಾಜ್ ಪ್ಯಾಲೇಸ್, ನರ್ಸಿಂಗ್ ಕಾಲೇಜು ಹಾಗೂ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿಸಲು ಸಹಕಾರ ನೀಡುತ್ತಿದ್ದಾರೆ ಎಂದರು.
ಜಿಲ್ಲೆಗೆ ಹೆಚ್ಚುವರಿಯಾಗಿ 2 ಕೆಎಲ್ ಆಕ್ಸಿಜನ್ ಹಂಚಿಕೆಯಾಗಿದೆ. ಮಹಾನಗರಪಾಲಿಕೆಯಿಂದ 60 ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗಿದೆ. ಸಂಸದ ಸಿದ್ದೇಶ್ವರ ಅವರು ತಮ್ಮ ಟ್ರಸ್ಟ್ ವತಿಯಿಂದ ಹರಿಹರ ಹಾಗೂ ಜಗಳೂರಿನಲ್ಲಿ ಆಕ್ಸಿಜನ್ ಘಟಕ ಹಾಗೂ ಚನ್ನಗಿರಿ ಶಾಸಕರು ಕೆಎಸ್‌ಎಸ್‌ಡಿಎಲ್ ವತಿಯಿಂದ ಚನ್ನಗಿರಿಯಲ್ಲಿ ಆಕ್ಸಿಜನ್ ಘಟಕ ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಜಿಪಂ ಸಿಇಒ ಡಾ| ವಿಜಯಮಹಾಂತೇಶ್ ದಾನಮ್ಮನವರ್, ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.