Advertisement

ಸರಕಾರದ ಯೋಜನೆ ರೈತರಿಗೆ ತಲುಪಿಸಿ: ಪೂರ್ಣಿಮಾ

03:25 PM Jan 26, 2021 | Team Udayavani |

ಹಿರಿಯೂರು: ನಗರದ ಟಿಬಿ ವೃತ್ತದಲ್ಲಿ 36 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ತೋಟಗಾರಿಕೆ ಇಲಾಖೆ ಕಚೇರಿಯನ್ನು ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಉದ್ಘಾಟಿಸಿದರು.

Advertisement

ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾದಂತಹ ಸಂಕಷ್ಟದ ಸ್ಥಿತಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ರೈತರ ಯೋಜನೆಗಳಿಗೆ ತೊಂದರೆಯಾಗದಂತೆ ತೋಟಗಾರಿಕೆ ಇಲಾಖೆಗೆ ಕಾಲಕಾಲಕ್ಕೆ ಹಣ ಬಿಡುಗಡೆ ಮಾಡಿ ರೈತರ ಸಂಕಷ್ಟಕ್ಕೆ ಪರಿಹಾರ ನೀಡಿದ್ದಾರೆ. ಅಧಿ ಕಾರಿಗಳು ಸರ್ಕಾರದ ಯೋಜನೆಗಳನ್ನು ಸಕಾಲದಲ್ಲಿ ಅನುಷ್ಠಾನಗೊಳಿಸಿ, ರೈತರಿಗೆ ತಲುಪಿಸುವತ್ತ ಕೆಲಸ ಮಾಡಬೇಕು. ತೋಟಗಾರಿಕೆ ಇಲಾಖೆಯ ಅ ಧಿಕಾರಿಗಳ ಬಗ್ಗೆ ರೈತರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಅಧಿಕಾರಿಗಳು ರೈತರ ಬಳಿ ಹೋಗಬೇಕು. ಬೆಳೆಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡಬೇಕು. ಅವರ ಅರ್ಜಿಗಳನ್ನು ತಾತ್ಸಾರ ಮಾಡದೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಜವಾಬ್ದಾರಿಯುತವಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದರು.

ಜಿಪಂ ಸದಸ್ಯರಾದ ಆರ್‌ ನಾಗೇಂದ್ರನಾಯ್ಕ ಮಾತನಾಡಿ, ತಾಲೂಕಿನಲ್ಲಿ ತೋಟಗಾರಿಕೆ ಬೆಳೆಗಳು ನೀರಿಲ್ಲದೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರದಿಂದ ಬೆಳೆ ಪರಿಹಾರ ಹಣ ರೈತರಿಗೆ ತಲುಪಿರುವುದಿಲ್ಲ. ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ ರೈತರಿಗೆ ಬೆಳೆ ಪರಿಹಾರದ ಹಣ ಕೊಡಿಸಿಕೊಡುವಂತೆ ಸೂಚಿಸಿದರು. ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್‌ ಬಾಬು, ನಗರಸಭೆ ಅಧ್ಯಕ್ಷೆ ಶಂಶುನ್ನಿಸಾ, ನಗರಸಭೆಯ ಉಪಾಧ್ಯಕ್ಷ ಬಿ.ಎನ್‌. ಪ್ರಕಾಶ್‌, ಇಲಾಖೆ ಅಧಿ ಕಾರಿಗಳು, ಸಿಬ್ಬಂದಿ ಹಾಜರಿದ್ದರು.

ಓದಿ : ಮತದಾನ ನಮ್ಮೆಲ್ಲರ ಹಕ್ಕು-ಕರ್ತವ್ಯ

Advertisement

Udayavani is now on Telegram. Click here to join our channel and stay updated with the latest news.

Next