Advertisement

ಕೃಷಿ ಚಟುವಟಿಕೆಗೆ ತೊಂದರೆಯಾಗದಂತೆ ನಿಗಾ ವಹಿಸಿ

08:39 PM May 25, 2021 | Team Udayavani |

ಜಗಳೂರು: ಲಾಕ್‌ಡೌನ್‌ ಜಾರಿಯಲ್ಲಿದ್ದರೂ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಸೂಚಿಸಿದರು. ಪಟ್ಟಣದ ತರಳಬಾಳು ಸಮುದಾಯ ಭವನದಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಕೋವಿಡ್‌ ಟಾಸ್ಕ್ಫೋರ್ಸ್‌ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

Advertisement

ಜಗಳೂರು ತಾಲೂಕು ಎಸ್‌ಸಿ, ಎಸ್‌ಟಿ ಸಮುದಾಯದವರು ಹೆಚ್ಚಿದ್ದು ದುಡಿಮೆಯನ್ನು ನಂಬಿಯೇ ಜೀವನ ಸಾಗಿಸುತ್ತಿದ್ದಾರೆ. ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳಿಗೆ ಆದ್ಯತೆ ನೀಡಿ ಉದ್ಯೋಗ ನೀಡಬೇಕು. ಸಾಮಾಜಿಕ ಅಂತರ ಕಾಪಾಡಿಕೊಂಡು ಕೆಲಸ ಮಾಡುವ ಮೂಲಕ ಹಾಗೂ ಕೊರೊನಾ ನಿಯಮವನ್ನು ಉಲ್ಲಂಘಿ ಸದೆ ಎಲ್ಲರೂ ಸಹಕರಿಸಿದಾಗ ಮಾತ್ರ ಕೊರೊನಾ ಹೋಗಲಾಡಿಸಲು ಸಾಧ್ಯ. ಶಾಸಕ ಎಸ್‌.ವಿ. ರಾಮಚಂದ್ರ ಕೋವಿಡ್‌ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, ಇನ್ನು ಮುಂದೆ ಕ್ಷೇತ್ರದಲ್ಲಿ ಇದ್ದುಕೊಂಡು ಅ ಧಿಕಾರಿಗಳಿಗೆ ಸೂಕ್ತ ಸಲಹೆ ನೀಡಲಿದ್ದಾರೆ ಎಂದರು.

ಕೊರೊನಾ ಎರಡನೇ ಅಲೆ ಗ್ರಾಮೀಣ ಭಾಗಕ್ಕೂ ವ್ಯಾಪಿಸಿರುವುದರಿಂದ ಜನರು ಜಾಗ್ರತೆಯಿಂದ ಇರಬೇಕು. ಸೋಂಕು ಖಚಿತವಾದಲ್ಲಿ ತಕ್ಷಣವೇ ಕೋವಿಡ್‌ ಸೆಂಟರ್‌ಗೆ ಬಂದು ದಾಖಲಾಗಿ ಚಿಕಿತ್ಸೆ ಪಡೆಯಬೇಕು. ಯಾವುದೇ ಕಾರಣಕ್ಕೂ ಹೋಂ ಕ್ವಾರಂಟೈನ್‌ನಲ್ಲಿ ಇರಬೇಡಿ ಎಂದು ಮನವಿ ಮಾಡಿದರು.

ಶಾಸಕ ಎಸ್‌.ವಿ. ರಾಮಚಂದ್ರ ಮಾತನಾಡಿ 2020-2021ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಯಿಂದ 50 ಲಕ್ಷ ರೂ. ಅನುದಾನದ ಜತೆಗೆ ಇತರೆ ಯೋಜನೆಯ 50 ಲಕ್ಷ ರೂ. ಅನುದಾನ ಸೇರಿಸಿ 1 ಕೋಟಿ ರೂ. ಅನುದಾನವನ್ನು ಸಾರ್ವಜನಿಕ ಆಸ್ಪತ್ರೆಯ ವಿವಿಧ ತುರ್ತು ಚಿಕಿತ್ಸೆ ಹಾಗೂ ಕೊರೊನಾ ಚಿಕಿತ್ಸೆಗೆ ಸಂಬಂಧಿಸಿದಂತೆ ಅಗತ್ಯ ಸಲಕರಣೆಗಳನ್ನು ಖರೀದಿಸಲು ನೀಡಲಾಗುವುದು. ಹಿಂದಿನ ವರ್ಷ ಮೊದಲ ಹಂತದ ಕೊರೊನಾ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ನಿಧಿಯಿಂದ  1.38 ಕೋಟಿ ರೂ. ಅನುದಾನ ನೀಡಲಾಗಿದೆ.

ಅದರಲ್ಲಿ ತಲಾ 20 ಲಕ್ಷ ರೂ.ಗಳನ್ನು ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಭವನಗಳ ಅಭಿವೃದ್ಧಿಗೆ ನೀಡಲಾಗಿತ್ತು. ಎರಡನೇ ಹಂತದಲ್ಲಿ ತಾಲೂಕಿನಲ್ಲಿ ಹೆಚ್ಚಿನ ಸಾವು-ನೋವು ಆಗಲು ಬಿಡುವುದಿಲ್ಲ. ಸಂಪೂರ್ಣ ಗುಣಮುಖನಾಗಿ ನಿಮ್ಮ ಸೇವೆಗೆ ಮರಳಿದ್ದೇನೆ. ಕೊರೊನಾವನ್ನು ಹಿಮ್ಮೆಟ್ಟಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.

Advertisement

ಜಿಲ್ಲಾ ಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಜಗಳೂರು ತಾಲೂಕಿನಲ್ಲಿ ಈವರೆಗೆ 852 ಪಾಸಿಟಿವ್‌ ಪ್ರಕರಣಗಳು ದಾಖಲಾಗಿವೆ. ಅವರಲ್ಲಿ 390 ಜನರು ಗುಣಮುಖರಾಗಿದ್ದಾರೆ. ಇನ್ನೂ 460 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 9 ಜನ ಮೃತಪಟ್ಟಿದ್ದಾರೆ. ಈವರೆಗೆ 167 ಜನ ಹೋಂ ಐಸೋಲೇಷನ್‌ನಲ್ಲಿದ್ದು, 85 ಜನ ಕೋವಿಡ್‌ ಸೆಂಟರ್‌ನಲ್ಲಿದ್ದು, 35 ಜನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 18 ಜನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 76 ಜನ ಜಿಲ್ಲಾ ಕೇಂದ್ರದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಸರ್ವೆಕ್ಷಣಾಧಿ ಕಾರಿ ರಾಘವೇಂದ್ರ ಮಾತನಾಡಿ ಯಾವುದೇ ಹಂತದ ಕೊರೊನಾ ಅಲೆ ಮೂರು ತಿಂಗಳುಗಳ ಕಾಲ ಶರವೇಗದಲ್ಲಿರುತ್ತದೆ.

ಸೋಂಕು ಹರಡದಂತೆ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್‌ ಬಳಸಬೇಕು. ಸಾಮಾಜಿಕ ಅಂತರ ಹಾಗೂ ಪ್ರಥಮ ಚಿಕಿತ್ಸೆಯಂತಹ ಕ್ರಮಗಳನ್ನು ಅಳವಡಿಸಿಕೊಂಡರೆ ಸೋಂಕನ್ನು ಸಂಪೂರ್ಣವಾಗಿ ತಡೆಗಟ್ಟಬಹುದು ಎಂದು ಅಭಿಪ್ರಾಯಪಟ್ಟರು. ಮೊದಲ ಹಂತದ ಕೊರೊನಾ ಅಲೆ ಕಡಿಮೆಯಾಗುವ ಮುನ್ನವೇ ನಗರ ಹಾಗೂ ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರು ನಿಯಮಗಳನ್ನು ಪಾಲಿಸದೇ ಹಬ್ಬ, ಜಾತ್ರೆಯಂತಹ ಧಾರ್ಮಿಕ ಕಾರ್ಯಗಳಲ್ಲಿ ಸಾಮೂಹಿಕವಾಗಿ ಭಾಗವಹಿಸಿದ್ದಾರೆ.

ಈ ಮೂಲಕ ಒಬ್ಬರಿಂದ ಒಬ್ಬರಿಗೆ ಸೋಂಕು ವ್ಯಾಪಕವಾಗಿ ಹರಡಿದೆ. ಈಗ ನಗರ ಹಾಗೂ ಪಟ್ಟಣಗಳಲ್ಲಿ ಜನರು ಸ್ವಯಂಪ್ರೇರಿತವಾಗಿ ಮನೆಯಲ್ಲಿಯೇ ಇರುವ ಮೂಲಕ ಲಾಕ್‌ಡೌನ್‌ ನಿಯಮಕ್ಕೆ ಸ್ಪಂ ದಿಸುತ್ತಿದ್ದಾರೆ. ಆದರೆ ಹಳ್ಳಿಗಳಲ್ಲಿ ಲಾಕ್‌ಡೌನ್‌ ನಿಯಮ ಪಾಲನೆಯಾಗುತ್ತಿಲ್ಲ. ವಿನಾಕಾರಣ ಜನರು ಹೊರಗಡೆ ಬರುತ್ತಿದ್ದಾರೆ. ಪಾಸಿಟಿವ್‌ ಇರುವವರು ಹಾಗೂ ಕುಟುಂಬದವರು ಜನರ ಮಧ್ಯೆ ಬರುವುದರಿಂದ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಮೂರನೇ ಅಲೆಯ ಮುನ್ಸೂಚನೆಯಿದ್ದು, ಗ್ರಾಮೀಣ ಪ್ರದೇಶದ ಜನರು ಈಗಲೇ ಜಾಗೃತರಾಗಬೇಕೆಂದರು. ಜಿಪಂ ಸಿಇಒ ಡಾ| ವಿಜಯಮಹಾಂತೇಶ ದಾನಮ್ಮನವರ್‌ ಮಾತನಾಡಿ, ಈವರೆಗೆ ಜಗಳೂರು ತಾಲೂಕಿನ 22 ಗ್ರಾಪಂಗಳ ವ್ಯಾಪ್ತಿಯ 110 ಹಳ್ಳಿಗಳಲ್ಲಿ 324 ಸಕ್ರಿಯ ಪ್ರಕರಣಗಳಿವೆ. 83 ಜನ ಹೋಂ ಐಸೋಲೇಷನ್‌ನಲ್ಲಿ ಇದ್ದರೆ, 93 ಜನ ಕೋವಿಡ್‌ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

150 ಜನರು ಜಿಲ್ಲಾ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10ಕ್ಕೂ ಹೆಚ್ಚು ಗ್ರಾಮಗಳಲ್ಲಿ 6 ರಿಂದ 10 ಸಕ್ರಿಯ ಪ್ರಕರಣಗಳಿದ್ದರೆ, 75 ಗ್ರಾಮಗಳಲ್ಲಿ 1 ರಿಂದ 5 ಪ್ರಕರಣಗಳಿವೆ. 4 ಗ್ರಾಮಗಳಲ್ಲಿ ಸಾಧಾರಣವಿದ್ದರೆ, 18 ಗ್ರಾಮಗಳಲ್ಲಿ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ. ಗ್ರಾಮ ಮಟ್ಟದ ಟಾಸ್ಕ್ಫೋರ್ಸ್‌ ಸಮಿತಿಯಲ್ಲಿ ಗ್ರಾಪಂ ಪಿಡಿಒ, ಗ್ರಾಮ ಲೆಕ್ಕಾಧಿ ಕಾರಿ, ಆಶಾ ಮತ್ತು ಅಂಗನವಾಡಿ ಕಾರ್ಯರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ  ಗಳು ಮನೆ ಮನೆಗೆ ತೆರಳಿ ಪರೀಕ್ಷೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿ ಕಾರಿ ಡಾ| ನಾಗರಾಜ್‌, ಪ್ರಭಾರಿ ತಹಶೀಲ್ದಾರ್‌ ಗಿರೀಶ್‌ ಕುಮಾರ್‌, ಸಾರ್ವಜಿನಿಕ ಆಸ್ಪತ್ರೆ ಆಡಳಿತಾ  ಧಿಕಾರಿ ಡಾ| ನೀರಜ್‌, ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಹೇಶ್ವರಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷ ತಿಪ್ಪೇಸ್ವಾಮಿ, ಡಿವೈಎಸ್‌ಪಿ ನರಸಿಂಹ ತಾಮ್ರಧ್ವಜ, ಸಿಪಿಐ ಮಂಜುನಾಥ್‌ ಪಂಡಿತ್‌, ಪಿಎಸ್‌ಐ ಸಂತೋಷ್‌ ಬಾಗೋಜಿ ಸೇರಿದಂತೆ ತಾಲೂಕು ಮಟ್ಟದ ಅಧಿ ಕಾರಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next