Advertisement

ಬಿತ್ತನೆ ಬೀಜ-ಗೊಬ್ಬರ ಪೂರೈಕೆಗೆ ಕ್ರಮ

08:15 PM Jun 01, 2021 | Team Udayavani |

ದಾವಣಗೆರೆ: ಮುಂಗಾರು ಹಂಗಾಮಿನಲ್ಲಿ ಬೀಜ-ಗೊಬ್ಬರ ಕೊರತೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಪ್ರೊ| ಎನ್‌. ಲಿಂಗಣ್ಣ ಹೇಳಿದರು.

Advertisement

ಸೋಮವಾರ ತಾಲೂಕಿನ ಆನಗೋಡು ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೃಷಿ ಚಟುವಟಿಕೆಗೆ ಹಿನ್ನಡೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೆ ರಿಯಾಯತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಪ್ರಾರಂಭಿಸಲಾಗಿದೆ ಎಂದರು.

ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರ ಸರಬರಾಜಿಗಾಗಿ ಕ್ರಮ ಕೈಗೊಳ್ಳಲಾಗಿದೆ. ರೈತರು ಅನಗತ್ಯವಾಗಿ ಮುಗಿಬಿದ್ದು ಗೊಬ್ಬರ ಖರೀದಿಸಲು ಮುಂದಾಗದೆ ಅವಶ್ಯವಿರುವಷ್ಟು ಗೊಬ್ಬರ ಮಾತ್ರ ಖರೀದಿಸಬೇಕು ಎಂದು ಮನವಿ ಮಾಡಿದರು. ಮಾಯಕೊಂಡ ಕ್ಷೇತ್ರದಲ್ಲಿ ಕಳೆದ ವಾರದಿಂದ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಹಾಗಾಗಿ ಎಲ್ಲ ಭಾಗದ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಬಿತ್ತನೆಗೆ ಯಾವುದೇ ರೀತಿಯಲ್ಲಿ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಕೂಡಲೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾವಸ್ತುಗಳ ಬೆಲೆ ಏರಿಕೆಯಿಂದ ಡಿಎಪಿ ಗೊಬ್ಬರದ ಬೆಲೆ ಹೆಚ್ಚಾಗಿದ್ದರೂ ಕೊರೊನಾ ಸಂಕಷ್ಟ ಸಮಯದಲ್ಲಿ ರೈತರಿಗೆ ಕಷ್ಟವಾಗುತ್ತಿರುವುದನ್ನು ಮನಗಂಡು ಪ್ರಧಾನಿಯವರು ಏರಿಕೆಯಾಗಿದ್ದ ಡಿಎಪಿ ಗೊಬ್ಬರದ ಬೆಲೆಯನ್ನು 1,200 ರೂಪಾಯಿಗೆ ಇಳಿಸಿದ್ದಾರೆ.

ಸಂಸದರು ಸಹ ನಮ್ಮ ಮನವಿಯಂತೆ ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರದ ಕುರಿತು ಕೇಂದ್ರ ರಸಗೊಬ್ಬರ ಮಂತ್ರಿಗಳೊಂದಿಗೆ ಮಾತನಾಡಿ ಜಿಲ್ಲೆಗೆ ಅವಶ್ಯವಿರುವಷ್ಟು ಸರಬರಾಜು ಮಾಡಲು ಕ್ರಮ ಕೈಗೊಂಡಿದ್ದಾರೆ ಎಂದರು. ದಾವಣಗೆರೆ ಉಪವಿಭಾಗದ ಉಪ ಕೃಷಿ ನಿರ್ದೇಶಕ ತಿಪ್ಪೇಸ್ವಾಮಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷ ಸಹ ರೈತರಿಗೆ ಸಕಾಲದಲ್ಲಿ ಉತ್ತಮ ಗುಣಮಟ್ಟದ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲು ಕ್ರಮ ವಹಿಸಲಾಗಿದೆ.

Advertisement

ಮೆಕ್ಕೆಜೋಳಕ್ಕೆ ಸಾಮಾನ್ಯ ವರ್ಗದ ರೈತರಿಗೆ ಕೆಜಿಗೆ 20, ಪ.ಜಾತಿ, ಪ.ಪಂಗಡಗಳ ರೈತರಿಗೆ 30, ಶೇಂಗಾಕ್ಕೆ ಸಾಮಾನ್ಯ ವರ್ಗದ ರೈತರಿಗೆ ಕೆಜಿಗೆ 18, ಪ.ಜಾತಿ, ಪ.ಪಂಗಡಗಳ ರೈತರಿಗೆ 27, ತೊಗರಿಗೆ ಸಾಮಾನ್ಯ ವರ್ಗದ ರೈತರಿಗೆ 25, ಪ.ಜಾತಿ, ಪ.ಪಂಗಡಗಳ ರೈತರಿಗೆ 37.50 ರೂಪಾಯಿ ಸಹಾಯಧನ ನೀಡಲಾಗುತ್ತಿದೆ. ರೈತರು ಪಹಣಿ ಮತ್ತು ಆಧಾರ್‌ ಕಾರ್ಡ್‌ ಅಥವಾ ಫ್ರೂಟ್ಸ್‌ ನಂಬರ್‌ ತಿಳಿಸಿ ಪಡೆಯಬೇಕು ಎಂದು ತಿಳಿಸಿದರು.

ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಣಬೇರು ಜೀವನಮೂರ್ತಿ, ರೈತರು ಕೋವಿಡ್‌-19 ನಿಯಮ ಪಾಲಿಸಿಕೊಂಡು ಕೃಷಿ ಚಟುವಟಿಕೆ ನಡೆಸಬೇಕು ಎಂದು ಸಲಹೆ ನೀಡಿದರು. ಸಹಾಯಕ ಕೃಷಿ ನಿರ್ದೇಶಕ ಎಚ್‌.ಕೆ. ರೇವಣಸಿದ್ದನಗೌಡ, ಕೃಷಿ ಅಧಿ ಕಾರಿ ರವಿಕುಮಾರ್‌, ಸಹಾಯಕ ಕೃಷಿ ಅಧಿಕಾರಿ ಬಿ.ಕೆ. ಚಂದ್ರಪ್ಪ, ಮುಖಂಡ ವಸಂತಕುಮಾರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next