Advertisement

ಸೋಂಕಿತನ ಅಂತ್ಯಸಂಸ್ಕಾರ ನೆರವೇರಿಸಿದ ರೇಣು

10:14 PM Jun 02, 2021 | Team Udayavani |

ಹೊನ್ನಾಳಿ: ಕೊರೊನಾದಿಂದ ಮೃತಪಟ್ಟ ಯುವಕನ ಮೃತದೇಹವನ್ನು ಗ್ರಾಮಕ್ಕೆ ತರಲು ಗ್ರಾಮಸ್ಥರು ಒಪ್ಪದ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಖುದ್ದಾಗಿ ಆಂಬ್ಯುಲೆನ್ಸ್‌ ಚಾಲನೆ ಮಾಡಿಕೊಂಡು ಹೋಗಿ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಿ ಮಾನವೀಯತೆ ತೋರಿದ ಘಟನೆ ಪಟ್ಟಣದಲ್ಲಿ ಸೋಮವಾರ ನಡೆದಿದೆ.

Advertisement

ಬೆಂಗಳೂರಿನಲ್ಲಿ ಸಾಪ್ಟ್ವೇರ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ ಯುವಕ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಹೊನ್ನಾಳಿಗೆ ಬಂದಿದ್ದ. ಆ ಯುವಕನಿಗೆ ಕೊರೊನಾ ಸೋಂಕು ತಗುಲಿ ಹೊನ್ನಾಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಸೋಮವಾರ ಬೆಳಿಗ್ಗೆ ಕೋವಿಡ್‌ ವಾರ್ಡಿಗೆ ಭೇಟಿ ನೀಡಿದ್ದ ಶಾಸಕರು ಯುವಕನಿಗೆ ಧೈರ್ಯ ಹೇಳಿ ಬಂದಿದ್ದರು. ಇದಾಗಿ ಕೆಲವೇ ಗಂಟೆಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ. ಕೋವಿಡ್‌ನಿಂದ ಮೃತಪಟ್ಟ ಯುವಕನ ಮೃತದೇಹವನ್ನು ಗ್ರಾಮಕ್ಕೆ ತರದಂತೆ ಗ್ರಾಮಸ್ಥರು ಶಾಸಕರಲ್ಲಿ ಮನವಿ ಮಾಡಿದರು.

ಜಗಳೂರು ತಾಲೂಕು ಮೂಲದವರಾದ ಯುವಕನ ಪೋಷಕರು ಹೊನ್ನಾಳಿಯಲ್ಲಿ ನೆಲೆಸಿದ್ದಾರೆ. ಯುವಕನ ಮೃತದೇಹವನ್ನು ಜಗಳೂರು ತಾಲೂಕಿನ ಹುಟ್ಟೂರಿಗೆ ತೆಗೆದುಕೊಂಡು ಹೋಗಲು ಪೋಷಕರು ಮುಂದಾದಾಗ ಗ್ರಾಮಸ್ಥರು ಮೃತದೇಹಬವನ್ನು ಗ್ರಾಮಕ್ಕೆ ತರದಂತೆ ಮನವಿ ಮಾಡಿದ್ದರೆ.

ಈ ವಿಷಯ ತಿಳಿಯುತ್ತಿದ್ದಂತೆ ಶಾಸಕರೇ ಸ್ವತಃ ಮೃತದೇಹವನ್ನು ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು ಹೋಗಿ ಹೊನ್ನಾಳಿಯ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಿಸಿದರು. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಅಮ್ಮ ಇನ್ನೆರಡು ವರ್ಷದಲ್ಲಿ ವಿದೇಶಕ್ಕೆ ಹೋಗಿ ಉನ್ನತ ಶಿಕ್ಷಣ ಪಡೆಯುತ್ತೇನೆ ಎಂದು ತಾಯಿಯ ಬಳಿ ಹೇಳಿಕೊಳ್ಳುತ್ತಿದ್ದ ಮಗ ಇದೀಗ ಬಾರದ ಲೋಕಕ್ಕೆ ತೆರಳಿದ್ದಾನೆ. ಮೃತ ಯುವಕನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕರು, ಯುವಕನ ತಾಯಿಯ ಆಕ್ರಂದನ ಕಂಡು ತಾವು ಕೂಡ ಕಣ್ಣೀರಿಟ್ಟ ಪ್ರಸಂಗವೂ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next