ಹೊನ್ನಾಳಿ: ಕೋವಿಡ್ ಕೇರ್ ಸೆಂಟರ್‌ನಲ್ಲಿ ಹೋಮ-ಹವನಕ್ಕೆ ಸಂಬಂಧಿ ಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶೀ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಿಸಬೇಕು. ತಪ್ಪಿದಲ್ಲಿ ಹೋರಾಟ ಮಾಡುತ್ತೇವೆ ಎಂದು ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಜಿಲ್ಲಾಧಿ ಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮೇಲೆ ಮೇಲೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿ ಕೊರೊನಾ ಸೋಂಕಿತರು ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದದರು.
ರಾತ್ರಿ ಊಟ ಬಹಿಷ್ಕರಿಸಿದ ಸೋಂಕಿತರು, ಅ ಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿ ಕಾರಿಗಳು ಸ್ಥಳಕ್ಕೆ ಬರುವವರೆಗೂ ಊಟ, ಉಪಹಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದರು.
ಕೋವಿಡ್ ಕೇರ್ ಸೆಂಟರ್‌ನಲ್ಲಿ ಲೋಕ ಕಲ್ಯಾಣಕ್ಕಾಗಿ ಧನ್ವಂತರಿ ಹಾಗೂ ಮೃತ್ಯುಂಜಯ ಹೋಮವನ್ನು ಪûಾತೀತವಾಗಿ ಹಮ್ಮಿಕೊಳ್ಳಲಾಗಿತ್ತು. ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿ ಕೋವಿಡ್ ಕೇರ್ ಸೆಂಟರ್‌ನಲ್ಲಿ ಹೋಮ-ಹವನ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕರು ಆರೋಪ ಮಾಡಿದ್ದಾರೆ.
ತಮಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ ಹೋಮ-ಹವನಕ್ಕೆ ಅವಕಾಶ ನೀಡಿ. ಇಲ್ಲದೇ ಇದ್ದರೆ ಶಾಸಕರ ವಿರುದ್ಧ ಪ್ರಕರಣ ದಾಖಲಿಸಬೇಕು. ತಪ್ಪಿದಲ್ಲಿ ಜಿಲ್ಲಾ ಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಈ ವಿಷಯ ಕೊರೊನಾ ಸೋಂಕಿತರಿಗೆ ತಿಳಿಯುತ್ತಿದ್ದಂತೆ ಊಟ ಮಾಡದೆ ಪ್ರತಿಭಟನೆ ನಡೆಸಿದರು.
ಕಳೆದ ಒಂದು ವಾರದಿಂದ ಶಾಸಕರು ಇಲ್ಲಿಯೇ ವಾಸ್ತವ್ಯ ಮಾಡಿದ್ದು ನಮ್ಮ ಅಹವಾಲು ಆಲಿಸುತ್ತಿದ್ದಾರೆ. ಆದರೆ ಅಧಿಕಾರಿಗಳು ಮಾಜಿ ಶಾಸಕರ ಒತ್ತಡಕ್ಕೆ ಮಣಿದು ಶಾಸಕರ ಮೇಲೆ ಪ್ರಕರಣ ದಾಖಲಿಸುವ ಹುನ್ನಾರ ನಡೆಸಿದ್ದಾರೆ. ಪ್ರಕರಣ ದಾಖಲಿಸಲು ಒತ್ತಾಯಿಸುತ್ತಿರುವ ಮಾಜಿ ಶಾಸಕರು ಮೊದಲು ಕೋವಿಡ್ ಕೇರ್ ಸೆಂಟರ್‌ಗೆ ಬಂದು ನಮ್ಮ ಯೋಗಕ್ಷೇಮ ವಿಚಾರಿಸಲಿ ಎಂದು ತಾಕೀತು ಮಾಡಿದರು.
ಕೋವಿಡ್ ಕೇರ್ ಸೆಂಟರ್ ನಲ್ಲಿ ಸೋಂಕಿತರು ಪ್ರತಿಭಟನೆ ನಡೆಸುತ್ತಿದ್ದಾರೆಂಬ ವಿಚಾರ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿದರು. ಅವರ ವಿರುದ್ಧವೂ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವಂತೆ ಸೋಂಕಿತರು ಪಟ್ಟು ಹಿಡಿದಾಗ ರೇಣುಕಾಚಾರ್ಯ ಅವರನ್ನು ಸಮಾಧಾನಪಡಿಸಿದರು.