Advertisement

ಬಿಜೆಪಿ ಸರ್ಕಾರದಿಂದ ಜನರಿಗೆ ನೆರವು

02:51 PM Jan 27, 2021 | Team Udayavani |

ದಾವಣಗೆರೆ: ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಸಾರ್ವಜನಿಕ ಗಣರಾಜ್ಯೋತ್ಸವ ಕಾರ್ಯಕ್ರಮ ಸರಳವಾಗಿ ನಡೆಯಿತು.

Advertisement

ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ, ತೆರೆದ ಜೀಪ್‌ನಲ್ಲಿ ಸಂಚರಿಸಿ, ಪೊಲೀಸ್‌ ಸೇರಿದಂತೆ ವಿವಿಧ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಭಾರತವು 1950ರ ಜನವರಿ 26ರಂದು ಸಂವಿಧಾನವನ್ನು ಅಂಗೀಕರಿಸಿ, ಸಾರ್ವಭೌಮ ರಾಷ್ಟ್ರವಾಗಿ ಹೊರಹೊಮ್ಮಿದೆ. ಕೊರೊನಾದಂತಹ ಸಂದರ್ಭವನ್ನೂ
ದೇಶ ಸಮರ್ಥವಾಗಿ ಎದುರಿಸಿ ಜನರ ನೆರವಿಗೆ ಸರ್ಕಾರ ನಿಂತಿದೆ ಎಂದರು.
ಜನಸಮಾನ್ಯರ ಕಲ್ಯಾಣಕ್ಕಾಗಿ ಬಿಜೆಪಿ ಸರ್ಕಾರ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದು, ಸರ್ಕಾರದ ಉತ್ತಮ ಕಾರ್ಯಗಳಿಗೆ ಸಾರ್ವಜನಿಕರು ಒತ್ತಾಸೆಯಾಗಿ ನಿಲ್ಲಬೇಕು ಮತ್ತು ಅವುಗಳ ಸಂಪೂರ್ಣ ಲಾಭವನ್ನು ವೈಯಕ್ತಿಕವಾಗಿ ಮತ್ತು ಸಮಷ್ಠಿಯಾಗಿ ಪಡೆಯಬೇಕು ಎಂದರು.

ಡಿಎಆರ್‌ ಪೊಲೀಸ್‌ ತಂಡ, ನಾಗರಿಕ ಪೊಲೀಸ್‌ ತಂಡ, ಗೃಹ ರಕ್ಷಕದಳ, ಅರಣ್ಯ ಇಲಾಖೆ, ಅಬಕಾರಿ ಪೊಲೀಸ್‌ ತಂಡ, ಅಗ್ನಿಶಾಮಕ ದಳಗಳು ಪೊಲೀಸ್‌ ವಾದ್ಯವೃಂದದ ಹಿಮ್ಮೇಳದಲ್ಲಿ ಶಿಸ್ತಿನ ಪಥಸಂಚಲನ
ನಡೆಸಿದವು. ಶಾಸಕ ಎಸ್‌.ಎ. ರವೀಂದ್ರನಾಥ್‌ ಅಧ್ಯಕ್ಷತೆ ವಹಿಸಿದ್ದರು. ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಶಾಂತಕುಮಾರಿ ಕೆ.ವಿ, ಮಹಾನಗರ ಪಾಲಿಕೆ ಮಹಾಪೌರ ಬಿ.ಜಿ.ಅಜಯಕುಮಾರ್‌, ದೂಡಾ ಅಧ್ಯಕ್ಷ ಶಿವಕುಮಾರ್‌, ಪ್ರಭಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಜೀವ್‌ ಎಂ., ಜಿಪಂ ಕಾರ್ಯ ನಿರ್ವಾಹಕಾ ಧಿಕಾರಿ ಪದ್ಮ ಬಸವಂತಪ್ಪ ಹಾಗೂ ಅಧಿಕಾರಿಗಳು ಇದ್ದರು.

ಓದಿ : ಕೊಲಂಬಿಯಾದ ರಕ್ಷಣಾ ಸಚಿವ ಕಾರ್ಲೋಸ್ ಕೋವಿಡ್ 19ಗೆ ಬಲಿ

Advertisement

Udayavani is now on Telegram. Click here to join our channel and stay updated with the latest news.

Next