Advertisement
ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಸಂಘಟಿತ ವಲಯದ ಕಾರ್ಮಿಕರಿಗೆ ಪರಿಹಾರ ನೀಡುವ ಕುರಿತು ಪೂರ್ವಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರದ ಮಾರ್ಗಸೂಚಿಯಂತೆ ಅಗಸರು, ûೌರಿಕರು, ದರ್ಜಿಗಳು, ಹಮಾಲಿ ಕಾರ್ಮಿಕರು, ಚಿಂದಿ ಆಯುವವರು, ಕುಂಬಾರರು, ಭಟ್ಟಿ ಕಾರ್ಮಿಕರು, ಅಕ್ಕಸಾಲಿಗರು, ಮೆಕ್ಯಾನಿಕ್‌ಗಳು, ಕಮ್ಮಾರರು ಹಾಗೂ ಗೃಹ ಕಾರ್ಮಿಕರು ಸೇರಿದಂತೆ 11ವಲಯದ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರಿಗೆ ಯೋಜನೆಯ ಮೂಲಕ ಒಂದು ಬಾರಿ ಪರಿಹಾರವಾಗಿ ಎರಡು ಸಾವಿರ ರೂ. ಗಳ ಆರ್ಥಿಕ ನೆರವು ನೀಡಲಾಗುತ್ತದೆ ಎಂದರು.
Related Articles
Advertisement
ಅರ್ಜಿ ಸಲ್ಲಿಕೆಗೆ ಷರತ್ತುಗಳು: ಪರವಾನಗಿ ಪಡೆದಿರುವ ಸಂಸ್ಥೆಯಲ್ಲಿ 4ಕ್ಕಿಂತ ಹೆಚ್ಚು ಕಾರ್ಮಿಕರು, ಪರವಾನಗಿ ಪಡೆಯದೇ ಇರುವ ಸಂಸ್ಥೆಯಲ್ಲಿ ಎರಡಕ್ಕಿಂತ ಹೆಚ್ಚು ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಅರ್ಜಿ ಸಲ್ಲಿಸಿದ್ದಲ್ಲಿ ತಪಾಸಣೆ ಕಡ್ಡಾಯವಾಗಿರುತ್ತದೆ. ಬೇರೆ ರಾಜ್ಯದ ಕಾರ್ಮಿಕರು ಸಹ ಪರಿಹಾರ ಪಡೆಯಲು ಅರ್ಹರಾಗಿರುತ್ತಾರೆ. ಆದರೆ ಅಂತಹ ಫಲಾನುಭವಿ ಕಾರ್ಮಿಕರು ಕರ್ನಾಟಕ ಸರ್ಕಾರ ನೀಡುವ ಬಿಪಿಎಲ್ ಕಾರ್ಡ್ ಹೊಂದಿರಬೇಕು. ಕುಟುಂಬದ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುವುದು. ಫಲಾನುಭವಿಗಳು ಸೇವಾ ಸಿಂಧು ಫೋರ್ಟಲ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿದಾರರ ವಯೋಮಿತಿಯನ್ನು 18-65 ವರ್ಷಕ್ಕೆ ಸೀಮಿತಗೊಳಿಸಲಾಗಿದೆ. ಈ ಯೋಜನೆಯ ಸೌಲಭ್ಯವನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ಅರ್ಜಿ ಸಲ್ಲಿಸುವ ಕಾರ್ಮಿಕರು ವೃತ್ತಿ ನಿರ್ವಹಿಸುತ್ತಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ಉದ್ಯೋಗ ಪ್ರಮಾಣ ಪತ್ರ ಪಡೆದಿರಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಮಾಹಿತಿ ನೀಡಿದರು.
ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯ ಕಂದಾಯ ಅಧಿಕಾರಿ, ಕಂದಾಯ ನಿರೀಕ್ಷಕರು, ತಾಲೂಕು ಮಟ್ಟದಲ್ಲಿ ಕಂದಾಯ ಇಲಾಖೆಯ ತಹಸೀಲ್ದಾರರು, ಉಪ ತಹಶೀಲ್ದಾರರು, ಕಂದಾಯ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರು, ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಹಮಾಲಿ ವೃತ್ತಿಯಲ್ಲಿ ತೊಡಗಿರುವ ಕಾರ್ಮಿಕರು ಮೇಲ್ಕಂಡ ಅಧಿಕಾರಿಗಳು ಅಥವಾ ತಾವು ಕೆಲಸ ನಿರ್ವಹಿಸುತ್ತಿರುವ ಇಲಾಖೆ, ಮಂಡಳಿ, ನಿಗಮದ ಅಧಿಕೃತ ಅಧಿಕಾರಿಗಳು, ಯಾವುದೇ ಇಲಾಖೆಯ ಪತ್ರಾಂಕಿತ ಅಧಿಕಾರಿಗಳಿಂದ ಉದ್ಯೋಗ ಪತ್ರ ಪಡೆಯಬಹುದು ಎಂದರು.
ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಫಲಾನುಭವಿ ಕಾರ್ಮಿಕರು ಸೇವಾಸಿಂಧು ಫೋರ್ಟಲ್‌ನಲ್ಲಿ ಮಾತ್ರ ಅಗತ್ಯ ಮಾಹಿತಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡುವುದು. ಆಧಾರ್ ಕಾರ್ಡ್, ವಿಳಾಸ ದೃಢೀಕರಣ, ಮೊಬೆ„ಲ್ ಸಂಖ್ಯೆ, ಜನ್ಮ ದಿನಾಂಕ, ಬಿಪಿಎಲ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಬ್ಯಾಂಕ್ ಖಾತೆಯ ವಿವರ, ಸ್ವಯಂ ಘೋಷಣೆ, ಅರ್ಜಿದಾರರ ವೃತ್ತಿಯ ಕುರಿತು ಉದ್ಯೋಗ ಪ್ರಮಾಣ ಪತ್ರಗಳನ್ನು ಸೇವಾ ಸಿಂಧು ಫೋರ್ಟಲ್‌ನಲ್ಲಿ ಸ್ಕಾನ್ ಮಾಡಿ ಅಪ್ಲೋಡ್ ಮಾಡಬೇಕು ಎಂದು ತಿಳಿಸಿದರು.
ಜಿಪಂ ಸಿಇಒ ಡಾ| ವಿಜಯಮಹಾಂತೇಶ ದಾನಮ್ಮನವರ್, ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕಿ ನಜ್ಮಾ ಜಿ., ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್ ಜಿ., ನಗರಸಭೆ ಪೌರಾಯುಕ್ತೆ ಲಕ್ಷ್ಮೀ ಎಸ್., ಎಪಿಎಂಸಿ ಕಾರ್ಯದರ್ಶಿ ಕೆ.ಸಿ. ದೊರೆಸ್ವಾಮಿ, ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಜೆ. ಪ್ರಭು ಸೇರಿದಂತೆ ವಿವಿಧ ವಲಯದ ಅಸಂಘಟಿತ ಕಾರ್ಮಿಕ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.