Advertisement

ಟ್ರ್ಯಾಕ್ಟರ್‌ ಪರೇಡ್‌ ಬೆಂಬಲಿಸಿ ಪ್ರತಿಭಟನೆ

03:02 PM Jan 27, 2021 | Team Udayavani |

ಜಗಳೂರು: ಕೃಷಿ ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ಟ್ರಾಕ್ಟರ್‌ ಪರೇಡ್‌ಗೆ ಬೆಂಬಲಿಸಿ ಕರ್ನಾಟಕ ರಾಜ್ಯರೈತ ಸಂಘ ಮತ್ತು ಹಸಿರುಸೇನೆ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಬೈಕ್‌ ಹಾಗೂ ಕಾಲ್ನಡಿಗೆ ಜಾಥಾ ಪ್ರಮುಖ ಬೀದಿಗಳ ಮೂಲಕ ಮಹಾತ್ಮಗಾಂಧಿ ವೃತ್ತ, ಅಂಬೇಡ್ಕರ್‌ ವೃತ್ತದ ಮೂಲಕ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್‌ ಡಾ| ನಾಗವೇಣಿ ಅವರಿಗೆ ಮನವಿ ಸಲ್ಲಿಸಿದರು.

Advertisement

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಚಿರಂಜೀವಿ ಸಿ.ಎಂ. ಹೊಳೆ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮೂರು ಸುಗ್ರೀವಾಜ್ಞೆಗಳನ್ನು ರದ್ದುಪಡಿಸಬೇಕು. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಜಾರಿಗೊಳಿಸಬೇಕು.
ಶೋಷಿತ ಬೆಲೆಗಿಂತ ಕಡಿಮೆ ಬೆಲೆಗೆ ಧಾನ್ಯ ಖರೀದಿಸುವವರ ಪರವಾನಗಿ ರದ್ದುಪಡಿಸಿ ಅಂತಹವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು. ಅಲ್ಲದೆ ಖಾಸಗೀಕರಣ ಪ್ರಕ್ರಿಯೆ ಕೈಬಿಡಬೇಕು ಎಂದು ಒತ್ತಾಯಿಸಿದರು.

ಎಐಟಿಯುಸಿ ತಾಲೂಕು ಕಾರ್ಯದರ್ಶಿ ಮಹಮ್ಮದ್‌ ಭಾಷಾ, ಭಿಮ್‌ ಆರ್ಮಿ ಸಂಘಟನೆ ತಾಲೂಕು ಅಧ್ಯಕ್ಷ ಹನುಮಂತಪ್ಪ, ಡಿಎಸ್‌ಎಸ್‌ ತಾಲೂಕು ಅಧ್ಯಕ್ಷ ಸತೀಶ್‌ ಮಲೆಮಾಚಿಕೆರೆ, ಪ್ರಗತಿಪರ ಒಕ್ಕೂಟದ ಧನ್ಯಕುಮಾರ್‌, ಎಚ್‌.ಎಂ ಹೊಳೆ, ರಾಜಪ್ಪ ವ್ಯಾಸಗೊಂಡನಹಳ್ಳಿ, ಮಂಜುನಾಥ್‌ ಇತರರಿದ್ದರು.

ಓದಿ :      ಡಾ| ಬಿ.ಆರ್‌. ಅಂಬೇಡ್ಕರ್ ಪುತ್ಥಳಿ ಅನಾವರಣ

Advertisement

Udayavani is now on Telegram. Click here to join our channel and stay updated with the latest news.

Next